AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಹೆಸರು ಬದಲಾಯಿಸಿಕೊಂಡ ನಟಿ ಸಮಂತಾ ಅಕ್ಕಿನೇನಿ; ಹೊಸ ಹೆಸರು ಏನು?

ಅಕ್ಕಿನೇನಿ ನಾಗ ಚೈತನ್ಯ ಜೊತೆ ಮದುವೆಯಾದ ಬಳಿಕ ಸಮಂತಾ ರುತ್​ ಪ್ರಭು ತಮ್ಮ ಹೆಸರನ್ನು ಸಮಂತಾ ಅಕ್ಕಿನೇನಿ ಎಂದು ಬದಲಾಯಿಸಿಕೊಂಡಿದ್ದರು. ಆದರೆ ಈಗ ಅದರ ಬದಲಿಗೆ ಕೇವಲ ‘ಎಸ್​’ ಅಕ್ಷರವನ್ನು ಇಟ್ಟುಕೊಂಡಿರುವುದು ನಿಜಕ್ಕೂ ಕೌತುಕ ಮೂಡಿಸಿದೆ.

ರಾತ್ರೋರಾತ್ರಿ ಹೆಸರು ಬದಲಾಯಿಸಿಕೊಂಡ ನಟಿ ಸಮಂತಾ ಅಕ್ಕಿನೇನಿ; ಹೊಸ ಹೆಸರು ಏನು?
ಸಮಂತಾ ಅಕ್ಕಿನೇನಿ
TV9 Web
| Edited By: |

Updated on: Jul 31, 2021 | 8:22 AM

Share

ಖ್ಯಾತ ನಟಿ ಸಮಂತಾ ಅಕ್ಕಿನೇನಿ (Samantha Akkineni) ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಮದುವೆ ಬಳಿಕವೂ ಅವರ ಬೇಡಿಕೆ ಕಿಂಚಿತ್ತೂ ತಗ್ಗಿಲ್ಲ. ಬಹುಭಾಷಾ ಕಲಾವಿದೆಯಾಗಿ ಅವರು ಧೂಳೆಬ್ಬಿಸುತ್ತಿದ್ದಾರೆ. ಈ ವರ್ಷ ಬಿಡುಗಡೆಯಾದ ‘ದಿ ಫ್ಯಾಮಿಲಿ ಮ್ಯಾನ್​ 2’ (The Family Man 2) ಯಶಸ್ಸಿನಿಂದಾಗಿ ಸಮಂತಾ ಖ್ಯಾತಿ ದುಪ್ಪಟ್ಟಾಗಿದೆ. ಈ ನಡುವೆ ಅವರ ಹೆಸರು ಬದಲಾವಣೆಯ ಕಾರಣಕ್ಕಾಗಿ ಸುದ್ದಿ ಆಗುತ್ತಿದ್ದಾರೆ. ಹೌದು, ರಾತ್ರೋರಾತ್ರಿ ಸಮಂತಾ ಹೆಸರು ಬದಲಾಯಿಸಿಕೊಂಡಿದ್ದಾರೆ. ಇದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಸ್ವತಃ ಸಮಂತಾ ಕಡೆಯಿಂದಲೇ ಇದಕ್ಕೆ ಸ್ಪಷ್ಟನೆ ಸಿಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಅಂದಹಾಗೆ, ಸಮಂತಾ ಹೆಸರು ಬದಲಾಯಿಸಿಕೊಂಡಿರುವುದು ಸೋಶಿಯಲ್​ ಮೀಡಿಯಾದಲ್ಲಿ. ಟ್ವಿಟರ್​ ಮತ್ತು ಇನ್​ಸ್ಟಾಗ್ರಾಮ್​ನಲ್ಲಿ ಸಮಂತಾ ಅಕ್ಕಿನೇನಿ ಎಂದಿದ್ದ ತಮ್ಮ Display Name ಅನ್ನು ಕೇವಲ S ಎಂದು ಬದಲಾಯಿಸಿಕೊಂಡಿದ್ದಾರೆ. ಯಾವುದೇ ಸೂಚನೆ ನೀಡದೇ ಅವರು ಹೀಗೆ ಏಕಾಏಕಿ ಹೆಸರು ಬದಲಾಯಿಸಿಕೊಂಡಿದ್ದು ಯಾಕೆ ಎಂಬ ಪ್ರಶ್ನೆ ಈಗ ಎಲ್ಲರ ಮನದಲ್ಲೂ ಮೂಡಿದೆ.

2017ಕ್ಕಿಂತ ಮೊದಲು ಸಮಂತಾ ರುತ್​ ಪ್ರಭು ಎಂದು ಅವರನ್ನು ಕರೆಯಲಾಗುತ್ತಿತ್ತು. ನಟ ಅಕ್ಕಿನೇನಿ ನಾಗ ಚೈತನ್ಯ ಜೊತೆ ಮದುವೆಯಾದ ಬಳಿಕ ಸಮಂತಾ ತಮ್ಮ ಹೆಸರನ್ನು ಸಮಂತಾ ಅಕ್ಕಿನೇನಿ ಎಂದು ಬದಲಾಯಿಸಿಕೊಂಡರು. ಸೋಶಿಯಲ್​ ಮೀಡಿಯಾ ಖಾತೆಗಳಲ್ಲೂ ಸಮಂತಾ ಅಕ್ಕಿನೇನಿ ಎಂದೇ ಗುರುತಿಸಿಕೊಳ್ಳಲು ಆರಂಭಿಸಿದ್ದರು. ಆದರೆ ಈಗ ಅದರ ಬದಲಿಗೆ ಕೇವಲ ‘ಎಸ್​’ ಅಕ್ಷರವನ್ನು ಇಟ್ಟುಕೊಂಡಿರುವುದು ನಿಜಕ್ಕೂ ಕೌತುಕ ಮೂಡಿಸಿದೆ.

ಕೆಲವೊಮ್ಮೆ ಸೆಲೆಬ್ರಿಟಿಗಳು ಯಾವುದಾದರೂ ಬ್ರ್ಯಾಂಡ್​ ಅಥವಾ ಸಿನಿಮಾದ ಪ್ರಚಾರಕ್ಕಾಗಿ ಸೋಶಿಯಲ್​ ಮೀಡಿಯಾದಲ್ಲಿ ಈ ರೀತಿ ಹೆಸರು ಬದಲಾಯಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಈ ಹಿಂದೆ ಅನೇಕ ನಟ-ನಟಿಯರು ಇಂಥ ಪ್ರಯೋಗ ಮಾಡಿದ್ದರು. ಸಮಂತಾ ಕೂಡ ಅಂಥದ್ದೇ ಕಾರಣಕ್ಕಾಗಿ Display Name ಬದಲಾಯಿಸಿಕೊಂಡಿರಬಹುದೇ ಎಂಬ ಅನುಮಾನ ಮೂಡುತ್ತಿದೆ. ಆದರೆ ಇದೆಲ್ಲದಕ್ಕೂ ಸ್ವತಃ ಸಮಂತಾ ಕಡೆಯಿಂದಲೇ ಸೂಕ್ತ ಉತ್ತರ ಸಿಗಬೇಕಿದೆ. ಫೇಸ್​ಬುಕ್​ನಲ್ಲಿ ಅವರು ಇನ್ನೂ ಈ ಬದಲಾವಣೆ ಮಾಡಿಕೊಂಡಿಲ್ಲ.

ಸದ್ಯ ಸಮಂತಾ ಕೈಯಲ್ಲಿ ಹಲವು ಆಫರ್​ಗಳಿವೆ. ವಿಜಯ್​ ಸೇತುಪತಿ, ನಯನತಾರ ಜೊತೆಗಿನ ಹೊಸ ತಮಿಳು ಸಿನಿಮಾದಲ್ಲಿ ಸಮಂತಾ ನಟಿಸುತ್ತಿದ್ದಾರೆ. ಆ ಚಿತ್ರಕ್ಕೆ ನಯನತಾರ ಬಾಯ್​ಫ್ರೆಂಡ್​ ವಿಘ್ನೇಶ್​ ಶಿವನ್​ ನಿರ್ದೇಶನ ಮಾಡುತ್ತಿದ್ದಾರೆ. ಬಹುನಿರೀಕ್ಷಿತ ‘ಶಾಕುಂತಲಂ’ ಸಿನಿಮಾದಲ್ಲಿ ಅವರು ಶಕುಂತಲೆಯ ಪಾತ್ರ ಮಾಡುತ್ತಿದ್ದಾರೆ.

ಇದನ್ನೂ ಓದಿ:

‘ದಿ ಫ್ಯಾಮಿಲಿ ಮ್ಯಾನ್ 2’ ವಿವಾದದ ಬೆನ್ನಲ್ಲೇ ನಟಿ ಸಮಂತಾ ಅಕ್ಕಿನೇನಿಗೆ ಬಂತು ಎಚ್ಚರಿಕೆಯ ಸಂದೇಶ

ಚಿತ್ರರಂಗಕ್ಕೆ ಕಾಲಿಡುತ್ತಿದ್ದಾಳೆ ಅಲ್ಲು ಅರ್ಜುನ್​ ಮಗಳು; ಸಮಂತಾ ಜೊತೆ ಅಲ್ಲು ಅರ್ಹಾ ನಟನೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್