ಮೂರ್ಛೆ ತಪ್ಪಿದ ಕೆಲವೇ ಕ್ಷಣದಲ್ಲಿ ಸಿನಿಮಾ ನಿರ್ದೇಶಕ ನಾಗೇಶ್ವರ ರಾವ್​ ನಿಧನ; ಸೆಲೆಬ್ರಿಟಿಗಳ ಕಂಬನಿ

KS Nageswara Rao Death: ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನಿರ್ದೇಶಕ ಕೆ.ಎಸ್​. ನಾಗೇಶ್ವರ ರಾವ್​ ಅಗಲಿದ್ದಾರೆ. 1986ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಟಾಲಿವುಡ್​ ಸೆಲೆಬ್ರಿಟಿಗಳು ಕಂಬನಿ ಮಿಡಿದ್ದಾರೆ.

ಮೂರ್ಛೆ ತಪ್ಪಿದ ಕೆಲವೇ ಕ್ಷಣದಲ್ಲಿ ಸಿನಿಮಾ ನಿರ್ದೇಶಕ ನಾಗೇಶ್ವರ ರಾವ್​ ನಿಧನ; ಸೆಲೆಬ್ರಿಟಿಗಳ ಕಂಬನಿ
ಕೆ.ಎಸ್​. ನಾಗೇಶ್ವರ ರಾವ್
Follow us
TV9 Web
| Updated By: ಮದನ್​ ಕುಮಾರ್​

Updated on: Nov 28, 2021 | 9:01 AM

ತೆಲುಗು ಚಿತ್ರರಂಗಕ್ಕೆ ಕಹಿ ಸುದ್ದಿ ಕೇಳಿಬಂದಿದೆ. ಟಾಲಿವುಡ್ (Tollywood)​ ನಿರ್ದೇಶಕ ಕೆ.ಎಸ್​. ನಾಗೇಶ್ವರ ರಾವ್​ ಅವರು ವಿಧಿವಶರಾಗಿದ್ದಾರೆ. ಶನಿವಾರ (ನ.27) ತಮ್ಮ ಊರಿನಿಂದ ಹೈದರಾಬಾದ್​ಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಆಯಿತು. ಮೂರ್ಛೆ ತಪ್ಪಿದ ಕೆಲವೇ ನಿಮಿಷಗಳಲ್ಲಿ ಅವರು ನಿಧನರಾದರು ಎಂದು ವರದಿ ಆಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಬಳಿಕ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಈ ಸುದ್ದಿ ಕೇಳಿ ಇಡೀ ಟಾಲಿವುಡ್​ ಕಂಬನಿ ಮಿಡಿದಿದೆ. ಅನೇಕ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ನಾಗೇಶ್ವರ ರಾವ್​ (KS Nageswara Rao) ಅವರು ನಿಧನರಾಗಿರುವುದು ಎಲ್ಲರಿಗೂ ಆಘಾತ ಮೂಡಿಸಿದೆ. ಸ್ನೇಹಿತರು, ಸೆಲೆಬ್ರಿಟಿಗಳು, ಆಪ್ತರು ಮತ್ತು ಅಭಿಮಾನಿಗಳು ನಾಗೇಶ್ವರ ರಾವ್​ ಅಗಲಿಕೆಗೆ ಕಂಬನಿ ಮಿಡಿಯುತ್ತಿದ್ದಾರೆ. ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುತ್ತಿದ್ದಾರೆ.

ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನಾಗೇಶ್ವರ ರಾವ್​ ಅಗಲಿದ್ದಾರೆ. 1986ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ಅವರ ಜೊತೆ ಸಹಾಯಕ ನಿರ್ದೇಶಕರಾಗಿ ನಾಗೇಶ್ವರ ರಾವ್​ ವೃತ್ತಿಜೀವನ ಆರಂಭಿಸಿದ್ದರು. ಅವರು ನಿರ್ದೇಶಿಸಿದ್ದ ಮೊದಲ ಸಿನಿಮಾ ‘ರಿಕ್ಷಾ ರುದ್ರಯ್ಯ’. ಅನೇಕ ಕಲಾವಿದರು ಮತ್ತು ತಂತ್ರಜ್ಞರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದ ಕೀರ್ತಿ ನಾಗೇಶ್ವರ ರಾವ್​ ಅವರಿಗೆ ಸಲ್ಲುತ್ತದೆ.

ಇದನ್ನೂ ಓದಿ:

‘ಅಪ್ಪು ನಿಧನದ ಸುದ್ದಿ ಕೇಳಿದಾಗ ರಾಡ್​ನಿಂದ ತಲೆಗೆ ಹೊಡೆದಂತೆ ಆಯ್ತು’; ಕರಾಳ ಕ್ಷಣದ ಬಗ್ಗೆ ಶಿವಣ್ಣನ ಮಾತು

ಪುನೀತ್​ ಹೊಸ ಚಿತ್ರ ‘ಲಕ್ಕಿ ಮ್ಯಾನ್​’ ಶೀಘ್ರವೇ ರಿಲೀಸ್​; ಅಪ್ಪು ಅಭಿಮಾನಿಗಳಿಗೆ ಗುಡ್​ ನ್ಯೂಸ್​

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್