ದಿ ರಾಜಾ ಸಾಬ್: ಹುಟ್ಟುಹಬ್ಬದ ದಿನ ಹಾರರ್ ಅವತಾರದಲ್ಲಿ ದರ್ಶನ ನೀಡಿದ ಪ್ರಭಾಸ್

ಪ್ರಭಾಸ್ ಅವರು ಇಂದು (ಅಕ್ಟೋಬರ್​ 23) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಅಭಿಮಾನಿಗಳಿಗಾಗಿ ‘ದಿ ರಾಜಾ ಸಾಬ್’ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮೋಷನ್ ಪೋಸ್ಟರ್​ ನೋಡಿದ ಅಭಿಮಾನಿಗಳಿಗೆ ಖುಷಿ ಆಗಿದೆ. ಇದು ಹಾರರ್ ಸಿನಿಮಾ ಆದ್ದರಿಂದ ನಿರೀಕ್ಷೆ ಜಾಸ್ತಿ ಆಗಿದೆ. ಮಾರುತಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ದಿ ರಾಜಾ ಸಾಬ್: ಹುಟ್ಟುಹಬ್ಬದ ದಿನ ಹಾರರ್ ಅವತಾರದಲ್ಲಿ ದರ್ಶನ ನೀಡಿದ ಪ್ರಭಾಸ್
ಪ್ರಭಾಸ್
Follow us
ಮದನ್​ ಕುಮಾರ್​
|

Updated on: Oct 23, 2024 | 3:03 PM

ನಟ ಪ್ರಭಾಸ್ ಅವರಿಗೆ ಇಂದು (ಅ.23) ಜನ್ಮದಿನದ ಸಂಭ್ರಮ. ಈ ಖುಷಿಯನ್ನು ಹೆಚ್ಚಿಸಲು ‘ದಿ ರಾಜಾ ಸಾಬ್’ ಸಿನಿಮಾ ತಂಡದವರು ಹೊಸ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಈ ಮೊದಲು ಹೊರಬಂದಿದ್ದ ಪೋಸ್ಟರ್​ನಲ್ಲಿ ಪ್ರಭಾಸ್​ ಅವರು ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದರು. ಆದರೆ ಈಗ ಅವರು ಹಾರರ್​ ಲುಕ್​ನಲ್ಲಿ ಬಂದಿದ್ದಾರೆ. ಅವರ ಹೊಸ ಗೆಟಪ್​ ನೋಡಿ ಅಭಿಮಾನಿಗಳಿಗೆ ಥ್ರಿಲ್ ಆಗಿದೆ. ‘ದಿ ರಾಜಾ ಸಾಬ್’ ಸಿನಿಮಾವನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಮಾರುತಿ ನಿರ್ದೇಶನದ ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ.

ಇದುವರೆಗೂ ಆ್ಯಕ್ಷನ್, ಫ್ಯಾಂಟಸಿ, ಲವ್​ಸ್ಟೋರಿ ಸಿನಿಮಾಗಳ ಮೂಲಕ ಪ್ರಭಾಸ್​ ಅವರು ಜನರನ್ನು ರಂಜಿಸಿದ್ದರು. ಈಗ ಇದೇ ಮೊದಲ ಬಾರಿಗೆ ಅವರು ಹಾರರ್​ ಸಿನಿಮಾವನ್ನು ಪ್ರಯತ್ನಿಸುತ್ತಿದ್ದಾರೆ. ಅವರ ಬರ್ತ್​ಡೇ ಪ್ರಯುಕ್ತ ರಿಲೀಸ್ ಆಗಿರುವ ಮೋಷನ್ ಪೋಸ್ಟರ್​ನಲ್ಲಿ ಹಾರರ್ ಫೀಲ್​ ಇದೆ. ಇದರಲ್ಲಿ ಕಥೆಯ ಬಗ್ಗೆ ಯಾವುದೇ ಸುಳಿವು ನೀಡಿಲ್ಲ. ಅಭಿಮಾನಿಗಳು ಈ ಮೋಷನ್ ಪೋಸ್ಟರ್​ಗೆ ಪಾಸಿಟಿವ್ ಆಗಿ ಕಮೆಂಟ್ ಮಾಡುತ್ತಿದ್ದಾರೆ.

View this post on Instagram

A post shared by Prabhas (@actorprabhas)

ಪ್ರಭಾಸ್ ಅವರಿಗೆ ಈ ವರ್ಷದ ಹುಟ್ಟುಹಬ್ಬ ತುಂಬ ವಿಶೇಷವಾಗಿದೆ. ಯಾಕೆಂದರೆ, ಅವರು ನಟಿಸಿದ ‘ಕಲ್ಕಿ 2898 ಎಡಿ’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಿದೆ. ಅದಕ್ಕೂ ಮುನ್ನ ‘ಸಲಾರ್’ ಸಿನಿಮಾ ಯಶಸ್ಸು ಕಂಡಿತ್ತು. ಈ ಎರಡು ಗೆಲುವಿನಿಂದ ಪ್ರಭಾಸ್ ಅವರು ಮತ್ತೆ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ‘ಸಾಹೋ’, ‘ರಾಧೆ ಶ್ಯಾಮ್’, ‘ಆದಿಪುರುಷ್’ ಚಿತ್ರಗಳ ಸೋಲಿನ ಬಳಿಕ ಅವರು ಈಗ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ.

ಇದನ್ನೂ ಓದಿ: ಮುಂಚಿತವಾಗಿ ನಟ ಪ್ರಭಾಸ್ ಜನ್ಮದಿನ ಆಚರಿಸಿದ ಟೋಕಿಯೋ ಅಭಿಮಾನಿಗಳು

‘ಹಾರರ್ ಎಂಬುದು ಹೊಸ ಹಾಸ್ಯ’ ಎಂಬ ಟ್ಯಾಗ್​ಲೈನ್​ ‘ದಿ ರಾಜಾ ಸಾಬ್’ ಮೋಷನ್ ಪೋಸ್ಟರ್​ನಲ್ಲಿ ಗಮನ ಸೆಳೆದಿದೆ. 2025ರ ಏಪ್ರಿಲ್​ 10ರಂದು ಈ ಸಿನಿಮಾ ತೆರೆಕಾಣಲಿದೆ.

‘ದಿ ರಾಜಾ ಸಾಬ್’ ಮೋಷನ್ ಪೋಸ್ಟರ್​:

ಇಂದು (ಅ.23) ಪ್ರಭಾಸ್ ಅವರ 45ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಈ ಸಿನಿಮಾದ ಮೋಷನ್ ಪೋಸ್ಟರ್​ನಿಂದ ಇನ್ನಷ್ಟು ಮೆರುಗು ಬಂದಿದೆ. ಪ್ರಭಾಸ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಪೋಸ್ಟರ್ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ