ಮಾಜಿ ಗಂಡನ 2ನೇ ನಿಶ್ಚಿತಾರ್ಥದ ದಿನವೇ ಒಡೆದ ಹೃದಯದ ಎಮೋಜಿ ಹಾಕಿದ ಸಮಂತಾ; ಆದರೆ..

ನಟಿ ಸಮಂತಾ ರುತ್​ ಪ್ರಭು ಅವರು ಸಿಂಗಲ್​ ಆಗಿಯೇ ಉಳಿದುಕೊಂಡಿದ್ದಾರೆ. ಆದರೆ ಅವರ ಮಾಜಿ ಪತಿ ನಾಗ ಚೈತನ್ಯ 2ನೇ ಮದುವೆಗೆ ಸಜ್ಜಾಗಿದ್ದಾರೆ. ಇಂದು (ಆಗಸ್ಟ್​ 8) ನಟಿ ಶೋಭಿತಾ ಜೊತೆ ನಾಗ ಚೈತನ್ಯ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ. ಇದೇ ದಿನ ಸಮಂತಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡ ಒಂದು ಪೋಸ್ಟ್​ ವೈರಲ್​ ಆಗಿದೆ.

ಮಾಜಿ ಗಂಡನ 2ನೇ ನಿಶ್ಚಿತಾರ್ಥದ ದಿನವೇ ಒಡೆದ ಹೃದಯದ ಎಮೋಜಿ ಹಾಕಿದ ಸಮಂತಾ; ಆದರೆ..
ಶೋಭಿತಾ, ನಾಗ ಚೈತನ್ಯ, ಸಮಂತಾ
Follow us
ಮದನ್​ ಕುಮಾರ್​
|

Updated on: Aug 08, 2024 | 9:52 PM

ಆಗಸ್ಟ್​ 8, ಅನೇಕರ ಪಾಲಿಗೆ ಇದು ವಿಶೇಷ ದಿನಾಂಕ. ಒಂದೆಡೆ ಯಶ್​ ಅವರ ‘ಟಾಕ್ಸಿಕ್​’ ಸಿನಿಮಾ ಸೆಟ್ಟೇರಿದೆ. ಇನ್ನೊಂದೆಡೆ ನಾಗ ಚೈತನ್ಯ ಅವರು ನಟಿ ಶೋಭಿತಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಾಗ ಚೈತನ್ಯ ಅವರಿಗೆ ವಿಚ್ಛೇದನ ನೀಡಿರುವ ಸಮಂತಾ ಅವರು ಈಗಲೂ ಸಿಂಗಲ್​ ಆಗಿಯೇ ಇದ್ದಾರೆ. ಮಾಜಿ ಗಂಡ ಇಂದು ಬೇರೆ ನಟಿ ಜೊತೆ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರಿಂದ ಸಮಂತಾ ಯಾವ ರೀತಿ ಪ್ರತಿಕ್ರಿಯೆ ನೀಡಬಹುದು ಎಂಬ ಕೌತುಕ ಎಲ್ಲರಲ್ಲೂ ಇದೆ. ಇಂದು ಬೇರೊಂದು ಕಾರಣಕ್ಕಾಗಿ ಸಮಂತಾ ರುತ್​ ಪ್ರಭು ಅವರು ಒಡೆದ ಹೃದಯದ ಎಮೋಜಿ ಶೇರ್​ ಮಾಡಿಕೊಂಡಿದ್ದಾರೆ.

ಸಮಂತಾ ಅವರು ಇನ್​ಸ್ಟಾಗ್ರಾಮ್​ ಬಳಕೆಯಲ್ಲಿ ತುಂಬ ಸಕ್ರಿಯವಾಗಿದ್ದಾರೆ. ಸಿನಿಮಾ, ರಾಜಕೀಯ ಮುಂತಾದ ಅನೇಕ ವಿಚಾರಗಳ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಪ್ರತಿಕ್ರಿಯೆ ನೀಡುತ್ತಾರೆ. ಆಗಸ್ಟ್​ 8ರಂದು ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಒಡೆದ ಹೃದಯದ ಎಮೋಜಿಯನ್ನು ಪೋಸ್ಟ್​ ಮಾಡಿದ್ದಾರೆ. ಹಾಗಂತ ಇದು ನಾಗ ಚೈತನ್ಯ ಅವರ ನಿಶ್ಚಿತಾರ್ಥಕ್ಕೆ ಸಂಬಂಧಿಸಿದ್ದಲ್ಲ.

ಭಾರತದ ಕ್ರೀಡಾಪ್ರೇಮಿಗಳಿಗೆ ಆಗಸ್ಟ್​ 8 ಎಂದರೆ ಬೇಸರದ ದಿನವಾಗಿ ಪರಿಣಮಿಸಿದೆ. ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಬಂಗಾರದ ಪದಕ ಗೆಲ್ಲುವ ಅವಕಾಶದಿಂದ ಕೊನೇ ಕ್ಷಣದಲ್ಲಿ ವಂಚಿತರಾದ ವಿನೇಶ್​ ಫೋಗಟ್​ ಅವರು ಕುಸ್ತಿಗೆ ವಿದಾಯ ಹೇಳಿದ್ದಾರೆ. ಇಂದು (ಆ.8) ಅವರು ನಿವೃತ್ತಿ ಘೋಷಿಸಿದ್ದಾರೆ. ಈ ವಿಷಯವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ಸಮಂತಾ ಅವರು ಒಡೆದ ಹೃದಯದ ಎಮೋಜಿಯನ್ನು ಬಳಸಿದ್ದಾರೆ.

ಇದನ್ನೂ ಓದಿ: ಅಚ್ಚರಿ ಮೂಡಿಸುತ್ತೆ ಸಮಂತಾ ಸಂಭಾವನೆ ಮೊತ್ತ; ‘ಹನಿ’ ಪಾತ್ರಕ್ಕಾಗಿ ದುಬಾರಿ ಪೇಮೆಂಟ್​

ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಒಂದು ಕಾಲದಲ್ಲಿ ಪ್ರೇಮಿಗಳಾಗಿದ್ದರು. ಹಲವು ವರ್ಷ ಪ್ರೀತಿಸಿ ದಾಂಪತ್ಯ ಜೀವನಕ್ಕೂ ಕಾಲಿಟ್ಟರು. ಆದರೆ ನಾಲ್ಕು ವರ್ಷ ಕಳೆಯುವುದರಲ್ಲಿ ಅವರ ಸಂಸಾರದಲ್ಲಿ ಬಿರುಕು ಮೂಡಿತು. ಅವರಿಬ್ಬರು ವಿಚ್ಛೇದನ ಘೋಷಿಸಿದಾಗ ಅಭಿಮಾನಿಗಳಿಗೆ ತೀವ್ರ ಬೇಸರ ಉಂಟಾಗಿತ್ತು. ಡಿವೋರ್ಸ್​ಗೆ ಕಾರಣ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ.

ಸಮಂತಾ ಇನ್​ಸ್ಟಾಗ್ರಾಮ್​ ಸ್ಟೋರಿ

ವಿಚ್ಛೇದನ ಪಡೆದ ಬಳಿಕ ಸಮಂತಾ ಅವರ ವೃತ್ತಿ ಜೀವನಕ್ಕೆ ಹೊಸ ವೇಗ ಸಿಕ್ಕಿತು. ಬರುವ ಆಫರ್​ಗಳು ಹೆಚ್ಚಾದವು. ಮಾಜಿ ಗಂಡ ಮತ್ತು ಡಿವೋರ್ಸ್​ ವಿಚಾರವನ್ನು ಮರೆತು ಸಮಂತಾ ಮುಂದೆ ಸಾಗಿದ್ದಾರೆ. ಹಾಗಾಗಿ ನಾಗಚೈತನ್ಯ ಹಾಗೂ ಶೋಭಿತಾ ಅವರ ನಿಶ್ಚಿತಾರ್ಥದ ಬಗ್ಗೆ ಸಮಂತಾ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂಬುದು ಅಭಿಮಾನಿಗಳ ಅಭಿಪ್ರಾಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು