Ponniyin Selvan: ಮಣಿರತ್ನಂ ಚಿತ್ರದ ಆಫರ್​ ರಿಜೆಕ್ಟ್​ ಮಾಡಿದ್ದೇಕೆ ‘ಹೆಬ್ಬುಲಿ’ ನಟಿ ಅಮಲಾ ಪೌಲ್​?

Amala Paul | Mani Ratnam: ‘ಪೊನ್ನಿಯಿನ್​ ಸೆಲ್ವನ್​’ ಚಿತ್ರದಲ್ಲಿ ನಟಿಸುವ ಅವಕಾಶವನ್ನು ಅಮಲಾ ಪೌಲ್ ಕೈ ಚೆಲ್ಲಿದರು. ಆ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Ponniyin Selvan: ಮಣಿರತ್ನಂ ಚಿತ್ರದ ಆಫರ್​ ರಿಜೆಕ್ಟ್​ ಮಾಡಿದ್ದೇಕೆ ‘ಹೆಬ್ಬುಲಿ’ ನಟಿ ಅಮಲಾ ಪೌಲ್​?
ಅಮಲಾ ಪೌಲ್, ಮಣಿರತ್ನಂ
Follow us
TV9 Web
| Updated By: ಮದನ್​ ಕುಮಾರ್​

Updated on:Sep 12, 2022 | 8:32 AM

ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಅವರು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಕ್ಲಾಸಿಕ್​ ಸಿನಿಮಾಗಳ ಮೂಲಕ ಅವರು ಗಮನ ಸೆಳೆದಿದ್ದಾರೆ. ಅವರ ಜೊತೆ ಕೆಲಸ ಮಾಡಬೇಕು ಎಂದು ಅನೇಕ ನಟ-ನಟಿಯರು, ತಂತ್ರಜ್ಞರು ಕಾದಿರುತ್ತಾರೆ. ಆದರೆ ‘ಹೆಬ್ಬುಲಿ’ ಖ್ಯಾತಿಯ ನಟಿ ಅಮಲಾ ಪೌಲ್ (Amala Paul)​ ಅವರು ಇಂಥ ಅವಕಾಶವನ್ನು ಕೈ ಚೆಲ್ಲಿದ್ದಾರೆ. ಅದು ಕೂಡ ಎರಡು ಬಾರಿ! ಹೌದು, ಮಣಿರತ್ನಂ ನಿರ್ದೇಶನ ಮಾಡುತ್ತಿರುವ ಪೊನ್ನಿಯಿನ್​ ಸೆಲ್ವನ್​’ (Ponniyin Selvan) ಸಿನಿಮಾದಲ್ಲಿ ನಟಿಸುವಂತೆ ಅಮಲಾ ಪೌಲ್​ ಅವರಿಗೆ ಆಫರ್​ ನೀಡಲಾಗಿತ್ತು. ಆದರೆ ಆ ಚಿತ್ರದಲ್ಲಿ ನಟಿಸಲು ಅವರು ಹಿಂದೇಟು ಹಾಕಿದರು. ಅದಕ್ಕೆ ಕಾರಣ ಕೂಡ ಇದೆ.

‘ಪೊನ್ನಿಯಿನ್​ ಸೆಲ್ವನ್​’ ಚಿತ್ರದಲ್ಲಿ ಬಹುತಾರಾಗಣವಿದೆ. ಐಶ್ವರ್ಯಾ ರೈ ಬಚ್ಚನ್​, ಚಿಯಾನ್ ವಿಕ್ರಮ್​, ಕಾರ್ತಿ, ತ್ರಿಷಾ, ಪ್ರಕಾಶ್​ ರಾಜ್​, ಜಯಂ ರವಿ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಂದು ಮುಖ್ಯ ಪಾತ್ರದಲ್ಲಿ ಬಣ್ಣ ಹಚ್ಚುವಂತೆ ಅಮಲಾ ಪೌಲ್​ ಅವರಿಗೂ ಆಫರ್​ ನೀಡಲಾಗಿತ್ತು. ಅದಕ್ಕಾಗಿ ಅವರು ಆಡಿಷನ್​ನಲ್ಲಿಯೂ ಭಾಗವಹಿಸಿ ಆಯ್ಕೆ ಆಗಿದ್ದರು. ಆದರೆ ಆ ಸಂದರ್ಭದಲ್ಲಿ ‘ಪೊನ್ನಿಯಿನ್​ ಸೆಲ್ವನ್​’ ಚಿತ್ರ ಸೆಟ್ಟೇರುವುದು ತಡವಾದ್ದರಿಂದ ಅವರು ಚಿತ್ರತಂಡದಿಂದ ಹೊರನಡೆದಿದ್ದರು.

‘ನಾನು ಮಣಿರತ್ನಂ ಸರ್​ ಅಭಿಮಾನಿ. ಮೊದಲ ಸಲ ಈ ಚಿತ್ರ ಸೆಟ್ಟೇರದೇ ಇದ್ದಾಗ ನನಗೆ ತುಂಬ ಬೇಸರ ಆಗಿತ್ತು. 2021ರಲ್ಲಿ ಅದೇ ಪ್ರಾಜೆಕ್ಟ್​ಗಾಗಿ ನನಗೆ ಅವರು ಮತ್ತೆ ಕರೆ ಮಾಡಿದರು. ಆದರೆ ಆಗ ನಾನು ಸಿನಿಮಾದಲ್ಲಿ ನಟಿಸುವ ಮನಸ್ಥಿತಿ ಹೊಂದಿರಲಿಲ್ಲ. ಅಂಥ ಅವಕಾಶ ಮಿಸ್​ ಮಾಡಿಕೊಂಡಿದ್ದಕ್ಕೆ ನನಗೆ ಬೇಸರ ಇಲ್ಲ. ಕೆಲವೊಂದು ವಿಷಯಗಳು ಆಗುವುದೇ ಹೀಗೆ’ ಎಂದು ಟೈಮ್ಸ್ ಆಫ್​ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಅಮಲಾ ಪೌಲ್​ ಹೇಳಿದ್ದಾರೆ.

ಇದನ್ನೂ ಓದಿ
Image
Ponniyin Selvan: ರಜನಿಕಾಂತ್​ ಕಾಲಿಗೆ ನಮಸ್ಕರಿಸಿದ ಐಶ್ವರ್ಯಾ ರೈ ಬಚ್ಚನ್​; ವಿಡಿಯೋ ವೈರಲ್​
Image
Ponniyin Selvan: ನಿರೀಕ್ಷೆ ಹೆಚ್ಚಿಸಿದ ‘ಪೊನ್ನಿಯಿನ್​ ಸೆಲ್ವನ್​’ ಟ್ರೇಲರ್​; ಸೆ.30ಕ್ಕೆ ಮಣಿರತ್ನಂ ಚಿತ್ರ ರಿಲೀಸ್​
Image
‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಸೆಟ್​ನಲ್ಲಿ ಐಶ್ವರ್ಯಾ ರೈ; ವೈರಲ್ ಆಯ್ತು ಫೋಟೋ  
Image
‘ಪೊನ್ನಿಯಿನ್​ ಸೆಲ್ವನ್​’ ಚಿತ್ರದ ಟೀಸರ್ ರಿಲೀಸ್ ಮಾಡಿದ ರಕ್ಷಿತ್ ಶೆಟ್ಟಿ; ಗಮನ ಸೆಳೆದ ಐಶ್ವರ್ಯಾ, ವಿಕ್ರಮ್

ಕಲ್ಕಿ ಕೃಷ್ಣಮೂರ್ತಿ ಅವರು ಬರೆದ ‘ಪೊನ್ನಿಯಿನ್ ಸೆಲ್ವನ್​’ ಕಾದಂಬರಿ ಆಧರಿಸಿ ಈ ಚಿತ್ರ ತಯಾರಾಗಿದೆ. ಅದ್ದೂರಿ ಬಜೆಟ್​ನಲ್ಲಿ ಸಿನಿಮಾ ಮೂಡಿಬಂದಿದೆ. ಕೆಲವೇ ದಿನಗಳ ಹಿಂದೆ ಟ್ರೇಲರ್​ ಬಿಡುಗಡೆ ಆಗಿದ್ದು, ಎಲ್ಲರ ಪಾತ್ರಗಳ ಬಗ್ಗೆಯೂ ಪರಿಚಯ ಮಾಡಿಕೊಡಲಾಗಿದೆ. ಸೆಪ್ಟೆಂಬರ್​ 30ರಂದು ಈ ಚಿತ್ರ ರಿಲೀಸ್​ ಆಗಲಿದೆ.

ಇದು ಪ್ಯಾನ್​ ಇಂಡಿಯಾ ಸಿನಿಮಾಗಳ ಜಮಾನಾ. ಈ ಟ್ರೆಂಡ್​ನಲ್ಲಿ ‘ಪೊನ್ನಿಯಿನ್​ ಸೆಲ್ವನ್​’ ಚಿತ್ರ ಕೂಡ ಇದೆ. ತಮಿಳಿನ ಈ ಸಿನಿಮಾ ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿಗೆ ಡಬ್​ ಆಗಿ ತೆರೆಕಾಣುತ್ತಿದೆ. ಇದರ ಹಾಡುಗಳು ಮತ್ತೆ ಟ್ರೇಲರ್​ ಗಮನ ಸೆಳೆದಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:32 am, Mon, 12 September 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ