AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚಲ್ಲ’; ‘ಪಠಾಣ್​’ ಟೀಕಿಸಿದವರಿಗೆ ಪ್ರಕಾಶ್ ರಾಜ್ ತಿರುಗೇಟು

‘ಪಠಾಣ್’ ಸಿನಿಮಾ ರಿಲೀಸ್​ಗೂ ಮೊದಲು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಒಂದು ವರ್ಗದ ಜನರು ಆಗ್ರಹಿಸಿದ್ದರು. ಆದರೆ, ಇದು ಕೆಲಸ ಮಾಡಿಲ್ಲ.

‘ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚಲ್ಲ’; ‘ಪಠಾಣ್​’ ಟೀಕಿಸಿದವರಿಗೆ ಪ್ರಕಾಶ್ ರಾಜ್ ತಿರುಗೇಟು
ಪ್ರಕಾಶ್ ರಾಜ್
ರಾಜೇಶ್ ದುಗ್ಗುಮನೆ
|

Updated on:Feb 07, 2023 | 11:10 AM

Share

ಪ್ರಕಾಶ್ ರಾಜ್ (Prakash Raj) ಅವರು ತಮ್ಮ ನಟನೆ ಮೂಲಕ ಅನೇಕರಿಗೆ ಇಷ್ಟವಾಗುತ್ತಾರೆ. ಆದರೆ, ಒಂದು ವರ್ಗದ ಜನರಿಗೆ ಅವರ ಚಿಂತನೆಗಳು ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕೆಲವರು ಅವರನ್ನು ದ್ವೇಷ ಮಾಡುತ್ತಾರೆ. ಆದರೆ, ಪ್ರಕಾಶ್ ರಾಜ್ ಎಂದಿಗೂ ಸುಮ್ಮನೆ ಕೂತವರಲ್ಲ. ತಮ್ಮ ಅಭಿಪ್ರಾಯಗಳನ್ನು ಅವರು ಹಂಚಿಕೊಳ್ಳುತ್ತಲೇ ಇರುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಅವರು ಅನೇಕ ಬಾರಿ ಟೀಕೆ ಮಾಡಿದ್ದಾರೆ. ಈಗ ‘ಪಠಾಣ್’ ಸಿನಿಮಾ (Pathaan Movie) ಯಶಸ್ಸಿನ ಬಗ್ಗೆ ಪ್ರಕಾಶ್ ರಾಜ್ ಮಾತನಾಡಿದ್ದಾರೆ. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್ ಬಗ್ಗೆಯೂ ಟೀಕೆ ಮಾಡಿದ್ದಾರೆ.

‘ಪಠಾಣ್’ ಸಿನಿಮಾ ರಿಲೀಸ್​ಗೂ ಮೊದಲು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಒಂದು ವರ್ಗದ ಜನರು ಆಗ್ರಹಿಸಿದ್ದರು. ಆದರೆ, ಇದು ಕೆಲಸ ಮಾಡಿಲ್ಲ. ಈ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ವಿಚಾರ ಇಟ್ಟುಕೊಂಡು ಕೆಲವರು ಬೈಕಾಟ್ ಗ್ಯಾಂಗ್​ನ ಟೀಕೆ ಮಾಡುತ್ತಿದ್ದಾರೆ. ಪ್ರಕಾಶ್ ರಾಜ್ ಕೂಡ ಈ ಬಗ್ಗೆ ಮಾತನಾಡಿದ್ದಾರೆ.

ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಪ್ರಕಾಶ್ ರಾಜ್​, ‘ಅವರು ಪಠಾಣ್ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಅಂದುಕೊಂಡಿದ್ದರು. ಆದರೆ, ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮೂರ್ಖರು, ಮತಾಂಧರು ಪಠಾಣ್​ನ ಬ್ಯಾನ್ ಮಾಡಲು ಬಯಸಿದ್ದರು. ಅವರಿಗೆ ಮೋದಿ ಸಿನಿಮಾಗೆ 30 ಕೋಟಿ ರೂಪಾಯಿ ಕಲೆಕ್ಷನ್ ಮಾಡಿಸಲು ಸಾಧ್ಯವಾಗಿಲ್ಲ. ಅವರು ಬೊಗಳುತ್ತಾರೆ, ಕಚ್ಚುವುದಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ‘ನನ್ನನ್ನು ದೂರ ಇಟ್ಟಿದ್ದಾರೆ’; ರಾಜಕೀಯ ನಿಲುವುಗಳಿಂದ ಪ್ರಕಾಶ್ ರಾಜ್​​ಗೆ ತಪ್ಪುತ್ತಿದೆ ಸಿನಿಮಾ ಆಫರ್

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನೂ ಪ್ರಕಾಶ್ ರಾಜ್ ಟೀಕೆ ಮಾಡಿದ್ದಾರೆ. ‘ಕಾಶ್ಮೀರ್ ಫೈಲ್ಸ್​ ನಾನ್ಸೆನ್ಸ್ ಸಿನಿಮಾ. ಅದನ್ನು ನಿರ್ಮಾಣ ಮಾಡಿದ್ದು ಯಾರು ಅನ್ನೋದು ನಿಮಗೆ ಗೊತ್ತಿದೆ. ಅಂತಾರಾಷ್ಟ್ರಿಯ ಜ್ಯೂರಿಗಳು ಚಿತ್ರವನ್ನು ತೆಗಳಿದರು. ಈ ಚಿತ್ರದ ನಿರ್ದೇಶಕ ನಮ್ಮ ಚಿತ್ರಕ್ಕೆ ಏಕೆ ಆಸ್ಕರ್ ಸಿಗುತ್ತಿಲ್ಲ ಎಂದು ಕೇಳುತ್ತಿದ್ದಾರೆ. ಇಲ್ಲಿ ನೀವು ಪ್ರೊಪೊಗಾಂಡ ಚಿತ್ರಗಳನ್ನು ಮಾಡಬಹುದು. ಈ ರೀತಿಯ ಸಿನಿಮಾಗಳನ್ನು ನಿರ್ಮಾಣ ಮಾಡಲು ಅವರು 2000 ಸಾವಿರ ಕೋಟಿ ಹೂಡಿಕೆ ಮಾಡಿದ್ದಾರೆ. ಆದರೆ, ಎಲ್ಲಾ ಬಾರಿಯೂ ಜನ್ನರು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:01 am, Tue, 7 February 23

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು