Bomman and Bellie: ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಂಡ ಮಾವುತರಿಗೆ ತಮಿಳುನಾಡು ಸಿಎಂ ಬಂಪರ್​ ಕೊಡುಗೆ

The Elephant Whisperers: ಬೊಮ್ಮನ್​ ಮತ್ತು ಬೆಳ್ಳಿ ದಂಪತಿಯನ್ನು ಸಿಎಂ ಎಂ.ಕೆ. ಸ್ಟಾಲಿನ್​ ಸನ್ಮಾನಿಸಿರುವುದಕ್ಕೆ ಕಾರ್ತಿಕಿ​ ಗೋನ್ಸಾಲ್ವಿಸ್​​ ಸಂತಸ ವ್ಯಕ್ತಪಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Bomman and Bellie: ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಂಡ ಮಾವುತರಿಗೆ ತಮಿಳುನಾಡು ಸಿಎಂ ಬಂಪರ್​ ಕೊಡುಗೆ
ಎಂ.ಕೆ. ಸ್ಟಾಲಿನ್, ಬೊಮ್ಮನ್, ಬೆಳ್ಳಿ

Updated on: Mar 16, 2023 | 1:33 PM

ಈ ಬಾರಿಯ ಆಸ್ಕರ್ ಅವಾರ್ಡ್ಸ್​ನಲ್ಲಿ ಭಾರತದ ಸಿನಿಮಾಗಳು ಮೋಡಿ ಮಾಡಿವೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಮತ್ತು ‘ದಿ ಎಲಿಫೆಂಟ್​ ವಿಸ್ಪರರ್ಸ್​’ (The Elephant Whisperers) ಸಾಕ್ಷ್ಯಚಿತ್ರಕ್ಕೆ ಆಸ್ಕರ್​ ಪ್ರಶಸ್ತಿ ಸಿಕ್ಕಿದೆ. ಆನೆ ಮತ್ತು ಮಾವುತರ ನಡುವಿನ ಭಾವನಾತ್ಮಕ ಸಂಬಂಧದ ಕುರಿತು ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರ ಮೂಡಿಬಂದಿದೆ. ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ ಲಭ್ಯವಾಗಿರುವ ಈ ಡಾಕ್ಯುಮೆಂಟರಿಯಲ್ಲಿ ಬೊಮ್ಮನ್​ ಮತ್ತು ಬೆಳ್ಳಿ (Bomman and Bellie) ಎಂಬ ದಂಪತಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ರಿಯಲ್​ ಲೈಫ್​ ಘಟನೆಗಳನ್ನು ಈ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಈಗ ಈ ಮಾವುತರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin)​ ಸನ್ಮಾನಿಸಿದ್ದಾರೆ. ಅಲ್ಲದೇ ಮಾವುತರಿಗೆ ಆರ್ಥಿಕ ಸಹಾಯ ಮಾಡಿದ್ದಾರೆ.

ಬೊಮ್ಮನ್​ ಮತ್ತು ಬೆಳ್ಳಿ ದಂಪತಿಗೆ ತಲಾ ಒಂದು ಲಕ್ಷ ರೂಪಾಯಿ ನೀಡಲಾಗಿದೆ. ಅಲ್ಲದೇ 2 ಆನೆ ಶಿಬಿರದಲ್ಲಿ ಇರುವ 91 ಮಾವುತರಿಗೂ ಕೂಡ ತಲಾ ಒಂದು ಲಕ್ಷ ರೂಪಾಯಿ ಹಣ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಈ ಧನ ಸಹಾಯ ಮಾಡಲಾಗುತ್ತಿದೆ. ಅಲ್ಲದೇ, ಮಾವುತರಿಗೆ ಮನೆ ಕಟ್ಟಿಕೊಡಲು 9.1 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ ಎಂದು ವರದಿ ಆಗಿದೆ.

ಇದನ್ನೂ ಓದಿ
Oscar 2023 Winners List: ಈ ವರ್ಷ ಆಸ್ಕರ್ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ
Oscar 2023: ಆಸ್ಕರ್ ಗೆದ್ದು ಬೀಗಿದ ‘ನಾಟು ನಾಟು..’ ಹಾಡು; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ
The Elephant Whisperers: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ 
Ram Charan: ‘ಭಾರತೀಯರಿಗೆ ಆಸ್ಕರ್​ ಪ್ರಶಸ್ತಿ ಅಂದ್ರೆ ಒಲಂಪಿಕ್ಸ್​ ಗೋಲ್ಡ್​ ಮೆಡಲ್​ ಇದ್ದಂಗೆ’: ರಾಮ್​ ಚರಣ್​

The Elephant Whisperers: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ 

ಕಾರ್ತಿಕಿ​ ಗೋನ್ಸಾಲ್ವಿಸ್​​ ಅವರು ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಅವರಿಗೆ ಆಸ್ಕರ್​ ಪ್ರಶಸ್ತಿ ಸಿಕ್ಕಿರುವುದು ವಿಶೇಷ. ಬೊಮ್ಮನ್​ ಮತ್ತು ಬೆಳ್ಳಿ ದಂಪತಿಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರು ಸನ್ಮಾನಿಸಿರುವುದಕ್ಕೆ ಕಾರ್ತಿಕಿ​ ಗೋನ್ಸಾಲ್ವಿಸ್​ ಸಂತಸ ವ್ಯಕ್ತಪಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆಸ್ಕರ್ ಮುಡಿಗೇರಿಸಿಕೊಂಡ ರಘುವನ್ನು ನೋಡಲು ತೆಪ್ಪಕಾಡು ಆನೆ ಶಿಬಿರದಲ್ಲಿ ಜನಸಾಗರ

ಅನಾಥ ಆನೆ ಮರಿಗಳನ್ನು ಬೊಮ್ಮನ್​ ಮತ್ತು ಬೆಳ್ಳಿ ಸಾಕುತ್ತಾರೆ. ಆದರೆ ಆನೆಗಳು ದೊಡ್ಡದಾದ ಬಳಿಕ ಅವುಗಳನ್ನು ಬೇರೆ ಶಿಬಿರಕ್ಕೆ ಸ್ಥಳಾಂತರ ಮಾಡಲಾಗುತ್ತದೆ. ಸ್ವಂತ ಮಕ್ಕಳಂತೆ ಸಾಕಿದ ಆನೆಗಳನ್ನು ದೂರ ಮಾಡುವ ಸಂದರ್ಭ ಬೊಮ್ಮನ್​ ಮತ್ತು ಬೆಳ್ಳಿಗೆ ತುಂಬ ಭಾವುಕವಾಗಿರುತ್ತದೆ. ಈ ಎಲ್ಲ ಅಂಶಗಳನ್ನು ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರದಲ್ಲಿ ಕಟ್ಟಿಕೊಡಲಾಗಿದೆ.

ಆಸ್ಕರ್​ ಪ್ರಶಸ್ತಿ ಪಡೆದ ಭಾರತದ ಮೊದಲ ಸಾಕ್ಷ್ಯಚಿತ್ರ ಎಂಬ ಖ್ಯಾತಿಗೆ ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಪಾತ್ರವಾಗಿದೆ. ಈ ಸಾಧನೆ ಮಾಡಿದ್ದಕ್ಕಾಗಿ ಅನೇಕರು ಈ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಟ್ವಿಟರ್​ ಮೂಲಕ ಅಭಿನಂದಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us