AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗಕ್ಕೆ ವಿಜಯ್ ಗುಡ್​​ಬೈ? ‘ಜನ ನಾಯಗನ್’ ಚಿತ್ರಕ್ಕೆ ಹೆಚ್ಚಿತು ಮೈಲೇಜ್

ದಳಪತಿ ವಿಜಯ್ ರಾಜಕೀಯ ಪ್ರವೇಶಿಸಿ, ತಮಿಳುನಾಡು ಮುಖ್ಯಮಂತ್ರಿ ಗದ್ದುಗೆ ಏರುವ ಹಾದಿಯಲ್ಲಿದ್ದಾರೆ. 'ಜನ ನಾಯಗನ್' ಚಿತ್ರದ ರಾಜಕೀಯ ವಿಡಂಬನೆಗಳಿಂದ ಎದುರಿಸಿದ ಅಡೆತಡೆಗಳು ಅವರಿಗೆ ರಾಜಕೀಯ ಮೈಲೇಜ್ ನೀಡಿದವು. ಇದೀಗ ಅವರು ಚಿತ್ರರಂಗಕ್ಕೆ ವಿದಾಯ ಹೇಳುವ ಸಾಧ್ಯತೆಯಿದ್ದು, ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಕಾಲಿವುಡ್‌ಗೆ ನಷ್ಟವಾದರೂ, ತಮಿಳುನಾಡು ರಾಜಕೀಯಕ್ಕೆ ಹೊಸ ಭರವಸೆಯ ನಾಯಕ ಸಿಕ್ಕಂತಾಗಿದೆ. ಅವರ ಯಶಸ್ಸು 'ಜನ ನಾಯಗನ್' ಚಿತ್ರಕ್ಕೂ ಮೈಲೇಜ್ ತಂದುಕೊಟ್ಟಿದೆ.

ಚಿತ್ರರಂಗಕ್ಕೆ ವಿಜಯ್ ಗುಡ್​​ಬೈ? ‘ಜನ ನಾಯಗನ್’ ಚಿತ್ರಕ್ಕೆ ಹೆಚ್ಚಿತು ಮೈಲೇಜ್
ವಿಜಯ್
ರಾಜೇಶ್ ದುಗ್ಗುಮನೆ
|

Updated on:May 04, 2026 | 1:20 PM

Share

ತಮಿಳುನಾಡು ಚಿತ್ರರಂಗದ ಇತಿಹಾಸವನ್ನು ಒಮ್ಮೆ ತೆಗೆದು ನೋಡಿದರೆ ಇಂದಿನ ನಟ ದಳಪತಿ ವಿಜಯ್ ಅವರ ಗೆಲುವು ಹೆಚ್ಚು ಅಚ್ಚರಿ ತರುವುದಿಲ್ಲ. ಈಗಾಗಲೇ ಅನೇಕ ಚಿತ್ರರಂಗದ ಗಣ್ಯರು ಅಲ್ಲಿನ ರಾಜಕೀಯದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ಇಲ್ಲಿ ಅಚ್ಚರಿ ತರುತ್ತಿರುವುದು ಎಕ್ಸಿಟ್ ಪೋಲ್ ಲೆಕ್ಕಾಚಾರವನ್ನು ವಿಜಯ್ ಸಂಪೂರ್ಣವಾಗಿ ಉಲ್ಟಾ ಮಾಡಿದ್ದು. ದಳಪತಿ ವಿಜಯ್ ಅವರ ಹಾದಿ ಇತರರಿಗಿಂತ ಭಿನ್ನ ಮತ್ತು ಸವಾಲುಗಳಿಂದ ಕೂಡಿತ್ತು. ಇಂದು ಅವರು ಮುಖ್ಯಮಂತ್ರಿ ಗದ್ದುಗೆಯ ಸನಿಹದಲ್ಲಿ ನಿಂತಿದ್ದಾರೆ. ಅವರ ರಾಜಕೀಯ ಯಶಸ್ಸಿನಿಂದ ಚಿತ್ರರಂಗಕ್ಕೆ ಗುಡ್​​ಬೈ ಹೇಳೋದು ಬಹುತೇಕ ಖಚಿತ ಎಂಬಂತಾಗಿದೆ.

ವಿಜಯ್ ಅವರ ಸಿನಿಮಾಗಳು ಕಳೆದ ದಶಕದಿಂದ ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ಅವರ ಚಿತ್ರಗಳಲ್ಲಿನ ರಾಜಕೀಯ ವಿಡಂಬನೆ ಮತ್ತು ಸಮಾಜದ ಅಂಕುಡೊಂಕುಗಳ ಬಗೆಗಿನ ಧ್ವನಿ ಆಡಳಿತಾರೂಢ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ವಿಶೇಷವಾಗಿ ‘ಜನ ನಾಯಗನ್’ ಸೆನ್ಸಾರ್ ಮಂಡಳಿಯ ಅಡೆತಡೆಗಳನ್ನು ಎದುರಿಸಬೇಕಾಯಿತು. ಚಿತ್ರಕ್ಕೆ ಅನುಮತಿ ನೀಡಲು ವಿಳಂಬ ಮಾಡುವುದು, ವಿವಾದ ಸೃಷ್ಟಿಸುವುದು ವಿಜಯ್ ಅವರನ್ನು ರಾಜಕೀಯವಾಗಿ ಹತ್ತಿಕ್ಕುವ ಪ್ರಯತ್ನದಂತೆ ಕಂಡಿತ್ತು.

ಈ ಅಡೆತಡೆಗಳೇ ವಿಜಯ್ ಅವರಿಗೆ ಮೈಲೇಜ್ ನೀಡಿತು. ಅವರು ‘ಸಂತ್ರಸ್ತ’ನ ರೀತಿ ಕಾಣಿಸಿದರು. ಇದು ಅವರ ಅಭಿಮಾನಿಗಳಲ್ಲಿ ರಾಜಕೀಯ ಆಕ್ರೋಶದ ಕಿಚ್ಚು ಹಚ್ಚಿದವು. ಇಂದು ಅವರು ರಾಜಕೀಯ ಮುನ್ನಡೆ ಸಾಧಿಸುತ್ತಿದ್ದಂತೆ, ‘ಜನ ನಾಯಗನ್’ ನಿರ್ಮಾಪಕರಲ್ಲಿ ಮಂದಹಾಸ ಮೂಡಿದೆ. ಒಂದೊಮ್ಮೆ ಅವರು ಸಿಎಂ ಆದಲ್ಲಿ, ‘ಜನ ನಾಯಗನ್’ ಚಿತ್ರಕ್ಕೆ ಬೃಹತ್ ಮೈಲೇಜ್ ಸಿಗುವುದು ಪಕ್ಕಾ ಆಗಿದೆ. ಲೀಕ್ ಆದ ಹೊರತಾಗಿಯೂ ‘ಜನ ನಾಯಗನ್’ ಗೆಲ್ಲೋದು ಪಕ್ಕಾ ಆಗಿದೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆಯಲ್ಲಿ ಪಿಎಂ ಮೋದಿಯ ಧುರಂಧರ್ ದಳಪತಿ ವಿಜಯ್? ಶುರುವಾಗಿದೆ ಚರ್ಚೆ

ವಿಜಯ್ ಅವರ ಈ ಯಶಸ್ಸಿನ ನಡುವೆ ಅಭಿಮಾನಿಗಳಿಗೆ ಕಾಡುತ್ತಿರುವ ಒಂದು ದೊಡ್ಡ ಆತಂಕವೆಂದರೆ ಚಿತ್ರರಂಗಕ್ಕೆ ಅವರು ಹೇಳಲಿರುವ ‘ಗುಡ್ ಬೈ’. ವಿಜಯ್ ಸಿಎಂ ಆಗಿದ್ದೇ ಹೌದಾದಲ್ಲಿ ಸಂಪೂರ್ಣವಾಗಿ ಅವರು ರಾಜಕೀಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ರೀತಿ ಸಿನಿಮಾದಿಂದ ದೂರ ಸರಿಯುವುದು ಕೇವಲ ವೈಯಕ್ತಿಕ ನಿರ್ಧಾರವಲ್ಲ, ಅದು ಜನರ ಮೇಲಿರುವ ಜವಾಬ್ದಾರಿಯ ಸಂಕೇತ ಎಂದು ಅವರು ಭಾವಿಸುತ್ತಾರೆ. ನಟನೆಯಲ್ಲಿ ಉತ್ತುಂಗದಲ್ಲಿರುವಾಗ ವಿಜಯ್ ಚಿತ್ರರಂಗ ಬಿಡುವುದು ಕಾಲಿವುಡ್‌ಗೆ ದೊಡ್ಡ ನಷ್ಟವಾದರೂ, ತಮಿಳುನಾಡು ರಾಜಕೀಯಕ್ಕೆ ಓರ್ವ ಹೊಸ ಭರವಸೆಯ ನಾಯಕ ಸಿಕ್ಕಂತಾಗಿದೆ. ಅವರ ಕೊನೆಯ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಸಾರ್ವಕಾಲಿಕ ದಾಖಲೆ ಬರೆಯುವ ಎಲ್ಲಾ ಲಕ್ಷಣ ಗೋಚರವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:19 pm, Mon, 4 May 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ