AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕ್ಷಕರು ಕಣ್ತುಂಬಿಕೊಳ್ಳುವ ಮೊದಲೇ ಬ್ಯಾನ್​ ಆಗಲಿದೆ ‘ದಿ ಫ್ಯಾಮಿಲಿ ಮ್ಯಾನ್​-2’?

The Family Man Season 2: 2019ರಲ್ಲಿ ಬಿಡುಗಡೆ ಆಗಿದ್ದ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ ಸಿಕ್ಕಾಪಟ್ಟೆ ಹಿಟ್​ ಆಗಿತ್ತು. ಮನೋಜ್​ ಬಾಜಪೇಯ್​, ಪ್ರಿಯಾಮಣಿ ಮುಂತಾದವರು ಮುಖ್ಯಭೂಮಿಕೆ ನಿಭಾಯಿಸಿದ್ದರು.

ವೀಕ್ಷಕರು ಕಣ್ತುಂಬಿಕೊಳ್ಳುವ ಮೊದಲೇ ಬ್ಯಾನ್​ ಆಗಲಿದೆ ‘ದಿ ಫ್ಯಾಮಿಲಿ ಮ್ಯಾನ್​-2’?
ದಿ ಫ್ಯಾಮಿಲಿ ಮ್ಯಾನ್ 2 - ಸಮಂತಾ ಅಕ್ಕಿನೇನಿ
ರಾಜೇಶ್ ದುಗ್ಗುಮನೆ
|

Updated on:May 24, 2021 | 10:14 PM

Share

‘ದಿ ಫ್ಯಾಮಿಲಿ ಮ್ಯಾನ್​-2’ ವೆಬ್​ ಸೀರಿಸ್​ ಟ್ರೇಲರ್​ ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ವಿವಾದ ಹೊತ್ತಿಸಿತ್ತು. ಈ ವೆಬ್​ ಸೀರಿಸ್​ನಲ್ಲಿ ತಮಿಳರನ್ನು ಉಗ್ರಗಾಮಿಗಳಂತೆ ತೋರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ಕೂಡ ನಡೆದಿದ್ದವು. ಈಗ ಈ ವೆಬ್​ ಸೀರಿಸ್​ಗೆ ಬ್ಯಾನ್​ ಆಗುವ ಭಯ ಕಾಡಿದೆ.

2019ರಲ್ಲಿ ಬಿಡುಗಡೆ ಆಗಿದ್ದ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ ಸಿಕ್ಕಾಪಟ್ಟೆ ಹಿಟ್​ ಆಗಿತ್ತು. ಮನೋಜ್​ ಬಾಜಪೇಯ್​, ಪ್ರಿಯಾಮಣಿ ಮುಂತಾದವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ‘ದಿ ಫ್ಯಾಮಿಲಿ ಮ್ಯಾನ್​ 2’ಗಾಗಿ ಎಲ್ಲರೂ ಕಾದಿದ್ದರು. ಆದರೆ, ಸಿನಿಮಾ ಟ್ರೇಲರ್​ ತಮಿಳಿಯನ್ನರ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳು ಜನರನ್ನು ಉಗ್ರಗಾಮಿಗಳ ರೀತಿಯಲ್ಲಿ ತೋರಿಸಲಾಗಿದೆ ಎನ್ನುವ ಆರೋಪ ಮಾಡಲಾಗಿದೆ. ಹೀಗಾಗಿ, ಅಮೇಜಾನ್​ ಪ್ರೈಮ್​ ಟ್ರೇಲರ್ ಎಡಿಟ್​ ಮಾಡುವ ಕೆಲಸವನ್ನು ಕೂಡ ಮಾಡಿದೆ.

ಈಗ ರಾಜ್ಯಸಭಾ ಸದಸ್ಯ ವೈಕೊ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಕಾಶ್​ ಜಾವ್ಡೇಕರ್​ಗೆ ಪತ್ರ ಬರೆದಿದ್ದು, ಈ ವೆಬ್​ ಸೀರಿಸ್​ ಮೇಲೆ ನಿಷೇಧ ಹೇರುವಂತೆ ಒತ್ತಾಯಿಸಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​-2 ಟ್ರೇಲರ್​ ತಮಿಳಿಯನ್ನರನ್ನು ಉಗ್ರರು ಹಾಗೂ ಪಾಕಿಸ್ತಾನದ ಐಎಸ್​ಐ​ ಏಜೆಂಟ್​ಗಳು ಎಂದು ಬಿಂಬಿಸಿದೆ. ತಮಿಳು ಈಲಂ ಯೋಧರು ಮಾಡಿದ ತ್ಯಾಗಗಳನ್ನು ಸಹ ಭಯೋತ್ಪಾದಕ ಕೃತ್ಯವೆಂದು ತಪ್ಪಾಗಿ ತೋರಿಸಲಾಗಿದೆ. ಈ ಎಲ್ಲಾ ಚಿತ್ರಣಗಳು ತಮಿಳು ಜನರ ಭಾವನೆ ಮತ್ತು ಸಂಸ್ಕೃತಿಯನ್ನು ನೋಯಿಸಿವೆ ಎಂದು’ ಪತ್ರದಲ್ಲಿ ಹೇಳಲಾಗಿದ್ದು, ಈ ವೆಬ್​ ಸೀರಿಸ್​ ಬ್ಯಾನ್​ ಮಾಡುವಂತೆ ಒತ್ತಾಯಿಸಿದ್ದಾರೆ. ಒಂದೊಮ್ಮೆ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಇದನ್ನು ಗಂಭೀರವಾಗಿ ಪರಿಗಣಿಸಿದರೆ ದಿ ಫ್ಯಾಮಿಲಿ ಮ್ಯಾನ್​-2ಗೆ ಸಂಕಷ್ಟ ಗ್ಯಾರಂಟಿ.

‘ದಿ ಫ್ಯಾಮಿಲಿ ಮ್ಯಾನ್​ ಸೀಸನ್​-2’ ಜೂನ್​ 4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ. ಈ ವೆಬ್​ ಸೀರಿಸ್​ನ ನಿರ್ದೇಶನ ಜವಾಬ್ದಾರಿಯನ್ನು ರಾಜ್​ ಮತ್ತು​ ಡಿ.ಕೆ. ನಿಭಾಯಿಸಿದ್ದಾರೆ. ಮೊದಲ ಸೀಸನ್​ ದೊಡ್ಡಮಟ್ಟದಲ್ಲಿ ಹಿಟ್ ಆದ್ದರಿಂದ ಎರಡನೇ ಸೀಸನ್​ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: ತಮಿಳರ ಕೋಪಕ್ಕೆ ಕಾರಣವಾದ ಸಮಂತಾ; ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​​ನಲ್ಲಿ ಅವರು ಮಾಡಿದ ತಪ್ಪೇನು?

‘ದಿ ಫ್ಯಾಮಿಲಿ ಮ್ಯಾನ್​’ ನಿರ್ದೇಶಕರ ಜೊತೆ ಮಹೇಶ್​ ಬಾಬು ಅಥವಾ ದೇವರಕೊಂಡ ಸಿನಿಮಾ; ಹೊರಬಿತ್ತು ಹೊಸ ಸುದ್ದಿ 

Published On - 8:28 pm, Mon, 24 May 21

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More