ಗಂಡು ಮಗುವಿಗೆ ಜನ್ಮ ನೀಡಿದ ತೃಣಮೂಲ ಕಾಂಗ್ರೆಸ್ ಸಂಸದೆ, ನಟಿ ನುಸ್ರತ್ ಜಹಾನ್​

ತೃಣಮೂಲ ಕಾಂಗ್ರೆಸ್ ಸಂಸದೆ ಹಾಗೂ ಬಂಗಾಳಿ ನಟಿ ನುಸ್ರತ್ ಜಹಾನ್ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಗಂಡು ಮಗುವಿಗೆ ಜನ್ಮ ನೀಡಿದ ತೃಣಮೂಲ ಕಾಂಗ್ರೆಸ್ ಸಂಸದೆ, ನಟಿ ನುಸ್ರತ್ ಜಹಾನ್​
ನುಸ್ರತ್​ ಜಹಾನ್​
Follow us
TV9 Web
| Updated By: shivaprasad.hs

Updated on: Aug 26, 2021 | 3:04 PM

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಸಂಸದೆ ಹಾಗೂ ನಟ ನುಸ್ರತ್ ಜಹಾನ್ ಗುರುವಾರ ಮಧ್ಯಾಹ್ನ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಸಂಜೆ ಪಾರ್ಕ್ ಸ್ಟ್ರೀಟ್‌ನಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದ 31 ವರ್ಷದ ಜಹಾನ್, ಮಧ್ಯಾಹ್ನ 12.20 ರ ಸುಮಾರಿಗೆ, ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಮತ್ತು ವೈದ್ಯರ ಕಣ್ಗಾವಲಿನಲ್ಲಿ ಇದ್ದಾರೆ ಎಂದು ಮೂಲಗಳು ತಿಳಿಸಿವೆ.  ನುಸ್ರತ್ ಜಹಾನ್ ಅವರ ಸ್ನೇಹಿತ ಯಶ್ ದಾಸ್ ಗುಪ್ತಾ ಆಸ್ಪತ್ರೆಯಲ್ಲಿದ್ದರು ಎಂದು ಚಿತ್ರರಂಗದ ಮೂಲಗಳು ತಿಳಿಸಿವೆ.

ಈ ಕುರಿತು ಪಿಟಿಐ ಹಂಚಿಕೊಂಡಿರುವ ಟ್ವೀಟ್:

ನುಸ್ರತ್ ಸ್ನೇಹಿತ ಯಶ್ ದಾಸ್ ಗುಪ್ತಾ ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೊದಲು ನುಸ್ರತ್, ನಿಖಿಲ್ ಜೈನ್ ಅವರನ್ನು ವಿವಾಹವಾಗಿ ಬೇರ್ಪಟ್ಟಿದ್ದರು. ಪ್ರಸ್ತುತ ಯಶ್ ದಾಸ್ ಗುಪ್ತಾ ಅವರೊಂದಿಗೆ ನುಸ್ರತ್ ಕಾಣಿಸಿಕೊಂಡಿದ್ದರೂ ಕೂಡಾ, ಈರ್ವರು ಸಂಬಂಧದ ಕುರಿತು ಹೆಚ್ಚಿನ ಮಾಹಿತಿ ಹಂಚಿಕೊಂಡಿಲ್ಲ.

ಇದನ್ನೂ ಓದಿ:

ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ರಾಜಮೌಳಿ ತಂದೆ? ವಿಜಯೇಂದ್ರ ಪ್ರಸಾದ್​ಗೆ ಬಂತು ಆಫರ್

Viral Video: ಮೊಮ್ಮಗನೊಂದಿಗೆ 89 ವರ್ಷದ ಅಜ್ಜಿಯ ಸಕತ್ ಡಾನ್ಸ್; ವಿಡಿಯೋ ನೋಡಿದ್ರೆ ನೀವೂ ಫಿದಾ ಆಗ್ತೀರಾ

(TMC MP and Bengali actress Nusrat Jahan gives birth to Baby Boy)

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ