AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​ ಭೇಟಿಗೆ ಬರ್ತಿದ್ದಾರೆ ‘RRR’, ‘ಪುಷ್ಪ 2’, ‘ಕಲ್ಕಿ 2898 ಎಡಿ’ ನಿರ್ಮಾಪಕರು

ಪವನ್​ ಕಲ್ಯಾಣ್​ ಅವರು ಈಗ ಉಪ ಮುಖ್ಯಮಂತ್ರಿ ಆಗಿರುವುದರಿಂದ ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ. ತೆಲುಗು ಚಿತ್ರರಂಗದ ಅನೇಕ ಘಟಾನುಘಟಿ ನಿರ್ಮಾಪಕರು ಒಟ್ಟಾಗಿ ಬಂದು ವಿಜಯವಾಡದಲ್ಲಿ ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲಿದ್ದಾರೆ. ಈ ಭೇಟಿಯ ಹಿಂದೆ ಒಂದು ಪ್ರಮುಖ ಕಾರಣ ಇದೆ. ಮಾತುಕತೆ ನಡೆದ ನಂತರ ಹೆಚ್ಚಿನ ಮಾಹಿತಿ ಬಹಿರಂಗ ಆಗಲಿದೆ.

ಪವನ್​ ಕಲ್ಯಾಣ್​ ಭೇಟಿಗೆ ಬರ್ತಿದ್ದಾರೆ ‘RRR’, ‘ಪುಷ್ಪ 2’, ‘ಕಲ್ಕಿ 2898 ಎಡಿ’ ನಿರ್ಮಾಪಕರು
ಪವನ್​ ಕಲ್ಯಾಣ್​
ಮದನ್​ ಕುಮಾರ್​
|

Updated on: Jun 23, 2024 | 10:07 PM

Share

ಟಾಲಿವುಡ್​ನ ಸ್ಟಾರ್ ನಟ ಪವನ್​ ಕಲ್ಯಾಣ್​ (Pawan Kalyan) ಈಗ ಫುಲ್​ಟೈಮ್​ ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರನ್ನು ಭೇಟಿಯಾಗಲು ಅನೇಕ ಗಣ್ಯರು ಬರುತ್ತಿದ್ದಾರೆ. ಪವನ್​ ಕಲ್ಯಾಣ್​ ಬಳಿ 4 ಪ್ರಮುಖ ಖಾತೆಗಳು ಇವೆ. ಈ ಎಲ್ಲ ಜವಾಬ್ದಾರಿಯನ್ನು ಅವರು ನಿಭಾಯಿಸಬೇಕಿದೆ. ಹಾಗಾಗಿ ಅವರು ಸದ್ಯಕ್ಕೆ ಸಿನಿಮಾಗಳಿಂದ (Pawan Kalyan Movie) ದೂರ ಉಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹಾಗಿದ್ದರೂ ಕೂಡ ಟಾಲಿವುಡ್​ನ (Tollywood) ಘಟಾನುಘಟಿ ನಿರ್ಮಾಣ ಸಂಸ್ಥೆಗಳ ಮಾಲಿಕರು ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

‘ಪುಷ್ಪ 2’ ಸಿನಿಮಾ ನಿರ್ಮಾಣ ಮಾಡಿರುವ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ನವೀನ್​, ರವಿಶಂಕರ್​, ‘ಆರ್​ಆರ್​ಆರ್​’ ಸಿನಿಮಾದ ನಿರ್ಮಾಪಕ ಡಿವಿವಿ ದಾನಯ್ಯ, ‘ಕಲ್ಕಿ 2898 ಎಡಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ದತ್​, ಖ್ಯಾತ ನಿರ್ಮಾಪಕ ದಿಲ್​ ರಾಜು, ನಾಗ ವಂಶಿ ಸೇರಿದಂತೆ ಅನೇಕ ನಿರ್ಮಾಪಕರು ಒಟ್ಟಾಗಿ ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಜೂನ್ 24ರ ಮಧ್ಯಾಹ್ನ ಈ ಭೇಟಿ ನಡೆಯುವ ನಿರೀಕ್ಷೆ ಇದೆ.

ಅಂದಹಾಗೆ, ಈ ದೊಡ್ಡ ದೊಡ್ಡ ನಿರ್ಮಾಪಕರು ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲು ಬರುತ್ತಿರುವುದು ಕಾಲ್​ಶೀಟ್​ ಪಡೆಯೋಕೆ ಅಲ್ಲ. ಬದಲಿಗೆ, ಚಿತ್ರರಂಗದ ಕುರಿತು ಕೆಲವು ಪ್ರಮುಖ ವಿಚಾರಗಳನ್ನು ತಿಳಿಸಲು ಆಗಮಿಸುತ್ತಿದ್ದಾರೆ. ಈ ಹಿಂದಿನ ಸರ್ಕಾರಗಳಿಂದ ಚಿತ್ರರಂಗಕ್ಕೆ ಕೆಲವು ಸವಾಲುಗಳು ಎದುರಾಗಿದ್ದವು. ಅವುಗಳನ್ನು ನಿವಾರಿಸುವ ಸಲುವಾಗಿ ಪವನ್​ ಕಲ್ಯಾಣ್​ ಜೊತೆ ಈ ಎಲ್ಲ ಪ್ರಮುಖ ನಿರ್ಮಾಪಕರು ಮನವಿ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ: ನಾಯ್ಡು ಪ್ರಮಾಣ ವಚನ: ಚಿರಂಜೀವಿ, ಪವನ್​ ಕಲ್ಯಾಣ್​ ಜತೆ ನರೇಂದ್ರ ಮೋದಿ ಗೆಲುವಿನ ನಗು

ತೆಲುಗು ಚಿತ್ರರಂಗದ ಬಹುತೇಕ ಎಲ್ಲ ಘಟಾನುಘಟಿ ನಿರ್ಮಾಪಕರು ವಿಜಯವಾಡದಲ್ಲಿ ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲಿದ್ದಾರೆ. ಪವನ್​ ಕಲ್ಯಾಣ್​ ಈಗ ಉಪ ಮುಖ್ಯಮಂತ್ರಿ ಆಗಿರುವುದರಿಂದ ತುಂಬ ಬ್ಯುಸಿ ಆಗಿದ್ದಾರೆ. ನಿರ್ಮಾಪಕರ ಜೊತೆ ಅವರು ಎಷ್ಟು ಸಮಯ ಮಾತುಕಥೆ ನಡೆಸುತ್ತಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಮೀಟಿಂಗ್​ ಮುಗಿದ ಬಳಿಕ ಅಲ್ಲಿನ ವಿವರಗಳನ್ನು ನಿರ್ಮಾಪಕರು ಮಾಧ್ಯಮಗಳ ಜೊತೆ ಹಂಚಿಕೊಳ್ಳುತ್ತಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?