ಕೊನೆಯ ಚಿತ್ರಕ್ಕಾಗಿ 250 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ ದಳಪತಿ ವಿಜಯ್?

ವಿಜಯ್ ಅವರು ಪ್ರತಿ ಚಿತ್ರಕ್ಕೆ 150 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ‘GOAT’ ಚಿತ್ರದಲ್ಲಿ ಅವರದ್ದು ದ್ವಿಪಾತ್ರ. ಹೀಗಾಗಿ ಅವರು ಬರೋಬ್ಬರಿ 200 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಅವರ ಕೊನೆಯ ಚಿತ್ರಕ್ಕೆ 250 ಕೋಟಿ ರೂಪಾಯಿ ಪಡೆಯಲಿದ್ದಾರಂತೆ.

ಕೊನೆಯ ಚಿತ್ರಕ್ಕಾಗಿ 250 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ ದಳಪತಿ ವಿಜಯ್?
ವಿಜಯ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Mar 22, 2024 | 7:51 AM

ದಳಪತಿ ವಿಜಯ್ ಅವರು ಸದ್ಯ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ವೆಂಕಟ್ ಪ್ರಭು ನಿರ್ದೇಶದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ (GOAT) ಚಿತ್ರದ ಕೆಲಸದಲ್ಲಿ ಅವರು ಬ್ಯುಸಿ ಇದ್ದಾರೆ. ಈ ಮಧ್ಯೆ ವಿಜಯ್ ಅವರ ಕೊನೆಯ ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ‘GOAT’ ಅವರ ನಟನೆಯ 68ನೇ ಚಿತ್ರ. ‘Thalapathy 69’ ವಿಜಯ್ ನಟನೆಯ ಕೊನೆಯ ಸಿನಿಮಾ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ಅವರು ಬರೋಬ್ಬರಿ 250 ಕೋಟಿ ರೂಪಾಯಿ ಪಡೆಯಲಿದ್ದಾರೆ ಎಂದು ವರದಿ ಆಗಿದೆ.

ವಿಜಯ್ ಅವರ ಸಿನಿಮಾಗಳು ಒಳ್ಳೆಯ ಬಿಸ್ನೆಸ್ ಮಾಡುತ್ತವೆ. ಅವರ ನಟನೆಯ ‘ಲಿಯೋ’ ಚಿತ್ರ ವಿಮರ್ಶೆಯಲ್ಲಿ ಸೋತ ಹೊರತಾಗಿಯೂ ವಿಶ್ವಾದ್ಯಂತ 600 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಇಷ್ಟು ದೊಡ್ಡ ಕಲೆಕ್ಷನ್ ಮಾಡೋದು ಎಂದರೆ ಅದು ಸುಲಭದ ವಿಚಾರ ಅಲ್ಲವೇ ಅಲ್ಲ. ಇದರ ಜೊತೆಗೆ ಟಿವಿ ಹಾಗೂ ಒಟಿಟಿ ಹಕ್ಕುಗಳು ದೊಡ್ಡ ಮೊತ್ತಕ್ಕೆ ಮಾರಾಟ ಆಗುತ್ತವೆ. ಈ ಕಾರಣದಿಂದಲೇ ವಿಜಯ್ ಅವರಿಗೆ ದೊಡ್ಡ ಸಂಭಾವನೆ ನೀಡಲು ನಿರ್ಮಾಪಕರು ಹೆಚ್ಚು ಯೋಚಿಸುವುದಿಲ್ಲ.

ವಿಜಯ್ ಅವರು ಪ್ರತಿ ಚಿತ್ರಕ್ಕೆ 150 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ‘GOAT’ ಚಿತ್ರದಲ್ಲಿ ಅವರದ್ದು ದ್ವಿಪಾತ್ರ. ಹೀಗಾಗಿ ಅವರು ಬರೋಬ್ಬರಿ 200 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಅವರ ಕೊನೆಯ ಚಿತ್ರಕ್ಕೆ 250 ಕೋಟಿ ರೂಪಾಯಿ ಪಡೆಯಲಿದ್ದಾರಂತೆ. ವಿಜಯ್ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬಂದು ಸಿನಿಮಾ ನೋಡುತ್ತಾರೆ.

ಮತ್ತೊಂದು ಕಡೆ ಈ ಚಿತ್ರವನ್ನು ಯಾರು ನಿರ್ದೇಶನ ಹಾಗೂ ನಿರ್ಮಾಣ ಮಾಡುತ್ತಾರೆ ಎನ್ನುವ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ. ‘ಆರ್​ಆರ್​ಆರ್’ ಚಿತ್ರವನ್ನು ನಿರ್ಮಾಣ ಮಾಡಿದ್ದ ಡಿವಿವಿ ದಾನಯ್ಯ ಅವರು ಈ ಚಿತ್ರ ನಿರ್ಮಾಣ ಮಾಡಲು ಮುಂದೆ ಬಂದಿದ್ದಾರೆ. ಈ ಚಿತ್ರ ದೊಡ್ಡ ಮೊತ್ತದಲ್ಲಿ ನಿರ್ಮಾಣ ಆಗಲಿದೆ. ಇನ್ನು ಈ ಚಿತ್ರಕ್ಕೆ ಎಚ್​. ವಿನೋದ್ ಅಥವಾ ಅಟ್ಲಿ ನಿರ್ದೇಶನ ಮಾಡುತ್ತಾರೆ ಎಂದು ವರದಿ ಇದೆ.

ಅಟ್ಲಿ ಹಾಗೂ ವಿಜಯ್ ಮಧ್ಯೆ ಒಳ್ಳೆಯ ಕಾಂಬಿನೇಷನ್ ಇದೆ. ಈ ಮೊದಲು ಮೂರು ಬಾರಿ ಇವರು ಒಟ್ಟಾಗಿ ಕೆಲಸ ಮಾಡಿದ್ದರು. ಈಗ ನಾಲ್ಕನೇ ಚಿತ್ರಕ್ಕಾಗಿ ಇವರು ಒಂದಾಗುತ್ತಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರ ಬರಬೇಕಿದೆ.

ಇದನ್ನೂ ಓದಿ: ಹೋಟೆಲ್ ಹೊರಗೆ ವಿಜಯ್ ಹೆಸರು ಕೂಗಿದ ಫ್ಯಾನ್ಸ್; ‘ದಳಪತಿ’ ಮಾಡಿದ್ದೇನು ನೋಡಿ

ಸದ್ಯ ವಿಜಯ್ ಅವರು ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಶೂಟಿಂಗ್​ಗಾಗಿ ಕೇರಳದಲ್ಲಿ ಇದ್ದಾರೆ. ವಿಜಯ್ ಅವರನ್ನು ನೋಡಲು ಫ್ಯಾನ್ಸ್ ಮುತ್ತಿಗೆ ಹಾಕುತ್ತಿದ್ದಾರೆ. ಇತ್ತೀಚೆಗೆ ಅಭಿಮಾನಿಗಳು ಕಾರಿನ ಬಳಿ ನುಗ್ಗಿದ್ದರಿಂದ ಕಾರಿನ ಬಲಭಾಗ ಜಖಂಗೊಂಡಿತ್ತು. ಈ ವಿಡಿಯೋಗಳು ವೈರಲ್ ಆಗಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ