ದಳಪತಿ ವಿಜಯ್ ರಾಜಕೀಯಕ್ಕೆ ಬರುವುದು ಮತ್ತಷ್ಟು ಸನಿಹ; ನಡೆಯಿತು ಪ್ರಮುಖ ಬೆಳವಣಿಗೆ

‘ವಿಜಯ್ ಮಕ್ಕಳ್ ಇಯಕ್ಕಮ್’ ಸಂಘದ ಅಧ್ಯಕ್ಷರಾಗಿ ವಿಜಯ್ ನೇಮಕಗೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಯಾರೂ ರೇಸ್​ನಲ್ಲಿ ಇರಲಿಲ್ಲ. ಸರ್ವಾನುಮತದಿಂದ ಪಕ್ಷದವರು ವಿಜಯ್​ಗೆ ವೋಟ್ ಹಾಕಿದ್ದಾರೆ. ಪಕ್ಷದ ಪ್ರಮುಖ ಸ್ಥಾನಗಳನ್ನು ಕೂಡ ತುಂಬಲಾಗಿದೆ. ಹೀಗಾಗಿ, ಅಧಿಕೃತ ಘೋಷಣೆ ಹತ್ತಿರವಾಗಿದೆ ಎಂದು ಹೇಳಲಾಗುತ್ತಿದೆ. ‘ವಿಜಯ್ ಮಕ್ಕಳ್ ಇಯಕ್ಕಮ್’ನ ಶೀಘ್ರವೇ ಪಕ್ಷವಾಗಿ ಘೋಷಿಸುವ ಸಾಧ್ಯತೆ ಇದೆ.

ದಳಪತಿ ವಿಜಯ್ ರಾಜಕೀಯಕ್ಕೆ ಬರುವುದು ಮತ್ತಷ್ಟು ಸನಿಹ; ನಡೆಯಿತು ಪ್ರಮುಖ ಬೆಳವಣಿಗೆ
ದಳಪತಿ ವಿಜಯ್
Follow us
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​

Updated on: Jan 27, 2024 | 4:06 PM

ತಮಿಳು ಚಿತ್ರರಂಗದಲ್ಲಿ ಮಿಂಚಿದ ಬಳಿಕ ಅನೇಕರು ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಈ ಸಾಲಿಗೆ ತಮಿಳು ನಟ ದಳಪತಿ ವಿಜಯ್ (Thalapathy Vijay) ಕೂಡ ಸೇರ್ಪಡೆ ಆಗುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ಹೊರ ಬೀಳೋ ಸಾಧ್ಯತೆ ಇದೆ. ದಳಪತಿ ವಿಜಯ್ ಅವರ ಪಾಳಯದಲ್ಲಿ ಕೆಲವು ಪ್ರಮುಖ ಬೆಳವಣಿಗೆಗಳು ನಡೆದಿವೆ. ಇದರಿಂದ ವಿಜಯ್ ಅವರು ರಾಜಕೀಯಕ್ಕೆ (Tamil Nadu Politics) ಬರೋದು ತುಂಬಾನೇ ಸನಿಹದಲ್ಲಿದೆ. ಜನರು ಅವರನ್ನು ರಾಜಕೀಯ ನಾಯಕನನ್ನಾಗಿ ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ದಳಪತಿ ವಿಜಯ್ ಅವರು ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆ, ತಮ್ಮದೇ ಪಕ್ಷ ಸ್ಥಾಪನೆ ಮಾಡುತ್ತಾರೆ ಅನ್ನೋದು ಮೊದಲಿನಿಂದಲೂ ಹರಿದಾಡುತ್ತಿರುವ ಸುದ್ದಿ. ಇದಕ್ಕೆ ಪೂರಕವಾಗಿ ಅವರು ಇತ್ತೀಚೆಗೆ ಸಾಕಷ್ಟು ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಕಾರಣದಿಂದಲೇ ಅವರು ಈ ರೀತಿ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟ. ಈಗ ಅವರು ರಾಜಕೀಯಕ್ಕೆ ಬರೋದು ಬಹುತೇಕ ಖಚಿತವಾಗಿದೆ.

‘ವಿಜಯ್ ಮಕ್ಕಳ್ ಇಯಕ್ಕಮ್’ ಸಂಘದ ಅಧ್ಯಕ್ಷರಾಗಿ ವಿಜಯ್ ನೇಮಕಗೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಯಾರೂ ರೇಸ್​ನಲ್ಲಿ ಇರಲಿಲ್ಲ. ಸರ್ವಾನುಮತದಿಂದ ಪಕ್ಷದವರು ವಿಜಯ್​ಗೆ ವೋಟ್ ಹಾಕಿದ್ದಾರೆ. ಪಕ್ಷದ ಪ್ರಮುಖ ಸ್ಥಾನಗಳನ್ನು ಕೂಡ ತುಂಬಲಾಗಿದೆ. ಹೀಗಾಗಿ, ಅಧಿಕೃತ ಘೋಷಣೆ ಹತ್ತಿರವಾಗಿದೆ ಎಂದು ಹೇಳಲಾಗುತ್ತಿದೆ. ‘ವಿಜಯ್ ಮಕ್ಕಳ್ ಇಯಕ್ಕಮ್’ನ ಶೀಘ್ರವೇ ಪಕ್ಷವಾಗಿ ಘೋಷಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ದಳಪತಿ ವಿಜಯ್ ಹೊಸ ಸಿನಿಮಾ ಹೆಸರು ಘೋಷಣೆ, ಇದು ಆಕಾಶದಲ್ಲಿ ನಡೆವ ಕತೆ

‘ಲಾಲ್ ಸಲಾಂ’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ವೇಳೆ ರಜನಿಕಾಂತ್ ಕೂಡ ಈ ವಿಚಾರವನ್ನು ಅಧಿಕೃತ ಮಾಡಿದ್ದರು. ‘ತಮಿಳುನಾಡು ಜನತೆಗಾಗಿ ವಿಜಯ್ ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ’ ಎಂದು ಹೇಳಿದ್ದರು. ಈ ಮೂಲಕ ಅವರು ರಾಜಕೀಯಕ್ಕೆ ಕಾಲಿಡೋದು ಹೌದು ಎಂಬುದನ್ನು ಖಚಿತಪಡಿಸಿದ್ದರು. ಈ ಮೊದಲು ರಜನಿಕಾಂತ್ ಪಕ್ಷ ಸ್ಥಾಪನೆ ಮಾಡಲು ಮುಂದಾಗಿದ್ದರು. ಆ ಬಳಿಕ ಆ ನಿರ್ಧಾರದಿಂದ ಹೊರ ಬಂದರು.

ಕಳೆದ ವರ್ಷ ರಿಲೀಸ್ ಆದ ದಳಪತಿ ವಿಜಯ್ ನಟನೆಯ ‘ಲಿಯೋ’ ಸಿನಿಮಾ ವಿಮರ್ಶೆಯಲ್ಲಿ ಸಾಧಾರಣ ಎನಿಸಿಕೊಂಡಿತು. ಇದು ಅವರ ವೃತ್ತಿ ಜೀವನದ ಕೊನೆಯ ಸಿನಿಮಾ ಆಗಲಿದೆ ಎಂದೇ ಹೇಳಲಾಗಿತ್ತು. ಅಚ್ಚರಿ ಎಂಬಂತೆ ಅವರು ‘GOAT’ ಸಿನಿಮಾ ಘೋಷಿಸಿದರು. ಈ ಚಿತ್ರದಲ್ಲಿ ಅವರು ಡಬಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವೆಂಕಟ್ ಪ್ರಭು ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿ ಎಲ್ಲರ ಗಮನ ಸೆಳೆಯಲಾಯಿತು. ಈ ವರ್ಷವೇ ಸಿನಿಮಾ ರಿಲೀಸ್ ಆಗಲಿದೆ. ಮತ್ತೆ ಅವರು ಚಿತ್ರರಂಗದಲ್ಲಿ ಮುಂದುವರಿಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್