Nandamuri Balakrishna: ನಂದಮೂರಿ ಬಾಲಕೃಷ್ಣಗೆ ಕೊರೊನಾ ಪಾಸಿಟಿವ್​; ಶ್ರುತಿ ಹಾಸನ್​ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆ

Ballayya Corona Positive: ನಂದಮೂರಿ ಬಾಲಕೃಷ್ಣ ಅವರು ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಹೋಮ್​ ಐಸೋಲೇಷನ್​ನಲ್ಲಿ ಇದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ.

Nandamuri Balakrishna: ನಂದಮೂರಿ ಬಾಲಕೃಷ್ಣಗೆ ಕೊರೊನಾ ಪಾಸಿಟಿವ್​; ಶ್ರುತಿ ಹಾಸನ್​ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆ
ನಂದಮೂರಿ ಬಾಲಕೃಷ್ಣ
Follow us
TV9 Web
| Updated By: ಮದನ್​ ಕುಮಾರ್​

Updated on:Jun 25, 2022 | 7:40 AM

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅಭಿಮಾನಿಗಳಿಗೆ ಇದು ಬ್ಯಾಡ್​ ನ್ಯೂಸ್​. ಪ್ರಸ್ತುತ ‘ಎನ್​ಬಿಕೆ 107’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿರುವ ಬಾಲಯ್ಯ ಅವರಿಗೆ ಕೊರೊನಾ ಪಾಸಿಟಿವ್​ ಆಗಿದೆ. ಇದರಿಂದ ಈ ಚಿತ್ರದ ಕೆಲಸಗಳು ವಿಳಂಬ ಆಗಲಿವೆ. ನಂದಮೂರಿ ಬಾಲಕೃಷ್ಣ ಅವರು ಕೊರೊನಾ ಸೋಂಕಿಗೆ ಒಳಗಾಗಿರುವುದನ್ನು ಸೋಶಿಯಲ್​ ಮೀಡಿಯಾದಲ್ಲಿ ಅವರ ತಂಡದವರು ಖಚಿತ ಪಡಿಸಿದ್ದಾರೆ. ಅಲ್ಲದೇ, ಸದ್ಯ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದನ್ನು ಕೂಡ ತಿಳಿಸಲಾಗಿದೆ. ಅವರಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲ. ಆದರೂ ಕೂಡ ಮನೆಯಲ್ಲಿ ಐಸೊಲೇಟ್​ ಆಗಿದ್ದಾರೆ ಎಂದು ತಿಳಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಬಾಲಯ್ಯ (Ballayya) ಅವರ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಟೆಸ್ಟ್​ ಮಾಡಿಸಿಕೊಳ್ಳಿ ಎಂದು ಸೂಚನೆ ನೀಡಲಾಗಿದೆ. ಕೆಲವೇ ದಿನಗಳ ಹಿಂದೆ ನಟಿ ಶ್ರುತಿ ಹಾಸನ್​ ಅವರು ‘ಎನ್​ಬಿಕೆ 107’ (NBK 107) ಸಿನಿಮಾದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು.

ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಬಾಲಯ್ಯ ಅವರು ಹೋಮ್​ ಐಸೋಲೇಷನ್​ನಲ್ಲಿ ಇದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಸದ್ಯ ಬಾಲಯ್ಯ ಅವರಿಗೆ 62 ವರ್ಷ ವಯಸ್ಸು. ಕೆಲವೇ ದಿನಗಳ ಹಿಂದೆ (ಜೂನ್​ 10) ಅವರು ಹುಟ್ಟುಹಬ್ಬ ಆಚರಿಸಿಕೊಂಡರು. ಈ ವಯಸ್ಸಿನಲ್ಲೂ ಅವರು ದಣಿವರಿಯದೇ ಕೆಲಸ ಮಾಡುತ್ತಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ.

ನಂದಮೂರಿ ಬಾಲಕೃಷ್ಣ ನಟಿಸುತ್ತಿರುವ 107ನೇ ಸಿನಿಮಾಗೆ ತಾತ್ಕಾಲಿಕವಾಗಿ ‘ಎನ್​ಬಿಕೆ 107’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಶ್ರುತಿ ಹಾಸನ್​ ಅಭಿನಯಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ಶೂಟಿಂಗ್​ ಸೆಟ್​ ಸೇರಿಕೊಂಡಿದ್ದರು. ಹಾಗಾಗಿ ಅವರಿಗೂ ಕೊವಿಡ್​ ಅಂಟಿರಬಹುದೇ ಎಂಬ ಗುಮಾನಿ ಮೂಡಿದೆ. ಹಾಗಾಗಿ ಅವರ ಆರೋಗ್ಯದ ಬಗ್ಗೆಯೂ ಅಭಿಮಾನಿಗಳು ಕಾಳಜಿ ತೋರಿಸುತ್ತಿದ್ದಾರೆ. ಇದೇ ಸಿನಿಮಾದಲ್ಲಿ ದುನಿಯಾ ವಿಜಯ್ ಅವರು ವಿಲನ್​ ಆಗಿ ನಟಿಸುತ್ತಿದ್ದಾರೆ.

ಇದನ್ನೂ ಓದಿ
Image
NBK Birthday: ನಂದಮೂರಿ ಬಾಲಕೃಷ್ಣ ಜನ್ಮದಿನಕ್ಕೆ ಟೀಸರ್​ ಮೂಲಕ ವಿಶ್​ ಮಾಡಿದ ‘ಎನ್​ಬಿಕೆ 107’ ಬಳಗ
Image
ದುನಿಯಾ ವಿಜಯ್​ ಎದುರು ಕಾದಾಡಲು ‘ಬೇಟೆ ಶುರು..’ ಎಂದು ಮಾಸ್​ ಅವತಾರ ತಾಳಿದ ನಂದಮೂರಿ ಬಾಲಕೃಷ್ಣ
Image
NBK107: ತೆಲುಗಿನಲ್ಲೂ ರಿಮೇಕ್ ಆಗುತ್ತಿದೆಯಾ ‘ಮಫ್ತಿ’? ಕುತೂಹಲ ಮೂಡಿಸಿದ ‘ಎನ್​ಬಿಕೆ107’ ಪೋಸ್ಟರ್
Image
ಪುನೀತ್​ ಅಂತಿಮ ದರ್ಶನ ಪಡೆದು ತೆರಳಿದ್ದ ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು; ಅಂಥದ್ದೇನಾಯ್ತು?

ನಂದಮೂರಿ ಬಾಲಕೃಷ್ಣ ನಟಿಸಿದ ‘ಅಖಂಡ’ ಸಿನಿಮಾ 2021ರ ಡಿಸೆಂಬರ್​ನಲ್ಲಿ ತೆರೆಕಂಡು ಸೂಪರ್​ ಹಿಟ್​ ಆಯಿತು. ಈಗ ಆ ಚಿತ್ರಕ್ಕೆ ಸೀಕ್ವೆಲ್​ ಕೂಡ ಬರಲಿದೆ ಎಂಬ ಬಗ್ಗೆ ಮಾಹಿತಿ ಕೇಳಿಬಂದಿದೆ. 2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಈ ಸಿನಿಮಾವನ್ನು ರಿಲೀಸ್​ ಮಾಡಲು ಪ್ಲ್ಯಾನ್​ ನಡೆಯುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ನಂದಮೂರಿ ಬಾಲಕೃಷ್ಣ ಸಿನಿಮಾದಲ್ಲಿ ಶ್ರೀಲೀಲಾ ನಟನೆ; ಯಾವ ಪಾತ್ರ? ಇಲ್ಲಿದೆ ಟ್ವಿಸ್ಟ್..​

ಟಾಲಿವುಡ್​ಗೆ ಎಂಟ್ರಿ ನೀಡಿದ ದುನಿಯಾ ವಿಜಯ್​; ನಂದಮೂರಿ ಬಾಲಕೃಷ್ಣ ಚಿತ್ರದಲ್ಲಿ ಬಂಪರ್​ ಚಾನ್ಸ್​

Published On - 7:36 am, Sat, 25 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ