ಕೊರೊನಾ ವೈರಸ್ (Coronavirus) ಹಾವಳಿ ಮತ್ತೆ ಶುರುವಾಗಿದೆ. ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ (Omicron Cases in India) ಹೆಚ್ಚುತ್ತಿರುವುದು ಎಲ್ಲರ ಆತಂಕಕ್ಕೆ ಕಾರಣ ಆಗಿದೆ. ಮೂರನೇ ಅಲೆಯಲ್ಲಿ ಮತ್ತೆ ಜನರ ಜೀವನ ಅಸ್ತವ್ಯಸ್ತ ಆಗಬಹುದೆಂಬ ಭಯ ಆವರಿಸಿದೆ. ಈ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳಿಗೆ ಕೊರೊನಾ ಪಾಸಿಟಿವ್ (Corona Positive) ಆಗಿದೆ. ತೆಲುಗಿನ ಖ್ಯಾತ ನಿರ್ಮಾಪಕ ಬಂಡ್ಲ ಗಣೇಶ್ (Bandla Ganesh) ಅವರಿಗೆ ಕೊರೊನಾ ಸೋಂಕು ತಗುಲಿದೆ. ಮೂರನೇ ಬಾರಿಗೆ ಅವರು ಕೊವಿಡ್ 19 ಪಾಸಿಟಿವ್ ಆಗಿದ್ದಾರೆ. ಹಾಗಾಗಿ ಅವರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಎಲ್ಲರೂ ಜಾಗೃತವಾಗಿರಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ತಮಗೆ ಕೊರೊನಾ ಪಾಸಿಟಿವ್ ಆಗಿರುವ ಕುರಿತು ಬಂಡ್ಲ ಗಣೇಶ್ ಅವರು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಕಳೆದ ಮೂರು ದಿನಗಳಿಂದ ನಾನು ದೆಹಲಿಯಲ್ಲಿದ್ದೆ. ಇಂದು ಸಂಜೆ ಕೊವಿಡ್ ಪಾಸಿಟಿವ್ ಆಗಿರುವ ವರದಿ ಬಂದಿದೆ. ನನಗೆ ಸಣ್ಣ-ಪುಟ್ಟ ಲಕ್ಷಣಗಳಿವೆ. ನನ್ನ ಕುಟುಂಬದವರಿಗೆ ನೆಗೆಟಿವ್ ವರದಿ ಬಂದಿದೆ. ದಯವಿಟ್ಟು ಹುಷಾರಾಗಿರಿ. ಪ್ರಯಾಣ ಮಾಡುವುದಕ್ಕಿಂತ ಮುನ್ನ ಯೋಚಿಸಿ. ನಾನು ಐಸೋಲೇಟ್ ಆಗಿದ್ದೇನೆ’ ಎಂದು ಬಂಡ್ಲ ಗಣೇಶ್ ಟ್ವೀಟ್ ಮಾಡಿದ್ದಾರೆ.
ಮೊದಲ ಬಾರಿಗೆ ಬಂಡ್ಲ ಗಣೇಶ್ ಅವರಿಗೆ ಕೊರೊನಾ ಸೋಂಕು ತಗುಲಿದಾಗ ಅವರ ಪರಿಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಗೆ ದಾಖಲಾದ ಬಳಿಕ ಅವರು ಚೇತರಿಸಿಕೊಂಡಿದ್ದರು. ನಂತರ ಎರಡನೇ ಅಲೆ ಸಂದರ್ಭದಲ್ಲಿ ಅವರಿಗೆ ಮತ್ತೆ ಕೊವಿಡ್ ಪಾಸಿಟಿವ್ ಆಗಿತ್ತು. ಈಗ ಮೂರನೇ ಬಾರಿಗೆ ಅವರಿಗೆ ಸೋಂಕು ತಗುಲಿದೆ. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.
Last three days I was at delhi and I tested positive today evening .
I have mild symptoms, and my family is tested negative . Please be careful and think before you travel I’m in isolation .
Thank you #Besafe pic.twitter.com/9i4CIRI5XC— BANDLA GANESH. (@ganeshbandla) January 9, 2022
ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳಿಗೆ ಕೊವಿಡ್ ಅಂಟಿದೆ. ನಟ ಮಹೇಶ್ ಬಾಬು, ಗಾಯಕ ವಿಶಾಲ್ ದದ್ಲಾನಿ, ನಿರ್ಮಾಪಕಿ ಏಕ್ತಾ ಕಪೂರ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ತಮಗೆ ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಟ್ವೀಟ್ ಮಾಡಿದ್ದ ಮಹೇಶ್ ಬಾಬು ಅವರು, ‘ನನ್ನ ಎಲ್ಲಾ ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗೆ ಈ ಪತ್ರ. ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಸಹ, ನನಗೆ ಕೊವಿಡ್ 19 ಅಂಟಿದೆ. ನಾನು ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ವೈದ್ಯರ ಸೂಚನೆ ಹಾಗೂ ಮಾರ್ಗದರ್ಶನವನ್ನು ಅನುಸರಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲರನ್ನೂ ಕೊವಿಡ್ ಪರೀಕ್ಷೆಗೆ ಒಳಪಡಲು ವಿನಂತಿಸಿಕೊಳ್ಳುತ್ತಿದ್ದೇನೆ. ಕೊವಿಡ್ ಲಸಿಕೆಯನ್ನು ತೆಗೆದುಕೊಳ್ಳದ ಪ್ರತಿಯೊಬ್ಬರು ತಕ್ಷಣವೇ ಲಸಿಕೆ ತೆಗೆದುಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ. ಕೊರೊನಾ ಲಸಿಕೆ ಅಪಾಯವನ್ನು ಕಡಿಮೆ ಮಾಡುತ್ತದೆ. ದಯವಿಟ್ಟು ಕೊವಿಡ್ ನಿಯಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ’ ಎಂದು ಬರೆದುಕೊಂಡಿದ್ದರು.
ಇದನ್ನೂ ಓದಿ:
ಐಸಿಯುನಲ್ಲಿ ತಂದೆ ಸಾವು; ಕೊವಿಡ್ನಿಂದ ಹತ್ತಿರ ಹೋಗದ ಮಗ; ಖ್ಯಾತ ಗಾಯಕನ ಕರುಣಾಜನಕ ಸ್ಥಿತಿ
ಕೊವಿಡ್ ಇದ್ದರೂ ಅಣ್ಣನ ಅಂತ್ಯಸಂಸ್ಕಾರಕ್ಕೆ ಹೋದರಾ ಮಹೇಶ್ ಬಾಬು? ವೈರಲ್ ಆದ ಫೋಟೋದ ಅಸಲಿಯತ್ತೇನು?