Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್​ ಬಾಸ್​ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಎಲಿಮಿನೇಟ್​ ಆಗೋರು ಇವರೇನಾ?

ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ನಿಧಿ ಸುಬ್ಬಯ್ಯ, ಮಂಜು ಪಾವಗಡ, ದಿವ್ಯಾ ಸುರೇಶ್ ಮತ್ತು ಪ್ರಿಯಾಂಕಾ ತಿಮ್ಮೇಶ್​ ಮೇಲೆ ಎಲಿಮಿನೇಷನ್​​ ತೂಗುಗತ್ತಿ ತೂಗುತ್ತಿದೆ.

ಕನ್ನಡ ಬಿಗ್​ ಬಾಸ್​ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಎಲಿಮಿನೇಟ್​ ಆಗೋರು ಇವರೇನಾ?
ಕನ್ನಡ ಬಿಗ್​ ಬಾಸ್​
Follow us
TV9 Web
| Updated By: Digi Tech Desk

Updated on:Jun 26, 2021 | 4:19 PM

‘ಕನ್ನಡ ಬಿಗ್​ ಬಾಸ್ ಸೀಸನ್​ 8’​ ಎರಡನೇ ಇನ್ನಿಂಗ್ಸ್​ ಗ್ರ್ಯಾಂಡ್​ ಆಗಿ ಆರಂಭ ಕಂಡಿದೆ. ಕಿಚ್ಚ ಸುದೀಪ್​ ಅವರು ಅದ್ದೂರಿಯಾಗಿ ಶೋ ಮತ್ತೆ ಆರಂಭಿಸಿದ್ದಾರೆ. ಮೊದಲ ದಿನವೇ ಎಲಿಮಿನೇಷನ್​ಗೆ ನಾಮಿನೇಷನ್​ ನಡೆದಿದೆ. ಇಂದು (ಜೂ.26) ಮತ್ತು ನಾಳೆ (ಜೂ.27) ಸುದೀಪ್​ ವೀಕೆಂಡ್​ ಎಪಿಸೋಡ್​ ​ ನಡೆಸಿಕೊಡಲಿದ್ದಾರೆ. ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಎಲಿಮಿನೇಟ್​ ಆಗೋದು ಯಾರು ಎನ್ನುವ ಕುತೂಹಲ ಪ್ರೇಕ್ಷಕರಲ್ಲಿದೆ.

ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ನಿಧಿ ಸುಬ್ಬಯ್ಯ, ಮಂಜು ಪಾವಗಡ, ದಿವ್ಯಾ ಸುರೇಶ್ ಮತ್ತು ಪ್ರಿಯಾಂಕಾ ತಿಮ್ಮೇಶ್​ ಮೇಲೆ ಎಲಿಮಿನೇಷನ್​​ ತೂಗುಗತ್ತಿ ತೂಗುತ್ತಿದೆ. 12 ಸ್ಪರ್ಧಿಗಳು 43 ದಿನ ಗ್ಯಾಪ್​ ತೆಗೆದುಕೊಂಡು ಬಂದಿದ್ದರಿಂದ ಯಾವ ಸ್ಪರ್ಧಿಗಳು ಹೇಗೆ ಎನ್ನುವ ಲೆಕ್ಕಾಚಾರ ಸಿಕ್ಕಿದೆ. ಮೊದಲ ಇನ್ನಿಂಗ್ಸ್​ ಎಪಿಸೋಡ್​ಗಳು ಹಾಗೂ ಮಾಧ್ಯಮಗಳಿಗೆ ಸ್ಪರ್ಧಿಗಳು ನೀಡಿದ ಸಂದರ್ಶನವನ್ನು ಎಲ್ಲರೂ ಗಮನಿಸಿದ್ದಾರೆ. ಈ ವೇಳೆ ಪ್ರಶಾಂತ್​ ಹಾಗೂ ಚಕ್ರವರ್ತಿ ನಡೆದುಕೊಂಡ ರೀತಿ ಅನೇಕರಿಗೆ ಇಷ್ಟವಾಗಿಲ್ಲ. ಈ ಕಾರಣಕ್ಕೆ ಬಹುತೇಕರು ಅವರನ್ನು ನಾಮಿನೇಟ್​ ಮಾಡಿದ್ದಾರೆ. ಇನ್ನು, ರಘು, ನಿಧಿ, ಮಂಜು, ದಿವ್ಯಾ ಸುರೇಶ್​, ಪ್ರಿಯಾಂಕಾ ಬಗ್ಗೆಯೂ ಮನೆಯ ಕೆಲ ಸದಸ್ಯರು ಬೇಸರ ಹೊರ ಹಾಕಿ ನಾಮಿನೇಟ್​ ಮಾಡಿದ್ದಾರೆ.

ಮಂಜು ಪಾವಗಡ ಮೊದಲಿಗಿಂತ ಬದಲಾಗಿದ್ದು, ಸಾಕಷ್ಟು ಎಂಟರ್​ಟೇನ್​ಮೆಂಟ್​ ನೀಡುತ್ತಿದ್ದಾರೆ. ಇನ್ನು, ಪ್ರಶಾಂತ್​, ಚಕ್ರವರ್ತಿ ಮನೆಯವರಿಂದ ಛೀಮಾರಿ ಹಾಕಿಸಿಕೊಂಡರೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇನ್ನು, ನಿಧಿ ಖ್ಯಾತಿ ಈವರೆಗೆ ಕಡಿಮೆ ಆಗಿಲ್ಲ. ರಘು ಹಾಗೂ ದಿವ್ಯಾ ಮೊದಲಿಗಿಂತ ಸಾಕಷ್ಟು ಬದಲಾಗಿದ್ದಾರೆ. ಹೀಗಾಗಿ ಈ ವಾರ ಪ್ರಿಯಾಂಕಾ ತಿಮ್ಮೇಶ್​ ಹೊರ ಹೋಗುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ.

ಎಲ್ಲಾ ಸ್ಪರ್ಧಿಗಳು ಬಿಗ್​ ಬಾಸ್​ ಮನೆಗೆ ಬಂದು ಕೆಲವೇ ದಿನ ಕಳೆದಿದೆ. ಯಾರು ಹೇಗೆ ಪರ್ಫಾರ್ಮೆನ್ಸ್​ ಮಾಡುತ್ತಾರೆ ಅನ್ನೋದು ಇನ್ನು ಸ್ಪಷ್ಟವಾಗಿ ತಿಳಿಯುತ್ತಿಲ್ಲ. ಈ ಕಾರಣಕ್ಕೆ ಈ ವಾರ ಎಲಿಮಿನೇಷನ್​ ನಡೆಸದೆಯೂ ಇರಬಹುದು. ಈ ಎಲ್ಲಾ ಪ್ರಶ್ನೆಗಳಿಗೆ ಭಾನುವಾರ (ಜೂನ್​ 27) ಸಿಗಲಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?

Published On - 2:36 pm, Sat, 26 June 21

‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು