The Kerala Story: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಆವರಣದಲ್ಲಿ ‘ದಿ ಕೇರಳ ಸ್ಟೋರಿ’ ಪ್ರಚಾರ; ಮಲಯಾಳಿಗಳೇ ಟಾರ್ಗೆಟ್​

Kollur Mookambika Temple: ಮೂಕಾಂಬಿಕಾ ದೇವಾಲಯದ ದ್ವಾರ ಹಾಗೂ ಆವರಣದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾದ ಬ್ಯಾನರ್ ಅಳವಡಿಸಲಾಗಿದೆ. ಇಂಗ್ಲಿಷ್​ ಮತ್ತು ಮಲಯಾಳಂ ಭಾಷೆಯಲ್ಲಿ ಈ ಬ್ಯಾನರ್​ಗಳನ್ನು ಬರೆಸಲಾಗಿದೆ.

The Kerala Story: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಆವರಣದಲ್ಲಿ ‘ದಿ ಕೇರಳ ಸ್ಟೋರಿ’ ಪ್ರಚಾರ; ಮಲಯಾಳಿಗಳೇ ಟಾರ್ಗೆಟ್​
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ
Follow us
ಮದನ್​ ಕುಮಾರ್​
|

Updated on: May 15, 2023 | 5:07 PM

ಅನೇಕ ಕಾರಣಗಳಿಂದಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ (The Kerala Story) ವಿವಾದ ಸೃಷ್ಟಿ ಮಾಡಿದೆ. ಹಿಂದೂಪರ ಸಂಘಟನೆಗಳು ಈ ಚಿತ್ರಕ್ಕೆ ಬೆಂಬಲ ಸೂಚಿಸಿವೆ. ಆದರೆ ಇದೊಂದು ಪ್ರೊಪೊಗಾಂಡ ಸಿನಿಮಾ ಎಂದು ಅನೇಕರು ಟೀಕಿಸಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಗಳಿಸಿದೆ. ‘ದಿ ಕೇರಳ ಸ್ಟೋರಿ’ ಚಿತ್ರದ ಬಗ್ಗೆ ಕೊಲ್ಲೂರಿನಲ್ಲಿ ಪ್ರಚಾರ ಮಾಡಲಾಗುತ್ತಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ (Kollur Mookambika Temple) ಆವರಣದಲ್ಲಿ ಈ ಚಿತ್ರಕ್ಕೆ ಸಂಬಂಧಿಸಿದ ಬ್ಯಾನರ್​ ಇರಿಸಲಾಗಿದೆ. ಇಂಗ್ಲಿಷ್​ ಮತ್ತು ಮಲಯಾಳಂ ಭಾಷೆಯಲ್ಲಿ ಬರೆದಿರುವ ಬ್ಯಾನರ್​ಗಳನ್ನು ಇರಿಸಲಾಗಿದ್ದು, ಕೊಲ್ಲೂರಿಗೆ (Kollur) ಬರುವ ಪ್ರವಾಸಿಗರ ಗಮನ ಸೆಳೆಯಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲೂ ಈ ಬ್ಯಾನರ್​ಗಳು ವೈರಲ್​ ಆಗಿವೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಪ್ರತಿದಿನ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಅದರಲ್ಲೂ ಕೇರಳದಿಂದ ಅನೇಕರು ಬಂದು ದೇವಿಯ ದರ್ಶನ ಪಡೆಯುತ್ತಾರೆ. ಮಲಯಾಳಿಗಳನ್ನೇ ಉದ್ದೇಶಿಸಿ ಈ ಬ್ಯಾನರ್​ಗಳನ್ನು ಬರೆಸಲಾಗಿದೆ. ‘ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ಕೇರಳ ಸ್ಟೋರಿ ನೋಡಿ’ ಎಂದು ಇದರಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: Adah Sharma: ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾಗೆ ಅಪಘಾತ; ನಿರ್ದೇಶಕನಿಗೂ ಗಾಯ

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮೂಕಾಂಬಿಕಾ ದೇವಾಲಯದ ದ್ವಾರ ಹಾಗೂ ಆವರಣದಲ್ಲಿ ಬ್ಯಾನರ್ ಅಳವಡಿಸಿದ್ದಾರೆ. ವಿನೋದ್ ಕೊಲ್ಲೂರು, ವಿಜಯ ಬಳಗಾರ್, ಸಂತೋಷ್ ಭಟ್, ಪ್ರಕಾಶ್ ಹಳ್ಳಿ ಬೇರು, ಹರೀಶ್ ಶೆಟ್ಟಿ ನೇತೃತ್ವದಲ್ಲಿ ಈ ಬ್ಯಾನರ್​ ಅಳವಡಿಕೆ ಮಾಡಲಾಗಿದೆ. ಕೇರಳದಲ್ಲಿ ನಡೆದಿತ್ತು ಎನ್ನಲಾದ ಮತಾಂತರ ಮತ್ತು ಲವ್​ ಜಿಹಾದ್​ ಘಟನೆಗಳನ್ನು ಆಧರಿಸಿ ‘ದಿ ಕೇರಳ ಸ್ಟೋರಿ’ ಸಿನಿಮಾ ಮಾಡಲಾಗಿದೆ. ಟೀಸರ್​ ಬಿಡುಗಡೆ ಆದಾಗಲೇ ಈ ಚಿತ್ರ ವಿವಾದ ಸೃಷ್ಟಿ ಮಾಡಿತ್ತು.

ಇದನ್ನೂ ಓದಿ: The Kerala Story: 136 ಕೋಟಿ ರೂಪಾಯಿಗೆ ಏರಿತು ‘ದಿ ಕೇರಳ ಸ್ಟೋರಿ’ ಕಲೆಕ್ಷನ್​; 2ನೇ ಭಾನುವಾರ ಬರೋಬ್ಬರಿ 23 ಕೋಟಿ ರೂ. ಗಳಿಕೆ

‘ದಿ ಕೇರಳ ಸ್ಟೋರಿ’ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಬಂಗಾರದ ಬೆಳೆ ತೆಗೆದಿದೆ. ಈ ಸಿನಿಮಾದ ಬಾಕ್ಸ್​ ಆಫೀಸ್​ ಬೇಟೆ ಮುಂದುವರಿದಿದೆ. ಸತತ 11 ದಿನಗಳ ಕಾಲ ಈ ಚಿತ್ರ ಯಶಸ್ವಿ ಪ್ರದರ್ಶನ ಕಂಡಿದೆ. ಇಂದಿಗೂ ಕೂಡ ಹಲವು ಕಡೆಗಳಲ್ಲಿ ಹೌಸ್​ಫುಲ್​ ಆಗುತ್ತಿದೆ. ಅದರ ಪರಿಣಾಮವಾಗಿ ಚಿತ್ರಕ್ಕೆ ಉತ್ತಮ ಕಮಾಯಿ ಆಗಿದೆ. ಅಚ್ಚರಿ ಎಂದರೆ 2ನೇ ಭಾನುವಾರ ಈ ಸಿನಿಮಾಗೆ ಅತಿ ಹೆಚ್ಚು ಹಣ ಹರಿದುಬಂದಿದೆ. ಮೇ 14ರಂದು ಬರೋಬ್ಬರಿ 23 ಕೋಟಿ ರೂಪಾಯಿ ಗಳಿಸಿದೆ. ಅಲ್ಲಿಗೆ ಚಿತ್ರದ ಒಟ್ಟು ಕಲೆಕ್ಷನ್​ 136.74 ಕೋಟಿ ರೂಪಾಯಿ ತಲುಪಿದೆ. ನಟಿ ಅದಾ ಶರ್ಮಾ ಅವರು ಈ ಸಿನಿಮಾದಿಂದ ಭಾರಿ ಜನಪ್ರಿಯತೆ ಪಡೆದಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Video: ಅಪಘಾತದ ಬಳಿಕ ಹೊತ್ತಿ ಉರಿದ ಕಾರುಗಳು, ಓರ್ವ ಸಾವು
Video: ಅಪಘಾತದ ಬಳಿಕ ಹೊತ್ತಿ ಉರಿದ ಕಾರುಗಳು, ಓರ್ವ ಸಾವು
ತೆಲಂಗಾಣದಲ್ಲಿ ಪ್ರಬಲ ಭೂಕಂಪ, ವಿಡಿಯೋ ಇಲ್ಲಿದೆ
ತೆಲಂಗಾಣದಲ್ಲಿ ಪ್ರಬಲ ಭೂಕಂಪ, ವಿಡಿಯೋ ಇಲ್ಲಿದೆ
ಸಚಿನ್ ತೆಂಡೂಲ್ಕರ್ ಮುಂದೆ ಅಸಹಾಯಕತೆ ತೋಡಿಕೊಂಡ ವಿನೋದ್ ಕಾಂಬ್ಳಿ
ಸಚಿನ್ ತೆಂಡೂಲ್ಕರ್ ಮುಂದೆ ಅಸಹಾಯಕತೆ ತೋಡಿಕೊಂಡ ವಿನೋದ್ ಕಾಂಬ್ಳಿ
ವೀಳ್ಯದೆಲೆ ಗಿಡ ಮನೆಯಲ್ಲಿ ಇದ್ದರೆ ಏನೆಲ್ಲಾ ಲಾಭವಾಗುತ್ತದೆ? ವಿಡಿಯೋ ನೋಡಿ
ವೀಳ್ಯದೆಲೆ ಗಿಡ ಮನೆಯಲ್ಲಿ ಇದ್ದರೆ ಏನೆಲ್ಲಾ ಲಾಭವಾಗುತ್ತದೆ? ವಿಡಿಯೋ ನೋಡಿ
ಸಣ್ಣ ವಿವಾದ, ಬೈಕ್ ಸವಾರನನ್ನು ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಚಾಲಕ
ಸಣ್ಣ ವಿವಾದ, ಬೈಕ್ ಸವಾರನನ್ನು ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಚಾಲಕ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಇಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಇಡೇರಲಿವೆ
ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..
ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..
ಜಗದಾಂಬಿಕಾ ಪಾಲ್​​ ಭೇಟಿಯಾದ ಯತ್ನಾಳ್​​ ಟೀಂ: ಏನೆಲ್ಲಾ ಚರ್ಚೆ ಆಯ್ತು?
ಜಗದಾಂಬಿಕಾ ಪಾಲ್​​ ಭೇಟಿಯಾದ ಯತ್ನಾಳ್​​ ಟೀಂ: ಏನೆಲ್ಲಾ ಚರ್ಚೆ ಆಯ್ತು?
ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು
ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು
ಎಟಿಎಂನಿಂದ ಹಣ ದೋಚಿದವ ಹೆಂಡತಿಗಾಗಿ ಎರಡು ಚಿನ್ನದ ಸರಗಳನ್ನು ಖರೀದಿಸಿದ
ಎಟಿಎಂನಿಂದ ಹಣ ದೋಚಿದವ ಹೆಂಡತಿಗಾಗಿ ಎರಡು ಚಿನ್ನದ ಸರಗಳನ್ನು ಖರೀದಿಸಿದ