Bomman and Bellie: ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಂಡ ಮಾವುತರಿಗೆ ತಮಿಳುನಾಡು ಸಿಎಂ ಬಂಪರ್ ಕೊಡುಗೆ
The Elephant Whisperers: ಬೊಮ್ಮನ್ ಮತ್ತು ಬೆಳ್ಳಿ ದಂಪತಿಯನ್ನು ಸಿಎಂ ಎಂ.ಕೆ. ಸ್ಟಾಲಿನ್ ಸನ್ಮಾನಿಸಿರುವುದಕ್ಕೆ ಕಾರ್ತಿಕಿ ಗೋನ್ಸಾಲ್ವಿಸ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಈ ಬಾರಿಯ ಆಸ್ಕರ್ ಅವಾರ್ಡ್ಸ್ನಲ್ಲಿ ಭಾರತದ ಸಿನಿಮಾಗಳು ಮೋಡಿ ಮಾಡಿವೆ. ‘ಆರ್ಆರ್ಆರ್’ ಸಿನಿಮಾದ ‘ನಾಟು ನಾಟು..’ ಹಾಡು ಮತ್ತು ‘ದಿ ಎಲಿಫೆಂಟ್ ವಿಸ್ಪರರ್ಸ್’ (The Elephant Whisperers) ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಆನೆ ಮತ್ತು ಮಾವುತರ ನಡುವಿನ ಭಾವನಾತ್ಮಕ ಸಂಬಂಧದ ಕುರಿತು ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ ಮೂಡಿಬಂದಿದೆ. ನೆಟ್ಫ್ಲಿಕ್ಸ್ನಲ್ಲಿ ವೀಕ್ಷಣೆಗೆ ಲಭ್ಯವಾಗಿರುವ ಈ ಡಾಕ್ಯುಮೆಂಟರಿಯಲ್ಲಿ ಬೊಮ್ಮನ್ ಮತ್ತು ಬೆಳ್ಳಿ (Bomman and Bellie) ಎಂಬ ದಂಪತಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ರಿಯಲ್ ಲೈಫ್ ಘಟನೆಗಳನ್ನು ಈ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಈಗ ಈ ಮಾವುತರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) ಸನ್ಮಾನಿಸಿದ್ದಾರೆ. ಅಲ್ಲದೇ ಮಾವುತರಿಗೆ ಆರ್ಥಿಕ ಸಹಾಯ ಮಾಡಿದ್ದಾರೆ.
ಬೊಮ್ಮನ್ ಮತ್ತು ಬೆಳ್ಳಿ ದಂಪತಿಗೆ ತಲಾ ಒಂದು ಲಕ್ಷ ರೂಪಾಯಿ ನೀಡಲಾಗಿದೆ. ಅಲ್ಲದೇ 2 ಆನೆ ಶಿಬಿರದಲ್ಲಿ ಇರುವ 91 ಮಾವುತರಿಗೂ ಕೂಡ ತಲಾ ಒಂದು ಲಕ್ಷ ರೂಪಾಯಿ ಹಣ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಈ ಧನ ಸಹಾಯ ಮಾಡಲಾಗುತ್ತಿದೆ. ಅಲ್ಲದೇ, ಮಾವುತರಿಗೆ ಮನೆ ಕಟ್ಟಿಕೊಡಲು 9.1 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ ಎಂದು ವರದಿ ಆಗಿದೆ.
The Elephant Whisperers: ಭಾರತಕ್ಕೆ ಆಸ್ಕರ್: ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಅಕಾಡೆಮಿ ಪ್ರಶಸ್ತಿ
ಕಾರ್ತಿಕಿ ಗೋನ್ಸಾಲ್ವಿಸ್ ಅವರು ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಅವರಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿರುವುದು ವಿಶೇಷ. ಬೊಮ್ಮನ್ ಮತ್ತು ಬೆಳ್ಳಿ ದಂಪತಿಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸನ್ಮಾನಿಸಿರುವುದಕ್ಕೆ ಕಾರ್ತಿಕಿ ಗೋನ್ಸಾಲ್ವಿಸ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಆಸ್ಕರ್ ಮುಡಿಗೇರಿಸಿಕೊಂಡ ರಘುವನ್ನು ನೋಡಲು ತೆಪ್ಪಕಾಡು ಆನೆ ಶಿಬಿರದಲ್ಲಿ ಜನಸಾಗರ
ಅನಾಥ ಆನೆ ಮರಿಗಳನ್ನು ಬೊಮ್ಮನ್ ಮತ್ತು ಬೆಳ್ಳಿ ಸಾಕುತ್ತಾರೆ. ಆದರೆ ಆನೆಗಳು ದೊಡ್ಡದಾದ ಬಳಿಕ ಅವುಗಳನ್ನು ಬೇರೆ ಶಿಬಿರಕ್ಕೆ ಸ್ಥಳಾಂತರ ಮಾಡಲಾಗುತ್ತದೆ. ಸ್ವಂತ ಮಕ್ಕಳಂತೆ ಸಾಕಿದ ಆನೆಗಳನ್ನು ದೂರ ಮಾಡುವ ಸಂದರ್ಭ ಬೊಮ್ಮನ್ ಮತ್ತು ಬೆಳ್ಳಿಗೆ ತುಂಬ ಭಾವುಕವಾಗಿರುತ್ತದೆ. ಈ ಎಲ್ಲ ಅಂಶಗಳನ್ನು ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರದಲ್ಲಿ ಕಟ್ಟಿಕೊಡಲಾಗಿದೆ.
Love respect & gratitude to Bellie & Bomman our unsung heroes. A humble tribute to all our Mahouts and Cavadis for taking care of our precious elephants like #Raghu & #Ammu. They were honoured & felicitated by CM @mkstalin #TheElephantWhisperers #Oscar #Oscar2023 @CMOTamilnadu pic.twitter.com/iVCp2icVpF
— Supriya Sahu IAS (@supriyasahuias) March 15, 2023
ಆಸ್ಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಸಾಕ್ಷ್ಯಚಿತ್ರ ಎಂಬ ಖ್ಯಾತಿಗೆ ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಾತ್ರವಾಗಿದೆ. ಈ ಸಾಧನೆ ಮಾಡಿದ್ದಕ್ಕಾಗಿ ಅನೇಕರು ಈ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಟ್ವಿಟರ್ ಮೂಲಕ ಅಭಿನಂದಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.