ಧುರಂಧರ್ 2 Vs ಟಾಕ್ಸಿಕ್: 10 ಕೋಟಿ ಮಂದಿ ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ

ಮಾರ್ಚ್ 19ರಂದು ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಬಿಡುಗಡೆ ಆಗಲಿವೆ. ಈ ಎರಡೂ ಚಿತ್ರಗಳು ಜನಮನ ಗೆಲ್ಲಲು ಸಫಲವಾದರೆ ದೊಡ್ಡ ಸಿನಿ ಹಬ್ಬ ನಡೆಯಲಿದೆ. ಎರಡೂ ಸಿನಿಮಾ ಸೇರಿಸಿ ಒಟ್ಟು 10 ಕೋಟಿ ಜನರು ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ ಇದೆ.

ಧುರಂಧರ್ 2 Vs ಟಾಕ್ಸಿಕ್: 10 ಕೋಟಿ ಮಂದಿ ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ
Ranveer Singh, Yash

Updated on: Feb 23, 2026 | 4:28 PM

20226ರ ಎರಡು ಬಹುನಿರೀಕ್ಷಿತ ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗುತ್ತಿರುವುದರ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾಗಳು ಮಾರ್ಚ್ 19ರಂದು ರಿಲೀಸ್ ಆಗಲಿವೆ. ಈ ಸಿನಿಮಾಗಳ ಕ್ಲ್ಯಾಶ್ ಬಗ್ಗೆ ಬಾಕ್ಸ್ ಆಫೀಸ್ ಪಂಡಿತರು ಹಲವು ರೀತಿ ಅಭಿಪ್ರಾಯಗಳನ್ನು ನೀಡುತ್ತಿದ್ದಾರೆ. ಇಂಥ ಕ್ಲ್ಯಾಶ್ ಉತ್ತಮವಲ್ಲ ಎಂದು ಬಹುತೇಕರು ಹೇಳುತ್ತಿದ್ದಾರೆ. ಅಚ್ಚರಿ ಎಂದರೆ, ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ (Toxic) ಒಟ್ಟು ಸೇರಿ ಬರೋಬ್ಬರಿ 10 ಕೋಟಿ ಪ್ರೇಕ್ಷಕರನ್ನು ಸೆಳೆದುಕೊಳ್ಳಲಿವೆ ಎಂದು ಅಂದಾಜಿಸಲಾಗಿದೆ.

ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಈ ಚಿತ್ರದ ಟೀಸರ್ ಧೂಳೆಬ್ಬಿಸಿದೆ. ‘ಕೆಜಿಎಫ್: ಚಾಪ್ಟರ್ 2’ ಗೆಲುವಿನ ಬಳಿಕ ಯಶ್ ನಟಿಸಿದ ಸಿನಿಮಾ ಎಂಬ ಕಾರಣಕ್ಕೆ ‘ಟಾಕ್ಸಿಕ್’ ಸಿಕ್ಕಾಪಟ್ಟೆ ಹೈಪ್ ಸೃಷ್ಟಿ ಮಾಡಿದೆ. ಈ ಸಿನಿಮಾಗೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ರುಕ್ಮಿಣಿ ವಸಂತ್, ನಯನತಾರಾ ಸೇರಿದಂತೆ ಅನೇಕರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

‘ಧುರಂಧರ್ 2’ ಸಿನಿಮಾ ಕೂಡ ಸಣ್ಣದೇನಲ್ಲ. ರಣವೀರ್ ಸಿಂಗ್, ಅರ್ಜುನ್ ರಾಮ್​ಪಾಲ್, ಸಾರಾ ಅರ್ಜುನ್, ಸಂಜಯ್ ದತ್ ಮುಂತಾದವರು ನಟಿಸಿರುವ ಈ ಸಿನಿಮಾಗೆ ಆದಿತ್ಯ ಧಾರ್ ಅವರು ನಿರ್ದೇಶನ ಮಾಡಿದ್ದಾರೆ. ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿರುವುದರಿಂದ ಸೀಕ್ವೆಲ್ ಮೇಲೆ ನಿರೀಕ್ಷೆ ಜಾಸ್ತಿ ಇದೆ. ಮಾರ್ಚ್ 19ರಂದು ಈ ಸಿನಿಮಾ ಕೂಡ ಭರ್ಜರಿ ಓಪನಿಂಗ್ ಪಡೆದುಕೊಳ್ಳಲಿದೆ.

ಈ ಎರಡು ಸಿನಿಮಾಗಳ ಪೈಕಿ ಒಂದು ಚಿತ್ರದ ರಿಲೀಸ್ ದಿನಾಂಕ ಮುಂದೂಡಿಕೆ ಆದರೆ ದೊಡ್ಡ ಕ್ಲ್ಯಾಶ್ ತಪ್ಪುತ್ತದೆ. ಎರಡೂ ಸಿನಿಮಾಗಳು ಬೇರೆ ಬೇರೆ ದಿನಾಂಕಗಳಲ್ಲಿ ಬಿಡುಗಡೆ ಆದರೆ ತಲಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಸಾಮರ್ಥ್ಯ ಹೊಂದಿವೆ. ಆದರೆ ಎರಡೂ ಚಿತ್ರತಂಡಗಳು ಹಠಕ್ಕೆ ಬಿದ್ದು ಒಂದೇ ದಿನ ರಿಲೀಸ್ ಆಗುತ್ತಿವೆ.

ಇದನ್ನೂ ಓದಿ: ರವಿ ಬಸ್ರೂರು ಮಾತ್ರವಲ್ಲ: ಟಾಕ್ಸಿಕ್ ಚಿತ್ರಕ್ಕೆ 5 ಸಂಗೀತ ನಿರ್ದೇಶಕರು; ಜೀ ಮ್ಯೂಸಿಕ್ ತೆಕ್ಕೆಗೆ ಆಡಿಯೋ ಹಕ್ಕು

‘ಟಾಕ್ಸಿಕ್’ ಚಿತ್ರತಂಡದವರು ಮೊದಲು ರಿಲೀಸ್ ದಿನಾಂಕ ಅನೌನ್ಸ್ ಮಾಡಿದ್ದರು. ಮಾರ್ಚ್ 19ರಂದು ಬಿಡುಗಡೆ ಎಂದು ಖಚಿತಪಡಿಸಿದ್ದರು. ಆದರೆ ‘ಧುರಂಧರ್ 2’ ಚಿತ್ರತಂಡ ಕೂಡ ಅದೇ ದಿನಾಂಕದಲ್ಲಿ ರಿಲೀಸ್ ಮಾಡುವುದಾಗಿ ಹಠ ಹಿಡಿದಿದೆ. ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಹಲವು ಬಗೆಯ ಲೆಕ್ಕಾಚಾರಗಳು ನಡೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us