AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೈಲರ್ ಇಲ್ಲದೇ ರಿಲೀಸ್ ಆಗಲಿದೆ ನಾನಿಯ ‘ದಿ ಪ್ಯಾರಡೈಸ್’ ಏಕೆ?

ಯಾವುದೇ ಸಿನಿಮಾ ರಿಲೀಸ್​​ಗೆ ಮುಂಚೆ ಆ ಸಿನಿಮಾದ ಟ್ರೈಲರ್ ರಿಲೀಸ್ ಮಾಡುವುದು ವಾಡಿಕೆ. ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವಲ್ಲಿ ಟ್ರೈಲರ್ ಮಹತ್ವದ ಪಾತ್ರ ವಹಿಸುತ್ತದೆ. ಎಷ್ಟೋ ಮಂದಿ ಸಿನಿಮಾದ ಟ್ರೈಲರ್ ನೋಡಿಯೇ ಸಿನಿಮಾ ನೋಡಬೇಕೇ ಬೇಡವೆ ಎಂಬ ನಿರ್ಧಾರ ಮಾಡುತ್ತಾರೆ. ಆದರೆ ನಟ ನಾನಿ ‘ದಿ ಪ್ಯಾರಡೈಸ್’ ಸಿನಿಮಾದ ಟ್ರೈಲರ್ ಅನ್ನು ರಿಲೀಸ್ ಮಾಡುತ್ತಿಲ್ಲ. ಅದಕ್ಕೆ ಕಾರಣವನ್ನೂ ಅವರು ವಿವರಿಸಿದ್ದಾರೆ.

ಟ್ರೈಲರ್ ಇಲ್ಲದೇ ರಿಲೀಸ್ ಆಗಲಿದೆ ನಾನಿಯ ‘ದಿ ಪ್ಯಾರಡೈಸ್’ ಏಕೆ?
The Paradise
ಮಂಜುನಾಥ ಸಿ.
|

Updated on: Sep 12, 2026 | 6:44 PM

Share

ಯಾವುದೇ ಸಿನಿಮಾ ಬಿಡುಗಡೆ ಆಗುವ ಮುಂಚೆ ಸಿನಿಮಾದ ಟೀಸರ್, ಟ್ರೈಲರ್ ಬಿಡುಗಡೆ ಮಾಡಲಾಗುತ್ತದೆ. ಟೀಸರ್ ಮತ್ತು ಟ್ರೈಲರ್​​ಗಳು ಪ್ರೇಕ್ಷಕರನ್ನು ಸಿನಿಮಾಕ್ಕೆ ಸೆಳೆಯುವಲ್ಲಿ ಬಹಳ ಪ್ರಮುಖವಾದ ಪಾತ್ರವಹಿಸುತ್ತವೆ. ಅದರಲ್ಲೂ ಸಿನಿಮಾದ ಟ್ರೈಲರ್, ಆ ಸಿನಿಮಾದ ಅತ್ಯಂತ ಪ್ರಮುಖ ಪ್ರಚಾರದ ಭಾಗ ಎನ್ನಲಾಗುತ್ತದೆ. ಸಿನಿಮಾದ ಟ್ರೈಲರ್​ ಕಟ್ ಮಾಡಲು ಹಾಗೂ ಟ್ರೈಲರ್ ರಿಲೀಸ್ ಮಾಡಲು ಹೆಚ್ಚಿನ ಶ್ರಮವನ್ನು ಚಿತ್ರತಂಡ ಹಾಕುತ್ತದೆ. ಅದರಲ್ಲೂ ದೊಡ್ಡ ನಟರ ಸಿನಿಮಾಗಳಿಗಂತೂ ಒಂದಕ್ಕೂ ಹೆಚ್ಚು ಟೀಸರ್ ರಿಲೀಸ್ ಮಾಡಲಾಗುತ್ತದೆ. ಟ್ರೈಲರ್ ಅನ್ನು ಬಲು ಅದ್ಧೂರಿಯಾಗಿ ರಿಲೀಸ್ ಮಾಡಲಾಗುತ್ತದೆ. ಆದರೆ ನಟ ನಾನಿ ತಮ್ಮ ಸಿನಿಮಾದ ಟ್ರೈಲರ್ ರಿಲೀಸ್ ಮಾಡುವ ಪದ್ಧತಿಯಿಂದಲೇ ಹಿಂದೆ ಸರಿದಿದ್ದಾರೆ.

ನಾನಿ ಇದೀಗ ‘ದಿ ಪ್ಯಾರಡೈಸ್’ ಹೆಸರಿನ ಸಿನಿಮಾನಲ್ಲಿ ನಟನೆ ಮಾಡುತ್ತಿದ್ದಾರೆ. ಸದಾ ಲವ್ವರ್ ಬಾಯ್ ಆಗಿ ಕಾಣಿಸಿಕೊಳ್ಳುವ ನಾನಿ ‘ದಿ ಪ್ಯಾರಡೈಸ್’ ಸಿನಿಮಾನಲ್ಲಿ ಬಹಳ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಸಖತ್ ಮಾಸ್ ಆಗಿ ಜೊತೆಗೆ ಒಂದು ರೀತಿ ಠಪೋರಿ ಲುಕ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಕತೆ ಸಾಮಾನ್ಯ ಕಮರ್ಶಿಯಲ್ ಸಿನಿಮಾಗಳಿಗಿಂತ ಬಹಳ ಭಿನ್ನವಾಗಿರಲಿದೆ ಎನ್ನಲಾಗುತ್ತಿದೆ. ನಾನಿ ಸಹ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇರಿಸಿಕೊಂಡಿದ್ದಾರೆ. ಆದರೆ ಈ ಸಿನಿಮಾದ ಟ್ರೈಲರ್ ರಿಲೀಸ್ ಮಾಡದೇ ಇರಲು ಅವರು ನಿರ್ಧಾರ ಮಾಡಿದ್ದಾರೆ.

‘ದಿ ಪ್ಯಾರಡೈಸ್’ ಸಿನಿಮಾದ ಟ್ರೈಲರ್ ಅನ್ನು ಬಿಡುಗಡೆ ಮಾಡದೇ ಇರುವ ನಿರ್ಧಾರವನ್ನು ನಾನಿ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ನಟ ನಾನಿ, ‘ದಿ ಪ್ಯಾರಡೈಸ್’ ಚಿತ್ರದ ಬಗ್ಗೆ ಈಗಾಗಲೆ ಸಾಕಷ್ಟು ಸಕಾರಾತ್ಮಕ ಪ್ರಚಾರ ಆಗಿದೆ. ಇಲ್ಲಿಯವರೆಗೆ ಬಿಡುಗಡೆಯಾದ ಪ್ರಚಾರ ಸಾಮಗ್ರಿ ಮತ್ತು ವೈರಲ್ ಆಗಿರುವ ಹಾಡುಗಳ ಕಾರಣದಿಂದ ಒಳ್ಳೆಯ ಪ್ರಚಾರ ಆಗಿದೆ. ಈ ಜನಪ್ರಿಯತೆಯಿಂದಾಗಿ ಚಿತ್ರವು ಭರ್ಜರಿ ಆರಂಭವನ್ನು ಪಡೆಯುವ ನಿರೀಕ್ಷೆಯಿದೆ’ ಎಂದಿದ್ದಾರೆ ನಟ ನಾನಿ.

ಇದನ್ನೂ ಓದಿ:ಈ ವಾರ ಒಟಿಟಿಗೆ ಬಂದಿವೆ ಜಬರ್ಧಸ್ತ್ ಸಿನಿಮಾಗಳು: ನಿಮ್ಮ ಆಯ್ಕೆ ಯಾವುದು?

‘ಚಿತ್ರದ ಬಿಡುಗಡೆಯ ದಿನಾಂಕ ಹತ್ತಿರವಾಗುತ್ತಿರುವ ಈ ಸಂದರ್ಭದಲ್ಲಿ, ಉತ್ತಮ ಟ್ರೈಲರ್ ಅನ್ನು ಸಿದ್ಧಪಡಿಸಲು ನಿರ್ದೇಶಕ ಶ್ರೀಕಾಂತ್, ಸಂಗೀತ ನಿರ್ದೇಶಕ ಅನಿರುದ್ಧ್ ಮತ್ತು ಇತರರು ನಾಲ್ಕೈದು ದಿನಗಳನ್ನು ಅದಕ್ಕಾಗಿ ವ್ಯಯಿಸಬೇಕಾಗುತ್ತದೆ. ನಮ್ಮ ಬಳಿ ಹೆಚ್ಚು ಸಮಯವಿಲ್ಲದಿರುವುದರಿಂದ, ಚಿತ್ರ ಮತ್ತು ಟ್ರೈಲರ್ – ಇವುಗಳಲ್ಲಿ ಒಂದನ್ನು ಆರಿಸಿಕೊಳ್ಳಬೇಕಾದ ಪರಿಸ್ಥಿತಿಯಲ್ಲಿ ನಾವು ಚಿತ್ರಕ್ಕೆ ಆದ್ಯತೆ ನೀಡಿದ್ದೇವೆ. ‘ದಿ ಪ್ಯಾರಡೈಸ್’ ಚಿತ್ರವನ್ನು ನಿಗದಿತ ಸಮಯಕ್ಕೆ ಬಿಡುಗಡೆ ಮಾಡಲು ಹಲವು ತಂಡಗಳು ಶ್ರಮಿಸುತ್ತಿವೆ. ಹೀಗಿರುವಾಗ ಟ್ರೈಲರ್ ಕಾರಣಕ್ಕೆ ಅವರ ಮೇಲೆ ಒತ್ತಡ ಹೇರುವುದು ನಮಗೆ ಇಷ್ಟವಿಲ್ಲ’ ಎಂದಿದ್ದಾರೆ ನಾನಿ.

‘ದಿ ಪ್ಯಾರಡೈಸ್’ ಸಿನಿಮಾ ಕಮರ್ಶಿಯಲ್ ಸಿನಿಮಾ ಆಗಿದ್ದು, ನಟ ನಾನಿ ಜಡೆ ಕಟ್ಟಿಕೊಂಡು ಭಿನ್ನವಾಗಿ ಸಿನಿಮಾನಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಅನ್ನು ಶ್ರೀಕಾಂತ್ ಒಡೆಲ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ನೀಡಿದ್ದಾರೆ. ಸಿನಿಮಾದ ‘ಆಯಾ ಶೇರ್’ ಹಾಡು ಈಗಾಗಲೇ ಸಖತ್ ವೈರಲ್ ಆಗಿದೆ. ಸೆಪ್ಟೆಂಬರ್ 24ಕ್ಕೆ ಸಿನಿಮಾ ರಿಲೀಸ್ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!