‘ತುನಿವು’ ಮತ್ತು ‘ವಾರಿಸು’ ಚಿತ್ರಗಳಲ್ಲಿ ಮೊದಲ ದಿನ ಗೆದ್ದಿದ್ಯಾರು? ಇಲ್ಲಿದೆ ಬಾಕ್ಸ್ ಆಫೀಸ್ ಕಲೆಕ್ಷನ್ ಲೆಕ್ಕಾಚಾರ

ಅಜಿತ್ ಹಾಗೂ ವಿಜಯ್ ಅಭಿಮಾನಿಗಳ ಮಧ್ಯೆ ಮೊದಲಿನಿಂದಲೂ ಶೀತಲ ಸಮರ ನಡೆಯುತ್ತಲೇ ಇದೆ. ಈಗ ಎರಡೂ ಹೀರೋಗಳ ಸಿನಿಮಾಗಳು ಒಟ್ಟಿಗೆ ರಿಲೀಸ್ ಆಗಿರುವುದರಿಂದ ಸಹಜವಾಗಿಯೇ ಸಾಕಷ್ಟು ಸ್ಪರ್ಧೆ ಇತ್ತು.

‘ತುನಿವು’ ಮತ್ತು ‘ವಾರಿಸು’ ಚಿತ್ರಗಳಲ್ಲಿ ಮೊದಲ ದಿನ ಗೆದ್ದಿದ್ಯಾರು? ಇಲ್ಲಿದೆ ಬಾಕ್ಸ್ ಆಫೀಸ್ ಕಲೆಕ್ಷನ್ ಲೆಕ್ಕಾಚಾರ
ಅಜಿತ್​-ವಿಜಯ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 12, 2023 | 10:33 AM

ಪ್ರತಿ ವರ್ಷ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಬಾಕ್ಸ್ ಆಫೀಸ್​ ಕ್ಲ್ಯಾಶ್ ಆಗುತ್ತದೆ. ದಕ್ಷಿಣ ಭಾರತದವರಿಗೆ ಈ ಹಬ್ಬ ವಿಶೇಷ ಆಗಿರುವುದರಿಂದ ಕನ್ನಡ, ತೆಲುಗು, ತಮಿಳು, ಮಲಯಾಳಂನಲ್ಲಿ ಸಾಕಷ್ಟು ಸಿನಿಮಾಗಳು ರಿಲೀಸ್ ಆಗುತ್ತವೆ. ಈ ವರ್ಷವೂ ಅದು ಮುಂದುವರಿದಿದೆ. ಕಾಲಿವುಡ್​ನಲ್ಲಿ ದಳಪತಿ ವಿಜಯ್ ನಟನೆಯ ‘ವಾರಿಸು’ (Varisu) ಹಾಗೂ ಅಜಿತ್ ಕುಮಾರ್ ಅಭಿನಯದ  ತುನಿವು’ (Thunivu) ಜನವರಿ 11ರಂದು ರಿಲೀಸ್ ಆದವು. ಈ ಚಿತ್ರಗಳ ಮೊದಲ ದಿನದ ಕಲೆಕ್ಷನ್ ಲೆಕ್ಕಾಚಾರ ಸಿಕ್ಕಿದೆ. ಗಳಿಕೆ ವಿಚಾರದಲ್ಲಿ ಅಜಿತ್ ಸಿನಿಮಾಗಿಂತ ವಿಜಯ್ ಸಿನಿಮಾ 50 ಲಕ್ಷ ರೂಪಾಯಿ ಮುಂದಿದೆ.

ಅಜಿತ್ ಹಾಗೂ ವಿಜಯ್ ಅಭಿಮಾನಿಗಳ ಮಧ್ಯೆ ಮೊದಲಿನಿಂದಲೂ ಶೀತಲ ಸಮರ ನಡೆಯುತ್ತಲೇ ಇದೆ. ಈಗ ಎರಡೂ ಹೀರೋಗಳ ಸಿನಿಮಾಗಳು ಒಟ್ಟಿಗೆ ರಿಲೀಸ್ ಆಗಿರುವುದರಿಂದ ಸಹಜವಾಗಿಯೇ ಸಾಕಷ್ಟು ಸ್ಪರ್ಧೆ ಇತ್ತು. ನೆಚ್ಚಿನ ಹೀರೋನ ಸಿನಿಮಾ ಗೆಲ್ಲಿಸಲು ವಿಜಯ್ ಹಾಗೂ ಅಜಿತ್ ಫ್ಯಾನ್ಸ್ ಪ್ರಯತ್ನಿಸಿದ್ದಾರೆ. ಮೊದಲ ದಿನದ ಗಳಿಕೆಯಲ್ಲಿ ದಳಪತಿ ವಿಜಯ್ ಮೇಲುಗೈ ಸಾಧಿಸಿದ್ದಾರೆ.

‘ತುನಿವು’ ಸಿನಿಮಾ ಭಾರತದಲ್ಲಿ 26 ಕೋಟಿ ರೂಪಾಯಿ ಗಳಿಕೆ ಮಾಡಿದೆ. ‘ವಾರಿಸು’ ಸಿನಿಮಾ 26.50 ಕೋಟಿ ರೂ. ಬಾಚಿಕೊಂಡಿದೆ. ತಮಿಳುನಾಡು ಬಾಕ್ಸ್ ಆಫೀಸ್​ನಲ್ಲಿ ‘ತುನಿವು’ ಮೇಲುಗೈ ಸಾಧಿಸಿದೆ. ಈ ಚಿತ್ರ ತಮಿಳುನಾಡಿನಲ್ಲಿ 18 ಕೋಟಿ ರೂಪಾಯಿ ಗಳಿಕೆ ಮಾಡಿದರೆ, ‘ವಾರಿಸು’17 ಕೋಟಿ ರೂಪಾಯಿಗೆ ಮೊದಲ ದಿನದ ಆಟ ಮುಗಿಸಿದೆ.

ಇದನ್ನೂ ಓದಿ
Image
Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​
Image
Katrina Kaif: ‘ದಳಪತಿ’ ವಿಜಯ್​ ಚಿತ್ರದ ಹಾಡಿಗೆ ಶಾಲಾ ಮಕ್ಕಳ ಜತೆ ಕತ್ರಿನಾ ಕೈಫ್ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ಗೆ ಹಿನ್ನಡೆ; ಚಿತ್ರರಂಗಕ್ಕೆ ದಳಪತಿ ವಿಜಯ್​ ಮಗನ ಎಂಟ್ರಿ ಬಗ್ಗೆ ಟಾಕ್​ ಶುರು

ವಿಜಯ್ ಹಾಗೂ ಅಜಿತ್ ಕುಮಾರ್ ಸಿನಿಮಾಗಳು ಒಂದೇ ರೀತಿಯ ವಿಮರ್ಶೆ ಪಡೆದಿವೆ. ಬಾಕ್ಸ್ ಆಫೀಸ್​​ನಲ್ಲೂ ಸಮಬಲದ ಕಾದಾಟ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಸಿನಿಪ್ರಿಯರು ಯಾವ ಚಿತ್ರವನ್ನು ಗೆಲ್ಲಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Varisu Movie Review: ಇವ ಎಂಟರ್​​ಟೇನರ್ ವಾರಸುದಾರ; ಎಳೆದಾಟವೇ ಪ್ರೇಕ್ಷಕನಿಗೆ ಭಾರ

ಹಬ್ಬದ ಸಮಯವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಥಿಯೇಟರ್​ಗೆ ತೆರಳುತ್ತಾರೆ. ಹೀಗಾಗಿ, ಭಾನುವಾರದವರೆಗೆ (ಜನವರಿ 15) ಎರಡೂ ಸಿನಿಮಾಗಳು ಅಬ್ಬರದ ಕಲೆಕ್ಷನ್ ಮಾಡಬಹುದು. ಅಂತಿಮವಾಗಿ ಯಾವ ಸಿನಿಮಾಗೆ ಹೆಚ್ಚು ಪ್ರೇಕ್ಷಕರು ತೆರಳುತ್ತಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:29 am, Thu, 12 January 23

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ