AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IFFI: ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರವನ್ನು ಅತ್ಯಂತ ಕೆಟ್ಟ ಚಿತ್ರವೆಂದ ತೀರ್ಪುಗಾರ

ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸವಕ್ಕೆ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾವನ್ನು ಆಯ್ಕೆ ಮಾಡಲಾಗಿತ್ತು. ತೀರ್ಪುಗಾರರ ಮುಖ್ಯಸ್ಥ, ಇಸ್ರೇಲ್ ಸಿನಿಮಾ ನಿರ್ಮಾಪಕ ನಡಾವ್ ಲಪಿಡ್​ ಅವರು ಕೆಟ್ಟ ಚಿತ್ರವೆಂದು ಬಣ್ಣಿಸಿದ್ದಾರೆ.

IFFI: ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರವನ್ನು ಅತ್ಯಂತ ಕೆಟ್ಟ ಚಿತ್ರವೆಂದ ತೀರ್ಪುಗಾರ
The Kashmir Files'
TV9 Web
| Edited By: |

Updated on:Nov 28, 2022 | 11:09 PM

Share

2022ರ ಮಾರ್ಚ್​ 11ರಂದು ಬಿಡುಗಡೆ ಆಗಿ ಗಲ್ಲಾಪೆಟ್ಟಿಗೆಯಲ್ಲಿ 250 ಕೋಟಿ ರೂಪಾಯಿಗಿಂತಲೂ ಹೆಚ್ಚು ಕಲೆಕ್ಷನ್​ ಮಾಡಿದ ಚಿತ್ರವೆಂದರೆ ಅದು ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files). ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಘಟನೆಯನ್ನು ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್’ ಸಿನಿಮಾ ಮೂಡಿಬಂದಿದೆ. ಈ ಚಿತ್ರಕ್ಕೆ ವಿವೇಕ್​ ಅಗ್ನಿಹೋತ್ರಿ ನಿರ್ದೇಶನ ಮಾಡಿದ್ದಾರೆ. ಪಲ್ಲವಿ ಜೋಶಿ, ಅನುಪಮ್​ ಖೇರ್​, ದರ್ಶನ್​ ಕುಮಾರ್​, ಮಿಥುನ್​ ಚಕ್ರವರ್ತಿ ಮುಂತಾದವರು ಮುಖ್ಯ ಭೂಮಿಕೆ ಕಾಣಿಸಿಕೊಂಡಿದ್ದರು. ಹಲವು ಸಿನಿಮೋತ್ಸವಗಳಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಪ್ರದರ್ಶನ ಕಂಡಿದೆ. ಈಗ ಗೋವಾದಲ್ಲಿ ನಡೆಯುತ್ತಿರುವ ‘ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸವ’ದಲ್ಲೂ (IFFI Goa) ಈ ಚಿತ್ರ ಪ್ರದರ್ಶನ ಕಂಡಿದೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾವನ್ನು ನೋಡಿದ  ತೀರ್ಪುಗಾರರ ಮುಖ್ಯಸ್ಥ, ಇಸ್ರೇಲ್ ಸಿನಿಮಾ ನಿರ್ಮಾಪಕ ನಡಾವ್ ಲಪಿಡ್ (Nadav Lapid)​ ಅತ್ಯಂತ ಕೆಟ್ಟ ಚಿತ್ರವೆಂದಿದ್ದಾರೆ.

53ನೇ ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸವಕ್ಕೆ ಸೋಮವಾರ (ನ. 28) ತೆರೆಬಿದ್ದಿದೆ. ಸಮಾರೋಪ ಸಮಾರಂಭದಲ್ಲಿ, ತೀರ್ಪುಗಾರರ ಮುಖ್ಯಸ್ಥ, ಇಸ್ರೇಲ್ ಸಿನಿಮಾ ನಿರ್ಮಾಪಕ ನಡಾವ್ ಲಪಿಡ್  ಅವರು ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ವೇದಿಕೆಯಲ್ಲಿ ಟೀಕಿಸಿದ್ದು ಇದೊಂದು ಕೆಟ್ಟ ಚಿತ್ರವೆಂದು ಹೇಳಿದ್ದಾರೆ.

ಇದನ್ನೂ ಓದಿ: Anupam Kher: ಗೋವಾ ಚಿತ್ರೋತ್ಸವದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಪ್ರದರ್ಶನ; ಅನುಪಮ್​ ಖೇರ್​ ವಿಶೇಷ ಮಾತು

‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರವನ್ನು ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸವದಲ್ಲಿ ಕಲಾತ್ಮಕ ವಿಭಾಗಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ದಿ ಕಾಶ್ಮೀರ್ ಫೈಲ್ಸ್ ಚಿತ್ರ ನೋಡಿದ ನಾವೆಲ್ಲರೂ ವಿಚಲಿತರಾಗಿದ್ದು, ಜೊತೆಗೆ ಆಘಾತಕ್ಕೂಳಗಾದೆವು. ಇದೊಂದು ಅಶ್ಲೀಲ ಸಿನಿಮಾವೆಂದು ನಮಗೆ ಅನಿಸಿತು. ಇದನ್ನು ನಾನು ನಿಮ್ಮೊಂದಿಗೆ ಮುಕ್ತ ಭಾವನೆಗಳಿಂದ ಹಂಚಿಕೊಳ್ಳುತ್ತಿದ್ದೇನೆ’ ಎಂದು ಹೇಳಿದರು.

ವ್ಯಾಕ್ಸಿನ್​ ಕುರಿತು ವಿವೇಕ್​ ಅಗ್ನಿಹೋತ್ರಿ ಸಿನಿಮಾ:

‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಯಾವ ಸಿನಿಮಾ ಮಾಡುತ್ತಾರೆ ಎಂಬ ಕೌತುಕಕ್ಕೆ ಇತ್ತೀಚೆಗೆ ತೆರೆ ಬಿದ್ದಿದೆ. ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಅವರ ನಿರ್ದೇಶನದಲ್ಲಿ ಮೂಡಿಬರಲಿದೆ. ಈ ಚಿತ್ರದ ಟೈಟಲ್ ಅನೌನ್ಸ್​ ಮಾಡಲು ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ವ್ಯಾಕ್ಸಿನ್ ಬಾಟಲಿ ಮೇಲೆ ಚಿತ್ರದ ಶೀರ್ಷಿಕೆ ಬರೆಯಲಾಗಿದೆ.

2023ರ ಆಗಸ್ಟ್ 15ರಂದು ‘ದಿ ವ್ಯಾಕ್ಸಿನ್​ ವಾರ್​’ ರಿಲೀಸ್ ಆಗಲಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತೆಲುಗು, ಮಲಯಾಳಂ, ಮರಾಠಿ ಸೇರಿದಂತೆ 11 ಭಾಷೆಗಳಲ್ಲಿ ತೆರೆಗೆ ಬರಲಿದೆ ಎಂಬುದು ವಿಶೇಷ. ಪಲ್ಲವಿ ಜೋಶಿ ಹಾಗೂ ಅಭಿಷೇಕ್ ಅಗರ್​ವಾಲ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:07 pm, Mon, 28 November 22

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ