The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ

The Kerala Story Twitter Review: ಕೆಲವರು ‘ದಿ ಕೇರಳ ಸ್ಟೋರಿ’ ಚಿತ್ರವನ್ನು ವಿರೋಧಿಸುತ್ತಿದ್ದಾರೆ. ಮತ್ತೆ ಕೆಲವರು ಸಖತ್​ ಮೆಚ್ಚಿಕೊಂಡಿದ್ದಾರೆ. ಒಟ್ಟಿನಲ್ಲಿ ಈ ಸಿನಿಮಾದ ಕುರಿತು ಚರ್ಚೆ ಜೋರಾಗಿದೆ.

The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
ದಿ ಕೇರಳ ಸ್ಟೋರಿ
Follow us
|

Updated on: May 05, 2023 | 6:54 PM

ದೇಶಾದ್ಯಂತ ಬಿಡುಗಡೆ ಆಗಿರುವ ‘ದಿ ಕೇರಳ ಸ್ಟೋರಿ’ ಸಿನಿಮಾ (The Kerala Story) ಸಂಚಲನ ಸೃಷ್ಟಿ ಮಾಡಿದೆ. ಮತಾಂತರ ಮತ್ತು ಐಸಿಸ್​ ಉಗ್ರ ಸಂಘಟನೆಗಳ ನಡುವೆ ಇರುವ ನಂಟನ್ನು ಈ ಸಿನಿಮಾ ತೆರೆದಿಟ್ಟಿದೆ. ಇದು ಸತ್ಯ ಘಟನೆಗಳ ಆಧಾರಿತ ಸಿನಿಮಾ ಎಂದು ಚಿತ್ರತಂಡ ಹೇಳಿಕೊಂಡಿದೆ. ನಿರ್ದೇಶಕ ಸುದೀಪ್ತೋ ಸೇನ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ದೇಶದ ವಿವಿಧ ನಗರಗಳ ಸಾವಿರಾರು ಪರದೆಗಳಲ್ಲಿ ಇಂದು (ಮೇ 5) ‘ದಿ ಕೇರಳ ಸ್ಟೋರಿ’ ತೆರೆಕಂಡಿದೆ. ಮೊದಲ ದಿನ ಈ ಚಿತ್ರ ನೋಡಿದ ಪ್ರೇಕ್ಷಕರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಅದಾ ಶರ್ಮಾ ಅವರು ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಟ್ವಿಟರ್​ನಲ್ಲಿ (The Kerala Story Twitter Review) ಪರ-ವಿರೋಧದ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಸಿನಿಮಾದಲ್ಲಿ ತೋರಿಸಿರುವುದು ನಿಜವೋ ಸುಳ್ಳೋ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

ಸಿನಿಮಾ ನೋಡಿದ ಎಲ್ಲರೂ ಅದಾ ಶರ್ಮಾ ಅವರ ನಟನೆಯನ್ನು ಹೊಗಳಿದ್ದಾರೆ. ಕೆಲವು ವಿಮರ್ಶಕರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಇದರಿಂದ ಅದಾ ಶರ್ಮಾ ಅವರಿಗೆ ಖುಷಿ ಆಗಿದೆ. ಟ್ವಿಟರ್​ ಮೂಲಕ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಿನಿಮಾದಿಂದಾಗಿ ಅದಾ ಶರ್ಮಾ ಅವರ ಜನಪ್ರಿಯತೆ ಹೆಚ್ಚಾಗಿದೆ.

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತಡೆ ನೀಡಿ ಎಂದು ಸಲ್ಲಿಕೆ ಆಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ
Image
‘ದಿ ಕೇರಳ ಸ್ಟೋರಿ’ ಟ್ರೇಲರ್ ವಿರುದ್ಧ ಅಸಮಾಧಾನಗೊಂಡ ಕೇರಳ ಸಿಎಂ; ಚಿತ್ರಕ್ಕೆ ಬೀಳಲಿದೆ ತಡೆ?
Image
‘ಹಿಜಾಬ್ ಹಾಕಿದವರ ಮೇಲೆ ಅತ್ಯಾಚಾರ ಆಗಲ್ಲ, ಅಲ್ಲಾಹ್ ಮಾತ್ರ ಕಾಪಾಡುವವನು’; ಚರ್ಚೆ ಹುಟ್ಟುಹಾಕಿದ ‘ದಿ ಕೇರಳ ಸ್ಟೋರಿ’ ಟ್ರೇಲರ್
Image
The Kerala Story: ‘ದಿ ಕೇರಳ ಸ್ಟೋರಿ’ ವಿವಾದ: ‘ನಾವು ಸಾಕ್ಷಿ ಇಲ್ಲದೇ ಏನನ್ನೂ ಹೇಳಲ್ಲ’ ಎಂದ ನಿರ್ಮಾಪಕ ವಿಪುಲ್​ ಶಾ

‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ತೋರಿಸಿದ ಅಂಶಗಳು ಸಂಪೂರ್ಣ ಸುಳ್ಳು ಎಂದು ಕೆಲವರು ವಾದಿಸುತ್ತಿದ್ದಾರೆ. ರಾಜಕೀಯದ ಉದ್ದೇಶದಿಂದ ಈ ಸಿನಿಮಾ ಮಾಡಲಾಗಿದೆ ಎಂದು ಟ್ವೀಟ್​ ಮಾಡಿದ್ದಾರೆ. ಭಾರತದಲ್ಲಿನ ಮುಸ್ಲಿಮರಲ್ಲಿ ಭಯ ಹುಟ್ಟಿಸುವ ಸಲುವಾಗಿ ಈ ಸಿನಿಮಾ ನಿರ್ಮಾಣ ಆಗಿದೆ ಅಂತ ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

ಈ ಸಿನಿಮಾದಲ್ಲಿ ತೋರಿಸಿರುವುದು ಎಲ್ಲವೂ ಸತ್ಯ. ಇಷ್ಟು ದಿನ ಮುಚ್ಚಿಟ್ಟಿದ ವಿಚಾರಗಳನ್ನು ಈ ಸಿನಿಮಾ ಬಹಿರಂಗಪಡಿಸಿದೆ. ಈ ಸತ್ಯ ಎಲ್ಲರಿಗೂ ಗೊತ್ತಾಗಲಿ. ಈ ರೀತಿಯ ಸಿನಿಮಾ ಮಾಡಿದ್ದಕ್ಕಾಗಿ ಚಿತ್ರತಂಡಕ್ಕೆ ಧನ್ಯವಾದಗಳು. ಹುಡುಗಿಯರಿಗೆ ಇದು ಎಚ್ಚರಿಕೆ ಸಂದೇಶದ ರೀತಿ ಇದೆ. ಪೋಷಕರು ಖಂಡಿತವಾಗಿ ‘ದಿ ಕೇರಳ ಸ್ಟೋರಿ’ ಚಿತ್ರವನ್ನು ನೋಡಬೇಕು ಎಂಬ ಅಭಿಪ್ರಾಯ ಅನೇಕರಿಂದ ವ್ಯಕ್ತವಾಗಿದೆ.

ಮೊದಲ ದಿನ ‘ದಿ ಕೇರಳ ಸ್ಟೋರಿ’ ಸಿನಿಮಾಗೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಆದಂತಿಲ್ಲ. ಆದರೆ ಸೋಶಿಯಲ್​ ಮೀಡಿಯಾದಲ್ಲಿ ಈ ಚಿತ್ರದ ಬಗ್ಗೆ ಚರ್ಚೆ ಜೋರಾಗಿರುವುದರಿಂದ ವೀಕೆಂಡ್​ನಲ್ಲಿ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಆಗುವ ಸೂಚನೆ ಸಿಕ್ಕಿದೆ. ‘ದಿ ಕಾಶ್ಮೀರ್​ ಫೈಲ್ಸ್​’ ರೀತಿಯೇ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೂ ಬಾಯಿ ಮಾತಿನ ಪ್ರಚಾರ ಸಿಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.