ಚುನಾವಣೆ ಫಲಿತಾಂಶದ ಮೇಲೆ ದಳಪತಿ ವಿಜಯ್ ಸಿನಿಮಾ ಭವಿಷ್ಯ ನಿರ್ಧಾರ

ದಳಪತಿ ವಿಜಯ್ ರಾಜಕೀಯ ಪ್ರವೇಶಿಸಿ, ಟಿವಿಕೆ ಪಕ್ಷದ ಮೂಲಕ ತಮಿಳುನಾಡು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅವರ ಸಿನಿಮಾ ಭವಿಷ್ಯವು ಈ ಚುನಾವಣಾ ಫಲಿತಾಂಶದ ಮೇಲೆ ನಿಂತಿದೆ. ರಾಜಕೀಯ ಯಶಸ್ಸು ಸಿಗದಿದ್ದರೆ, ವರ್ಷಕ್ಕೆ ಎರಡು ಸಿನಿಮಾಗಳನ್ನು ಮಾಡುವ ಯೋಜನೆಯಿದೆ. ರಾಜಕೀಯದಲ್ಲಿ ಹಿನ್ನಡೆಯಾದರೆ ಅಟ್ಲಿ ನಿರ್ದೇಶನದ ಸಿನಿಮಾ ಕೂಡ ಅಕ್ಟೋಬರ್‌ನಲ್ಲಿ ಘೋಷಣೆಯಾಗುವ ಸಾಧ್ಯತೆಯಿದೆ.

ಚುನಾವಣೆ ಫಲಿತಾಂಶದ ಮೇಲೆ ದಳಪತಿ ವಿಜಯ್ ಸಿನಿಮಾ ಭವಿಷ್ಯ ನಿರ್ಧಾರ
ವಿಜಯ್
Image Credit source: news lankasri

Updated on: Mar 25, 2026 | 1:08 PM

ದಳಪತಿ ವಿಜಯ್ ಕೊನೆಯ ಸಿನಿಮಾ ಎನ್ನಲಾಗಿದ್ದ ‘ಜನ ನಾಯಗನ್’ ರಿಲೀಸ್​​ಗೆ ಅಭಿಮಾನಿಗಳು ಕಾದಿದ್ದರು. ಆದರೆ, ಸಿನಿಮಾ ಸದ್ಯಕ್ಕಂತೂ ರಿಲೀಸ್ ಆಗೋದು ಅನುಮಾನವೇ. ಸದ್ಯ ವಿಜಯ್ ಅವರು ತಮಿಳುನಾಡು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅವರು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರ ಸಿನಿಮಾ ಭವಿಷ್ಯ ಈಗಲೇ ಮುಗಿದಿಲ್ಲ ಎಂದು ಹೇಳಲಾಗುತ್ತಾ ಇದೆ. ಚುನಾವಣೆ ಫಲಿತಾಂಶ ಎಲ್ಲವನ್ನೂ ನಿರ್ಧಾರ ಮಾಡಲಿದೆ.

ವಿಜಯ್ ಅವರು ರಾಜಕೀಯಕ್ಕೆ ಕಾಲಿಡಬೇಕು ಎಂದು ನಿರ್ಧರಿಸಿಯಾಗಿದೆ. ಟಿವಿಕೆ ಹೆಸರಿನ ಪಕ್ಷ ಸ್ಥಾಪಿಸಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಅವರ ಪಕ್ಷ ತಮಿಳುನಾಡಿನಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸುವ ಗುರಿ ಹೊಂದಿದ್ದಾರೆ. ದಳಪತಿ ವಿಜಯ್​​ಗೆ ರಾಜಕೀಯ ಹೊಸದು. ಅವರು ತಮ್ಮ ಜನಪ್ರಿಯತೆ ಬಳಸಿ ಮೊದಲ ಚುನಾವಣೆಯಲ್ಲೇ ಗೆದ್ದೇ ಬಿಡುತ್ತಾರೆ ಎಂದು ಹೇಳೋದು ಕಷ್ಟ.

ಒಂದೊಮ್ಮೆ ಟಿವಿಕೆ ಪಕ್ಷ ಚುನಾವಣೆಯಲ್ಲಿ ಬಹುಮತ ಪಡೆದರೆ ವಿಜಯ್ ತಮಿಳುನಾಡು ಸಿಎಂ ಆಗಲಿದ್ದಾರೆ. ಒಂದೊಮ್ಮೆ ರಾಜಕೀಯ ಕೈ ಹಿಡಿಯದೇ ಇದ್ದರೆ ಮುಂದಿನ ಐದು ವರ್ಷಗಳ ಕಾಲ ಅವರು ವರ್ಷಕ್ಕೆ ಎರಡು ಸಿನಿಮಾಗಳನ್ನು ಮಾಡುವ ಗುರಿ ಹೊಂದಿದ್ದಾರೆ. ಈ ವೇಳೆ ಅವರು ಹಿಂಬದಿಯಲ್ಲಿ ಪಕ್ಷ ಬೆಳೆಸುವ ಕಾರ್ಯವನ್ನೂ ಮಾಡಲಿದ್ದಾರೆ.

ಇದನ್ನೂ ಓದಿ: ಇಫ್ತಾರ್​​ಕೂಟದಲ್ಲಿ ಭಾಗಿ ಆದ ದಳಪತಿ ವಿಜಯ್; ವಿವಾದದಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ

ಅಟ್ಲಿ ಅವರು ಸದ್ಯ ಅಲ್ಲು ಅರ್ಜುನ್ ಸಿನಿಮಾದ ನಿರ್ದೇಶನದಲ್ಲಿ ಬ್ಯುಸಿ ಇದ್ದಾರೆ. ಒಂದೊಮ್ಮೆ ವಿಜಯ್ ರಾಜಕೀಯ ಭವಿಷ್ಯ ಅತಂತ್ರವಾದರೆ ಅಟ್ಲಿ ಜೊತೆ ವಿಜಯ್ ಸಿನಿಮಾ ಮಾಡುವ ಸಾಧ್ಯತೆ ಇದೆಯಂತೆ. ರಾಜಕೀಯದಲ್ಲಿ ಯಶಸ್ಸು ಸಿಗದೆ ಇದ್ದರೆ ಅಕ್ಟೋಬರ್​ ಅಲ್ಲಿ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ.
ವಿಜಯ್ ಅವರು ಟಿವಿಕೆ ಪಕ್ಷ ಕಟ್ಟಿ ಅದನ್ನು ಬೆಳೆಸುತ್ತಿದ್ದಾರೆ. ಕರೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ. ಈ ಪ್ರಕರಣದಲ್ಲಿ ಅವರು ಇನ್ನೂ ತನಿಖೆ ಎದುರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us