Mahesh Babu: ಟಾಲಿವುಡ್​ ನಟ ಮಹೇಶ್​ ಬಾಬುಗೆ ಕೊವಿಡ್​ ಪಾಸಿಟಿವ್​

ಮಹೇಶ್​ ಬಾಬು ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ ಕೊವಿಡ್​ ಪಾಸಿಟಿವ್​ ಆಗಿದೆ ಎಂದು ಅವರು ಬೇಸರ ಹೊರ ಹಾಕಿದ್ದಾರೆ.

Mahesh Babu: ಟಾಲಿವುಡ್​ ನಟ ಮಹೇಶ್​ ಬಾಬುಗೆ ಕೊವಿಡ್​ ಪಾಸಿಟಿವ್​
ಮಹೇಶ್​ ಬಾಬು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 06, 2022 | 9:33 PM

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದನ್ನು ನಿಯಂತ್ರಣ ಮಾಡೋಕೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸ್ಟಾರ್​ ನಟರಿಗೂ ಕೊವಿಡ್​ ಅಂಟುತ್ತಿದೆ. ತೆಲುಗಿನ ಖ್ಯಾತ ನಟ ಮಹೇಶ್​ ಬಾಬು ಅವರಿಗೂ ಕೊವಿಡ್ ಪಾಸಿಟಿವ್​ ಆಗಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ ಕೊವಿಡ್​ ಪಾಸಿಟಿವ್​ ಆಗಿದೆ ಎಂದು ಅವರು ಬೇಸರ ಹೊರ ಹಾಕಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ‘ನನ್ನ ಎಲ್ಲಾ ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗೆ ಈ ಪತ್ರ. ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಸಹ, ನನಗೆ ಕೊವಿಡ್​ 19 ಅಂಟಿದೆ. ನಾನು ಮನೆಯಲ್ಲಿ ಕ್ವಾರಂಟೈನ್​ ಆಗಿದ್ದೇನೆ. ವೈದ್ಯರ ಸೂಚನೆ ಹಾಗೂ ಮಾರ್ಗದರ್ಶನವನ್ನು ಅನುಸರಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

‘ನನ್ನ ಸಂಪರ್ಕಕ್ಕೆ ಬಂದವರೆಲ್ಲರನ್ನೂ ಕೊವಿಡ್​ ಪರೀಕ್ಷೆಗೆ ಒಳಪಡಲು ವಿನಂತಿಸಿಕೊಳ್ಳುತ್ತಿದ್ದೇನೆ. ಕೊವಿಡ್​ ಲಸಿಕೆಯನ್ನು ತೆಗೆದುಕೊಳ್ಳದ ಪ್ರತಿಯೊಬ್ಬರು  ತಕ್ಷಣವೇ ಲಸಿಕೆ ತೆಗೆದುಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ. ಕೊರೊನಾ ಲಸಿಕೆ ಅಪಾಯವನ್ನು ಕಡಿಮೆ ಮಾಡುತ್ತದೆ. ದಯವಿಟ್ಟು ಕೊವಿಡ್​ ನಿಯಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ’ ಎಂದು ಮಹೇಶ್​ ಬಾಬು ಹೇಳಿದ್ದಾರೆ.

ಮಹೇಶ್ ಬಾಬು ಅವರು ಶೀಘ್ರದಲ್ಲೇ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಈ ಶಸ್ತ್ರ ಚಿಕಿತ್ಸೆ ನಂತರದಲ್ಲಿ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಎರಡು ತಿಂಗಳುಬೇಕು. ಅವರು ಸಂಪೂರ್ಣವಾಗಿ ಫಿಟ್ ಆದ ನಂತರವೇ ‘ಸರ್ಕಾರು ವಾರಿ ಪಾಟ’ ಚಿತ್ರದ ಬಾಕಿಯಿರುವ ಶೂಟಿಂಗ್​ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಈ ಎಲ್ಲಾ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾಗಲಿದೆ ಎನ್ನಲಾಗುತ್ತಿದೆ. ಹೀಗಾದಲ್ಲಿ ಸಿನಿಮಾಗಾಗಿ ಮತ್ತೆ ಹಲವು ತಿಂಗಳು ಕಾಯೋದು ಅನಿವಾರ್ಯ ಆಗಲಿದೆ.

ಮೈತ್ರಿ ಮೂವಿ ಮೇಕರ್ಸ್ ​‘ಸರ್ಕಾರು ವಾರಿ ಪಾಟ’ ಸಿನಿಮಾ ನಿರ್ಮಾಣ ಮಾಡುತ್ತಿದೆ. ಪರಶುರಾಮ ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಮಹೇಶ್​ ಬಾಬು ಖ್ಯಾತ ನಿರ್ದೇಶಕ ರಾಜಮೌಳಿ ಜತೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇದೆ.  ‘ಆರ್​​ಆರ್​ಆರ್​​’ ತೆರೆಗೆ ಬಂದ ನಂತರದಲ್ಲಿ ಈ ಸಿನಿಮಾ ರಿಲೀಸ್​ ಆಗಬೇಕಿತ್ತು. ಆದರೆ, ಈ ಚಿತ್ರದ ಕೆಲಸಗಳು ಕೂಡ ಮುಂದೂಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಇಂಗ್ಲಿಷ್​ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ ಮಹೇಶ್​ ಬಾಬು ಮಗಳು? ನಟನ ಅಚ್ಚರಿಯ ಹೇಳಿಕೆ

ಮಹೇಶ್​ ಬಾಬು ಪತ್ನಿಗೆ ಸಿಕ್ಕಿಲ್ಲ ಸ್ಪೆಷಲ್​ ಅಧಿಕಾರ; ತಪ್ಪುಗಳ ಬಗ್ಗೆ ಬಾಯ್ಬಿಟ್ಟ ‘ಪ್ರಿನ್ಸ್​’

Published On - 9:18 pm, Thu, 6 January 22

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್