‘ಆದಿಪುರುಷ್’ ಸಿನಿಮಾ ನೋಡಲು 5,500 ಕಿಮೀ ಪ್ರಯಾಣಿಸಿದ ಪ್ರಭಾಸ್ ಮಹಿಳಾ ಅಭಿಮಾನಿ

‘ಆದಿಪುರುಷ್’ ಚಿತ್ರ ನೋಡಲು ಪ್ರಭಾಸ್ ಅವರ ಮಹಿಳಾ ಅಭಿಮಾನಿಯೊಬ್ಬರು ಟೋಕಿಯೋದಿಂದ ಸಿಂಗಾಪುರಕ್ಕೆ ತೆರಳಿದ್ದಾರೆ! ಆ ಮಹಿಳೆ ತೆಲುಗಿನಲ್ಲೇ ಮಾತನಾಡಿದ್ದಾರೆ.

‘ಆದಿಪುರುಷ್’ ಸಿನಿಮಾ ನೋಡಲು 5,500 ಕಿಮೀ ಪ್ರಯಾಣಿಸಿದ ಪ್ರಭಾಸ್ ಮಹಿಳಾ ಅಭಿಮಾನಿ
Follow us
ರಾಜೇಶ್ ದುಗ್ಗುಮನೆ
|

Updated on:Jun 23, 2023 | 7:50 AM

ಟಾಲಿವುಡ್ ನಟ ಪ್ರಭಾಸ್ (Prabhas) ಪ್ರಪಂಚದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ರಾಜಮೌಳಿ ನಿರ್ದೇಶನದ ‘ಬಾಹುಬಲಿ’ ಸಿನಿಮಾದಿಂದ ಪ್ರಭಾಸ್ ಜನಪ್ರಿಯತೆ ಹೆಚ್ಚಿದೆ. ಈ ಚಿತ್ರದಲ್ಲಿನ ಪ್ರಭಾಸ್ ಲುಕ್, ನಟನೆ ಪ್ರೇಕ್ಷಕರನ್ನು ಸೆಳೆದಿತ್ತು. ಈ ಚಿತ್ರ ಗೆದ್ದ ಬಳಿಕ ಬಾಲಿವುಡ್ ನಿರ್ದೇಶಕರು ಪ್ರಭಾಸ್ ಮನೆಯ ಬಾಗಿಲು ತಟ್ಟುತ್ತಿದ್ದಾರೆ. ಸದ್ಯ ಕೆಲವು ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ಆದಿಪುರುಷ್’ ಸಿನಿಮಾ (Adipurush Movie)ಕೆಟ್ಟ ವಿಮರ್ಶೆ ಪಡೆಯಿತು. ಆದರೆ, ಪ್ರಭಾಸ್ ಅಭಿಮಾನಿಗಳು ಈ ಚಿತ್ರವನ್ನು ಭಕ್ತಿಯಿಂದ ವೀಕ್ಷಿಸುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಒಂದು ಸಿಕ್ಕಿದೆ. ವಿದೇಶಿ ಮಹಿಳೆ ಒಬ್ಬರು ಈ ಸಿನಿಮಾ ನೋಡಲು 5,500 ಕಿ.ಮೀ ಪ್ರಯಾಣಿಸಿದ್ದಾರೆ.

‘ಬಾಹುಬಲಿ 2’ ನಂತರ ಪ್ರಭಾಸ್ ಅಭಿನಯದ ‘ಸಾಹೋ’ ಹಾಗೂ ‘ರಾಧೆ ಶ್ಯಾಮ್’ ಚಿತ್ರಗಳು ರಿಲೀಸ್ ಆಗಿ ಸೋತವು. ‘ಆದಿಪುರುಷ್’ ಕೂಡ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಒಂದೆಡೆ ಟೀಕೆ ಎದುರಿಸುತ್ತಿದ್ದರೂ, ಮತ್ತೊಂದು ಕಡೆ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ವಿಶ್ವದೆಲ್ಲೆಡೆ ಈ ಸಿನಿಮಾದ ಕಲೆಕ್ಷನ್ ಜೋರಾಗಿದೆ. ಈಗ ‘ಆದಿಪುರುಷ್’ ಚಿತ್ರ ನೋಡಲು ಪ್ರಭಾಸ್ ಅವರ ಮಹಿಳಾ ಅಭಿಮಾನಿಯೊಬ್ಬರು ಟೋಕಿಯೋದಿಂದ ಸಿಂಗಾಪುರಕ್ಕೆ ತೆರಳಿದ್ದಾರೆ! ಈ ಎರಡು ನಗರಗಳ ಮಧ್ಯೆ ಇರುವ ಅಂತರ ಬರೋಬ್ಬರಿ ಐದೂವರೆ ಸಾವಿರ ಕಿ.ಮೀ.!

ಭಾರತವಲ್ಲದೆ ಜಪಾನ್‌ನಲ್ಲೂ ಪ್ರಭಾಸ್‌ಗೆ ಅಪಾರ ಅಭಿಮಾನಿಗಳಿದ್ದಾರೆ. ಅಲ್ಲಿ ‘ಬಾಹುಬಲಿ’ ಸಿನಿಮಾ ಪ್ರದರ್ಶನ ಕಂಡಿತ್ತು. ಹೀಗಾಗಿ ಅಲ್ಲಿ ಪ್ರಭಾಸ್​ಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಈ ಕಾರಣಕ್ಕೆ ‘ಆದಿಪುರುಷ್ ಸಿನಿಮಾ ನೋಡಲು ಟೋಕಿಯೊದಿಂದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ ಮಹಿಳೆ. ಅವರು ಮಾತನಾಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವರು ತೆಲುಗಿನಲ್ಲಿ ಮಾತನಾಡಿದ್ದು ವಿಶೇಷ.

ಇದನ್ನೂ ಓದಿ: Prabhas: ‘ಆದಿಪುರುಷ್’ ಚಿತ್ರದ ಬಗ್ಗೆ ಟೀಕೆ; ಯಾರ ಕಣ್ಣಿಗೂ ಬಿದ್ದಿಲ್ಲ ಪ್ರಭಾಸ್​, ಕಾರಣವೇನು?

‘ನನ್ನ ಹೆಸರು ನುಡಿಕೋ. ನಾನು ಪ್ರಭಾಸ್ ಅಭಿಮಾನಿ. ಪ್ರಭಾಸ್ ಅಂದ್ರೆ ಇಷ್ಟ, ಅವರಿಗಾಗಿ ಸಿನಿಮಾ ನೋಡುತ್ತಿದ್ದೇನೆ’ ಎಂದಿದ್ದಾರೆ ಅವರು. ಈ ವಿಡಿಯೋಗೆ ಫ್ಯಾನ್ಸ್ ಕಡೆಯಿಂದ ಕಮೆಂಟ್​ಗಳು ಬರುತ್ತಿದೆ. ಓಂ​ ರಾವತ್ ನಿರ್ದೇಶನದ ‘ಆದಿಪುರುಷ್’ ಚಿತ್ರದಲ್ಲಿ ಪ್ರಭಾಸ್ ರಾಮನ ಪಾತ್ರದಲ್ಲಿ ನಟಿಸಿದ್ದಾರೆ. ಕೃತಿ ಸನೋನ್ ಸೀತೆಯ ಪಾತ್ರದಲ್ಲಿ ನಟಿಸಿದ್ದು, ಸೈಫ್ ಅಲಿ ಖಾನ್ ರಾವಣನ ಪಾತ್ರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:45 am, Fri, 23 June 23

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು