ಮೊದಲ ದಿನ ಸಾಧಾರಣ ಗಳಿಕೆ ಮಾಡಿದ ‘ದಿ ಕೇರಳ ಸ್ಟೋರಿ’ ಸಿನಿಮಾ; ಮರುಕಳಿಸಲಿದೆ ಇತಿಹಾಸ?

|

Updated on: May 06, 2023 | 10:59 AM

The Kerala Story Collection: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 3.5 ಕೋಟಿ ರೂಪಾಯಿ ಮಾತ್ರ. ನಂತರದ ದಿನಗಳಲ್ಲಿ ಸಿನಿಮಾ ಅಬ್ಬರದ ಕಲೆಕ್ಷನ್ ಮಾಡಿತು. ಈಗ ‘ದಿ ಕೇರಳ ಸ್ಟೋರಿ’ ವಿಚಾರದಲ್ಲಿ ಇತಿಹಾಸ ಮರುಕಳಿಸಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಮೊದಲ ದಿನ ಸಾಧಾರಣ ಗಳಿಕೆ ಮಾಡಿದ ‘ದಿ ಕೇರಳ ಸ್ಟೋರಿ’ ಸಿನಿಮಾ; ಮರುಕಳಿಸಲಿದೆ ಇತಿಹಾಸ?
ಅದಾ ಶರ್ಮಾ
Follow us on

ಕೇರಳದ ಹಿಂದೂ ಯುವತಿಯರು ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡು ಐಸಿಸ್ ಸೇರುವ ಕಥೆಯನ್ನು ಇಟ್ಟುಕೊಂಡು ‘ದಿ ಕೇರಳ ಸ್ಟೋರಿ’ ಸಿನಿಮಾ (The Kerala Story) ಸಿದ್ಧಗೊಂಡಿದೆ. ಸುದಿಪ್ತೋ ಸೇನ್ ನಿರ್ದೇಶನದ ಈ ಸಿನಿಮಾದಲ್ಲಿ ಅದಾ ಶರ್ಮಾ (Adah Sharma) ನಾಯಕಿ ಆಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮೊದಲ ದಿನ ಸಾಧಾರಣ ಗಳಿಕೆ ಮಾಡಬಹುದು ಎಂದು ಊಹಿಸಲಾಗಿತ್ತು. ಅದು ನಿಜವಾಗಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾ ಮೊದಲ ದಿನ ಅಬ್ಬರದ ಕಲೆಕ್ಷನ್ ಮಾಡಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಸಿನಿಮಾ ಒಳ್ಳೆಯ ಗಳಿಕೆ ಮಾಡುವ ಸೂಚನೆ ಸಿಕ್ಕಿದೆ.

2022ರಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ತೆರೆಗೆ ಬಂತು. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 3.5 ಕೋಟಿ ರೂಪಾಯಿ ಮಾತ್ರ. ನಂತರದ ದಿನಗಳಲ್ಲಿ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಯಿತು. ಈ ಸಿನಿಮಾ ಒಟ್ಟಾರೆ 252 ಕೋಟಿ ರೂಪಾಯಿ ಬಾಚಿಕೊಂಡಿತು. ಈಗ ‘ದಿ ಕೇರಳ ಸ್ಟೋರಿ’ ವಿಚಾರದಲ್ಲಿ ಇತಿಹಾಸ ಮರುಕಳಿಸಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾ ಮೊದಲ ದಿನ ಸುಮಾರು 8 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ವರದಿ ಆಗಿದೆ. ಬಾಕ್ಸ್ ಆಫೀಸ್ ಲೆಕ್ಕಾಚಾರದಲ್ಲಿ ನೋಡಿದರೆ ಇದು ಸಾಧಾರಣ ಗಳಿಕೆ ಎನ್ನಬಹುದು. ಮೊದಲ ದಿನ ಸಿನಿಮಾ ನೋಡಿದ ಅನೇಕರು ಇದನ್ನು ಮೆಚ್ಚಿಕೊಂಡಿದ್ದಾರೆ. ಸಿನಿಮಾಗೆ ಬಾಯಿಮಾತಿನ ಪ್ರಚಾರ ಸಿಗುತ್ತಿದೆ. ಬುಕ್ ಮೈ ಶೋನಲ್ಲಿ ಈ ಚಿತ್ರಕ್ಕೆ 22 ಸಾವಿರ ಜನರು ವೋಟ್ ಮಾಡಿದ್ದು, 9.6 ರೇಟಿಂಗ್ ಸಿಕ್ಕಿದೆ. ಹೀಗಾಗಿ, ಸಿನಿಮಾ ಮುಂದಿನ ದಿನಗಳಲ್ಲಿ ಅಬ್ಬರದ ಗಳಿಕೆ ಮಾಡಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ

ಶಾಲಿನಿ ಉನ್ನಿಕೃಷ್ಣನ್ ಪಾತ್ರದ ಮೂಲಕ ಅದಾ ಶರ್ಮಾ ಗಮನ ಸೆಳೆದಿದ್ದಾರೆ. ಶಾಲಿನಿ ಹೆಸರಿನ ಹಿಂದೂ ಹುಡುಗಿ ಮುಸ್ಲಿಂ ಹುಡುಗಿ ಆಗಿ ಮತಾಂತರಗೊಳ್ಳುತ್ತಾಳೆ. ಆಕೆ ಐಸಿಸ್ ಸೇರುತ್ತಾಳೆ. ಈ ರೀತಿಯಲ್ಲಿ ಕಥೆ ಸಾಗುತ್ತದೆ. ಈ ಸಿನಿಮಾದಲ್ಲಿ ಐಸಿಸ್​ನ ಕರಾಳ ಮುಖವನ್ನು ತೋರಿಸಲಾಗಿದೆ. ಮುಗ್ಧರನ್ನು ಹೇಗೆ ಧರ್ಮ ಯುದ್ಧಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂಬುದನ್ನು ತೋರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ