ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಹವಾ; ಗಂಟೆಗೆ 21 ಸಾವಿರಕ್ಕೂ ಹೆಚ್ಚು ಟಿಕೆಟ್ ಮಾರಾಟ

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಮುಂಗಡ ಟಿಕೆಟ್ ಬುಕಿಂಗ್‌ನಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ಬುಕ್‌ಮೈಶೋನಲ್ಲಿ ಪ್ರತಿ ಗಂಟೆಗೆ 21.71 ಸಾವಿರಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗುತ್ತಿದ್ದು, ಆಗಸ್ಟ್ 26 ರಂದು ಸಿನಿಮಾ ಜಾಗತಿಕ ಮಟ್ಟದಲ್ಲಿ ಭರ್ಜರಿಯಾಗಿ ತೆರೆಗೆ ಬರಲು ಸಜ್ಜಾಗಿದೆ.

ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಹವಾ; ಗಂಟೆಗೆ 21 ಸಾವಿರಕ್ಕೂ ಹೆಚ್ಚು ಟಿಕೆಟ್ ಮಾರಾಟ
ಟಾಕ್ಸಿಕ್

Updated on: Aug 21, 2026 | 2:48 PM

ಮುಖ್ಯಾಂಶಗಳು

  • 'ಟಾಕ್ಸಿಕ್' ಬುಕಿಂಗ್ ಧಮಾಕಾ
  • ಪ್ರತಿ ಗಂಟೆಗೆ 21 ಸಾವಿರಕ್ಕೂ ಹೆಚ್ಚು ಟಿಕೆಟ್ ಮಾರಾಟ
  • ಕೆಜಿಎಫ್ 2 ನಂತರ ಯಶ್ ಕಂಬ್ಯಾಕ್

‘ಕೆಜಿಎಫ್ 2’ ಸಿನಿಮಾದ ಭರ್ಜರಿ ಯಶಸ್ಸಿನ ಸುಮಾರು ನಾಲ್ಕು ವರ್ಷಗಳ ನಂತರ ರಾಕಿಂಗ್ ಸ್ಟಾರ್ ಯಶ್ ಬೆಳ್ಳಿ ಪರದೆಮೇಲೆ ಬರುತ್ತಿದ್ದಾರೆ. ಅವರ ಅಭಿನಯದ ‘ಟಾಕ್ಸಿಕ್’ ಚಿತ್ರ ಬೆಳ್ಳಿಪರದೆಗೆ ಬರಲು ಸಜ್ಜಾಗಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರದಲ್ಲಿ ಯಶ್ ಎರಡು ವಿಭಿನ್ನ ಪಾತ್ರಗಳಲ್ಲಿ ನಟಿಸಿದ್ದಾರೆ. ಆಗಸ್ಟ್ 26ರಂದು ಸಿನಿಮಾ ಜಾಗತಿಕ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ದೇಶಾದ್ಯಂತ ಆರಂಭವಾಗಿರುವ ಮುಂಗಡ ಟಿಕೆಟ್ ಬುಕಿಂಗ್‌ನಲ್ಲಿ ಸಿನಿಮಾ ಹೊಸ ಇತಿಹಾಸ ಸೃಷ್ಟಿಸುತ್ತಿದೆ.

ಟಿಕೆಟ್ ಬುಕಿಂಗ್‌ನಲ್ಲಿ ಸಾರ್ವಕಾಲಿಕ ದಾಖಲೆ

‘ಟಾಕ್ಸಿಕ್’ ಚಿತ್ರದ ಮುಂಗಡ ಬುಕಿಂಗ್ ಓಪನ್ ಆಗುತ್ತಿದ್ದಂತೆ ಪ್ರೇಕ್ಷಕರು ಟಿಕೆಟ್ ಕಾಯ್ದಿರಿಸಲು ಮುಗಿಬಿದ್ದಿದ್ದಾರೆ. ಬುಕ್‌ಮೈಶೋ ಆ್ಯಪ್‌ನಲ್ಲಿ ಪ್ರಸ್ತುತ ಪ್ರತಿ ಗಂಟೆಗೆ ಬರೋಬ್ಬರಿ 21.71 ಸಾವಿರಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗುತ್ತಿವೆ. ಇದು ಯಶ್ ಅವರ ಸಿನಿಮಾದ ಮೇಲಿರುವ ಅಪಾರ ನಿರೀಕ್ಷೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ಸಿನಿಮಾ ಬಿಡುಗಡೆಗೆ ಇನ್ನು ಕೆಲವು ದಿನಗಳು ಬಾಕಿ ಇರುವಾಗಲೇ ಈ ಮಟ್ಟದ ಬುಕಿಂಗ್ ದಾಖಲಾಗಿರುವುದು ಬಾಕ್ಸ್ ಆಫೀಸ್ ಸುನಾಮಿಗೆ ಮುನ್ಸೂಚನೆ ನೀಡಿದೆ.

Toxic Movie (5)

ಟಿಕೆಟ್ ಬುಕಿಂಗ್

ತಾರಾಗಣ ಮತ್ತು ತಾಂತ್ರಿಕ ವರ್ಗ

ಈ ಸಿನಿಮಾದಲ್ಲಿ ಪ್ರಮುಖ ನಟಿಯರ ದಂಡೇ ಇದೆ. ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ನಯನತಾರಾ, ಹುಮಾ ಖುರೇಷಿ ಹಾಗೂ ತಾರಾ ಸುತಾರಿಯಾ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ವೆಂಕಟ ಕೆ. ನಾರಾಯಣ ಹಾಗೂ ಯಶ್ ಜಂಟಿಯಾಗಿ ಈ ಬಿಗ್ ಬಜೆಟ್ ಸಿನಿಮಾವನ್ನು ನಿರ್ಮಿಸಿದ್ದಾರೆ. ರವಿ ಬಸ್ರೂರ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: ಬುಕಿಂಗ್ ಓಪನ್ ಆಗುತ್ತಿದ್ದಂತೆ ಟಾಕ್ಸಿಕ್ ಟಿಕೆಟ್‌ಗಳು ಸೋಲ್ಡ್‌ ಔಟ್: ಯಶ್ ಸಿನಿಮಾ ಕ್ರೇಜ್ ನೋಡಿ

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ

ಚಿತ್ರದ ಟೀಸರ್ ಹಾಗೂ ಪೋಸ್ಟರ್‌ಗಳು ಈಗಾಗಲೇ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದ್ದವು. ಈಗ ಮುಂಗಡ ಬುಕಿಂಗ್‌ನಲ್ಲಿಯೂ ಭರ್ಜರಿ ಯಶಸ್ಸು ಕಾಣುತ್ತಿರುವುದು ಸಿನಿಮಾದ ಕ್ರೇಜ್ ಹೆಚ್ಚಿಸಿದೆ. ಮೊದಲ ದಿನದ ಪ್ರದರ್ಶನದಲ್ಲೇ ಈ ಸಿನಿಮಾ ಹಳೆಯ ಎಲ್ಲಾ ಗಳಿಕೆಯ ದಾಖಲೆಗಳನ್ನು ಪುಡಿಪುಡಿ ಮಾಡುವುದು ಖಚಿತ ಎನ್ನಲಾಗುತ್ತಿದೆ. ಅಭಿಮಾನಿಗಳು ಈಗ ಆಗಸ್ಟ್ 26ರ ಅದ್ಧೂರಿ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us