AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ’ ಟ್ರೇಲರ್ ವಿರುದ್ಧ ಅಸಮಾಧಾನಗೊಂಡ ಕೇರಳ ಸಿಎಂ; ಚಿತ್ರಕ್ಕೆ ಬೀಳಲಿದೆ ತಡೆ?

Pinarayi Vijayan: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ‘ದಿ ಕೇರಳ ಸ್ಟೋರಿ’ ಟ್ರೇಲರ್ ನೋಡಿದ್ದು, ಅಸಮಧಾನಗೊಂಡಿದ್ದಾರೆ. ಈ ಚಿತ್ರದಿಂದ ಕೇರಳಕ್ಕೆ ಕಳಂಕ ಬರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ದಿ ಕೇರಳ ಸ್ಟೋರಿ’ ಟ್ರೇಲರ್ ವಿರುದ್ಧ ಅಸಮಾಧಾನಗೊಂಡ ಕೇರಳ ಸಿಎಂ; ಚಿತ್ರಕ್ಕೆ ಬೀಳಲಿದೆ ತಡೆ?
ಪಿಣರಾಯಿ ವಿಜಯನ್-ಅದಾ ಶರ್ಮಾ
TV9 Web
| Edited By: |

Updated on: May 01, 2023 | 7:23 AM

Share

‘ದಿ ಕೇರಳ ಸ್ಟೋರಿ’ ಸಿನಿಮಾದ (The Kerala Story Movie) ಟ್ರೇಲರ್ ಸದ್ಯ ಎಲ್ಲ ಕಡೆಗಳಲ್ಲಿ ಚರ್ಚೆ ಹುಟ್ಟುಹಾಕಿದೆ. ಲವ್ ಜಿಹಾದ್ ವಿಚಾರವನ್ನು ಪ್ರಮುಖವಾಗಿಟ್ಟುಕೊಂಡು ಈ ಸಿನಿಮಾ ಸಿದ್ಧಗೊಂಡಿದೆ. ಐಸಿಸ್​ ವಿಚಾರವನ್ನೂ ಹೇಳಲಾಗಿದೆ. ಇತ್ತೀಚೆಗೆ ಟ್ರೇಲರ್ ರಿಲೀಸ್ ಆಗಿತ್ತು. ಈಗ ಟ್ರೇಲರ್​ಗೆ ಒಂದು ವರ್ಗದವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾ ರಿಲೀಸ್ ಆಗಬಾರದು ಎಂದು ಒಂದು ವರ್ಗದವರು ಹೇಳುತ್ತಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಅವರು ಚಿತ್ರದ ಟ್ರೇಲರ್ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಕೇರಳದಲ್ಲಿ ಸಿನಿಮಾ ರಿಲೀಸ್​ಗೆ ತಡೆ ಬಿದ್ದರೂ ಅಚ್ಚರಿ ಇಲ್ಲ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ‘ದಿ ಕೇರಳ ಸ್ಟೋರಿ’ ಟ್ರೇಲರ್ ನೋಡಿದ್ದು, ಅಸಮಧಾನಗೊಂಡಿದ್ದಾರೆ. ಈ ಚಿತ್ರದಿಂದ ಕೇರಳಕ್ಕೆ ಕಳಂಕ ಬರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಕೇರಳದ ಕಥೆ ಇದೆ. ಕೇರಳದ ಯುವತಿ ಒಬ್ಬಳು ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುತ್ತಾಳೆ. ಬಳಿಕ ಅವಳು ಐಸಿಸ್ ಸೇರುತ್ತಾಳೆ. ಅಲ್ಲಿ ನರಕ ಅನುಭವಿಸುತ್ತಾಳೆ. ಆ ಬಳಿಕ ಆಕೆ ತನ್ನ ಕಥೆ ಹೇಳಿಕೊಳ್ಳುತ್ತಾಳೆ. ಇದಿಷ್ಟು ವಿಚಾರ ‘ದಿ ಕೇರಳ ಸ್ಟೋರಿ’ ಸಿನಿಮಾ ಟ್ರೇಲರ್​ನಲ್ಲಿದೆ.

‘ಈ ಸಿನಿಮಾ ರಾಜ್ಯದ ವಿರುದ್ಧ ದ್ವೇಷವನ್ನು ಹರಡುವಂತೆ ಮಾಡುತ್ತಿದೆ. ಲವ್​ ಜಿಹಾದ್ ಅನ್ನೋದು ಸುಳ್ಳು. ತನಿಖಾ ಸಂಸ್ಥೆ, ನ್ಯಾಯಾಲಯ ಮತ್ತು ಕೇಂದ್ರ ಗೃಹ ಸಚಿವಾಲಯದಿಂದ ಲವ್ ಜಿಹಾದ್ ಎಂಬ ವಿಚಾರ ತಿರಸ್ಕರಿಸಲ್ಪಟ್ಟಿದೆ. ಈಗ ಲವ್ ಜಿಹಾದ್ ವಿಚಾರನ್ನೇ ಚಿತ್ರದ ಥೀಮ್ ಮಾಡಿಕೊಂಡಿದ್ದಾರೆ. ರಾಜ್ಯದ ಬಗ್ಗೆ ಅಪಪ್ರಚಾರ ಮಾಡಲು ಸಂಘಪರಿವಾರ ಪ್ರಯತ್ನಿಸುತ್ತಿದೆ’ ಎಂದಿದ್ದಾರೆ ಪಿಣರಾಯಿ ವಿಜಯನ್.

ಇದನ್ನೂ ಓದಿ: ‘ಹಿಜಾಬ್ ಹಾಕಿದವರ ಮೇಲೆ ಅತ್ಯಾಚಾರ ಆಗಲ್ಲ, ಅಲ್ಲಾಹ್ ಮಾತ್ರ ಕಾಪಾಡುವವನು’; ಚರ್ಚೆ ಹುಟ್ಟುಹಾಕಿದ ‘ದಿ ಕೇರಳ ಸ್ಟೋರಿ’ ಟ್ರೇಲರ್

ಇದು ನೈಜ ಘಟನೆ ಆಧಾರಿತ ಸಿನಿಮಾ ಎಂದು ನಿರ್ದೇಶಕ ಸುದಿಪ್ತೋ ಸೇನ್ ಹೇಳಿದ್ದಾರೆ. ಇರಾಕ್ ಮತ್ತು ಸಿರಿಯಾದಲ್ಲಿ ಉಗ್ರಗಾಮಿ ಸಂಘಟನೆಗಳಿಗೆ ಸೇರಿಕೊಂಡ ಕೇರಳದ 32,000 ಮಹಿಳೆಯರು ಕಣ್ಮರೆಯಾಗುವುದರ ಸುತ್ತ ಚಿತ್ರದ ಕಥೆ ಸಾಗುತ್ತದೆ. ಅದಾ ಶರ್ಮಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ದಿ ಕೇರಳ ಸ್ಟೋರಿ’ ಸಿನಿಮಾ ಮೇ 5ರಂದು ರಿಲೀಸ್ ಆಗಲಿದೆ. ಸದ್ಯ ಸಿನಿಮಾ ರಿಲೀಸ್​ಗೆ ಕೇರಳ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಹೀಗಾಗಿ, ಸಿನಿಮಾ ಮೇ5ಕ್ಕೆ ರಿಲೀಸ್ ಆಗಲಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್