69ನೇ ಸಿನಿಮಾ ಬಳಿಕ ಮತ್ತೆರಡು ಚಿತ್ರಗಳಲ್ಲಿ ನಟಿಸಲಿದ್ದಾರೆ ದಳಪತಿ ವಿಜಯ್?
ದಳಪತಿ ವಿಜಯ್ 68ನೇ ಸಿನಿಮಾ ‘GOAT’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ವೆಂಕಟ್ ಪ್ರಭು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಸಿನಿಮಾದ ಪೋಸ್ಟರ್ ಗಮನ ಸೆಳೆದಿದೆ. ಈ ಚಿತ್ರ ಈ ವರ್ಷವೇ ರಿಲೀಸ್ ಆಗಲಿದೆ. ಇದಾದ ಬಳಿಕ ಅಟ್ಲಿ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರೆ.
ದಳಪತಿ ವಿಜಯ್ (Thalapathy Vijay) ಅವರು ಸದ್ಯ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಅವರು ಈಗ ತಮ್ಮದೇ ಆದ ಪಕ್ಷ ಘೋಷಣೆ ಮಾಡಿದ್ದಾರೆ. 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆ ಮೇಲೆ ಅವರು ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ದಳಪತಿ ವಿಜಯ್ ಅವರ ಸಿನಿಮಾ ಬಗ್ಗೆ ಹೊಸದೊಂದು ಅಪ್ಡೇಟ್ ಸಿಕ್ಕಿದೆ. ‘ದಳಪತಿ 69’ ಬಳಿಕವೂ ಅವರು ಎರಡು ಸಿನಿಮಾಗಳಲ್ಲಿ ನಟಿಸಲಿದ್ದಾರಂತೆ!
ಸಿನಿಮಾ ರಂಗಕ್ಕೆ ಕಾಲಿಟ್ಟ ಬಳಿಕ ರಾಜಕೀಯಕ್ಕೆ ಎಂಟ್ರಿ ಕೊಟ್ಟ ತಮಿಳು ಕಲಾವಿದರ ಪಟ್ಟಿ ತುಂಬಾನೇ ದೊಡ್ಡದಿದೆ. ಈ ಸಾಲಿಗೆ ವಿಜಯ್ ಕೂಡ ಸೇರ್ಪಡೆ ಆಗುತ್ತಿದ್ದಾರೆ. ಸಿನಿಮಾ ರಂಗದಲ್ಲಿ ದೊಡ್ಡ ಗೆಲುವು ಕಂಡಿರುವ ಅವರು ಈಗ ರಾಜಕೀಯಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಸದ್ಯ ಅವರು ತಮ್ಮ 68ನೇ ಸಿನಿಮಾ ‘GOAT’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ವೆಂಕಟ್ ಪ್ರಭು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಸಿನಿಮಾದ ಪೋಸ್ಟರ್ ಗಮನ ಸೆಳೆದಿದೆ. ಈ ಚಿತ್ರ ಈ ವರ್ಷವೇ ರಿಲೀಸ್ ಆಗಲಿದೆ.
ಇದಾದ ಬಳಿಕ ದಳಪತಿ ವಿಜಯ್ ಅವರು ತಮ್ಮ 69ನೇ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಅಟ್ಲಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇವರದ್ದು ಹಿಟ್ ಕಾಂಬಿನೇಷನ್. ಇಬ್ಬರೂ ಮೂರು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದು, ನಾಲ್ಕನೇ ಬಾರಿಗೆ ಒಂದಾಗುತ್ತಿದ್ದಾರೆ. ಈ ಸಿನಿಮಾ ಮುಗಿದ ಬಳಿಕ ಅವರು ಕೆಲವು ಚಿತ್ರಗಳಲ್ಲಿ ಅತಿಥಿ ಪಾತ್ರ ಮಾಡಲಿದ್ದಾರೆ ಎಂದು ವರದಿ ಆಗಿದೆ. ಆ ಬಳಿಕ ಅವರು ಸಂಪೂರ್ಣವಾಗಿ ಚಿತ್ರರಂಗ ತೊರೆಯಲಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಕಳೆದ ವರ್ಷ ರಿಲೀಸ್ ಆದ ವಿಜಯ್ ನಟನೆಯ ‘ಲಿಯೋ’ ವಿಮರ್ಶೆಯಲ್ಲಿ ಮಿಶ್ರಪ್ರತಿಕ್ರಿಯೆ ಪಡೆಯಿತು. ಆದರೆ, ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಕಮಾಯಿ ಮಾಡಿದೆ. ಈ ಸಿನಿಮಾ ಇನ್ನೂ ಉತ್ತಮವಾಗಿ ಮೂಡಿರಬಹುದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ‘GOAT’ ಚಿತ್ರದಲ್ಲಿ ವಿಜಯ್ ಅವರದ್ದು ದ್ವಿಪಾತ್ರ ಎನ್ನಲಾಗಿದೆ.
ಇದನ್ನೂ ಓದಿ: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ, ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ
‘ತಮಿಳಗ ವೆಟ್ರಿ ಕಳಗಂ’ ಎಂಬುದು ಪಕ್ಷದ ಹೆಸರು. ಅವರು ರಾಜಕೀಯದಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳಲು ಚಿತ್ರರಂಗವನ್ನು ಸಂಪೂರ್ಣವಾಗಿ ತೊರೆಯುವ ಆಲೋಚನೆಯಲ್ಲಿ ಇದ್ದಾರೆ. ಈ ಮೊದಲು ರಜನಿಕಾಂತ್ ರಾಜಕೀಯಕ್ಕೆ ಬರುವ ಆಲೋಚನೆ ಮಾಡಿದ್ದರು. ಆದರೆ, ಇದರಿಂದ ಹಿಂದೆ ಸರಿದರು. ಕಮಲ್ ಹಾಸನ್ ಚಿತ್ರರಂಗದಲ್ಲಿ ತೊಡಗಿಕೊಳ್ಳುವುದರ ಜೊತೆಗೆ ರಾಜಕೀಯದಲ್ಲೂ ಬ್ಯುಸಿ ಇದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ