AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲಿಜಬೆತ್’ ಪಾತ್ರದ ಹೊಸ ಪೋಸ್ಟರ್ ರಿಲೀಸ್ ಮಾಡಿದ ‘ಟಾಕ್ಸಿಕ್’ ತಂಡ

Toxic movie: ‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರುಗಳು ನಟಿಸುತ್ತಿದ್ದಾರೆ. ಹುಮಾ ಖುರೇಷಿ ಅವರು ಈ ಸಿನಿಮಾ ಎಲಿಜಿಬೆತ್ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಇಂದು (ಜುಲೈ 28) ಹುಮಾ ಖುರೇಷಿ ಅವರ ಹುಟ್ಟುಹಬ್ಬವಾಗಿದ್ದು, ‘ಟಾಕ್ಸಿಕ್’ ಚಿತ್ರತಂಡವು ಹುಮಾ ಖುರೇಷಿ ಅವರಿಗೆ ಶುಭಾಶಯ ತಿಳಿಸುವ ಜೊತೆಗೆ ಅವರ ಪಾತ್ರದ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ.

‘ಎಲಿಜಬೆತ್’ ಪಾತ್ರದ ಹೊಸ ಪೋಸ್ಟರ್ ರಿಲೀಸ್ ಮಾಡಿದ ‘ಟಾಕ್ಸಿಕ್’ ತಂಡ
Huma
ಮಂಜುನಾಥ ಸಿ.
|

Updated on:Jul 28, 2026 | 12:08 PM

Share

ಮುಖ್ಯಾಂಶಗಳು

  • ಬಾಲಿವುಡ್ ನಟಿ ಹುಮಾ ಖುರೇಷಿ ಹುಟ್ಟಹಬ್ಬ ಇಂದು (ಜುಲೈ 28)
  • ಹುಮಾ ಖುರೇಷಿ ಅವರು ‘ಟಾಕ್ಸಿಕ್’ ಸಿನಿಮಾನಲ್ಲಿ ಎಲಿಜಬೆತ್ ಪಾತ್ರದಲ್ಲಿ ನಟಿಸಿದ್ದಾರೆ.
  • ‘ಟಾಕ್ಸಿಕ್’ ಚಿತ್ರತಂಡ ಹುಮಾ ಖುರೇಷಿ ಹುಟ್ಟುಹಬ್ಬಕ್ಕೆ ಪೋಸ್ಟರ್ ರಿಲೀಸ್ ಮಾಡಿದೆ.

ಯಶ್ (Yash) ನಟನೆಯ ‘ಟಾಕ್ಸಿಕ್’ ಭಾರತದ ಅತ್ಯಂತ ನಿರೀಕ್ಷಿತ ಎನಿಸಿಕೊಂಡಿದೆ. ಇನ್ನೊಂದು ತಿಂಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಯಶ್ ಜೊತೆಗೆ ಟಾಪ್ ನಟಿಯರಾದ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರುಗಳು ನಟಿಸುತ್ತಿದ್ದಾರೆ. ಹುಮಾ ಖುರೇಷಿ ಅವರು ಈ ಸಿನಿಮಾ ಎಲಿಜಿಬೆತ್ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಇಂದು (ಜುಲೈ 28) ಹುಮಾ ಖುರೇಷಿ ಅವರ ಹುಟ್ಟುಹಬ್ಬವಾಗಿದ್ದು, ‘ಟಾಕ್ಸಿಕ್’ ಚಿತ್ರತಂಡವು ಹುಮಾ ಖುರೇಷಿ ಅವರಿಗೆ ಶುಭಾಶಯ ತಿಳಿಸುವ ಜೊತೆಗೆ ಅವರ ಪಾತ್ರದ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ.

1950-60ರ ದಶಕದಲ್ಲಿ ನಡೆಯುವ ಕತೆಯನ್ನು ಒಳಗೊಂಡಿರುವ ‘ಟಾಕ್ಸಿಕ್’ ಸಿನಿಮಾನಲ್ಲಿ ಹುಮಾ ಖುರೇಷಿ ‘ಎಲಿಜಬೆತ್’ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಈ ಹಿಂದೆ ಬಿಡುಗಡೆ ಆಗಿದ್ದ ಹುಮಾ ಅವರ ಪೋಸ್ಟರ್​​ನಲ್ಲಿ ನಟಿಯು ಕಪ್ಪು ಬಣ್ಣದ ವಿಂಟೇಜ್ ಕಾರಿನ ಪಕ್ಕ ಬ್ರಿಟೀಷ್ ರಾಣಿಯರ ರೀತಿಯ ಕಪ್ಪು ಬಣ್ಣದ ಉಡುಗೆ ಧರಿಸಿ ನಿಂತಿದ್ದರು. ಆ ಫೋಟೊ ಸಖತ್ ಗಮನ ಸೆಳೆದ ಜೊತೆಗೆ ಹುಮಾ ಅವರ ಪಾತ್ರದ ಬಗ್ಗೆಯೂ ಸಾಕಷ್ಟು ಕುತೂಹಲ ಮೂಡಿಸಿತ್ತು. ಈಗ ಮತ್ತೊಂದು ಪೋಸ್ಟರ್ ಅನ್ನು ಇತ್ರತಂಡ ಹಂಚಿಕೊಂಡಿದೆ.

ಇದನ್ನೂ ಓದಿ: ಇದನ್ನೂ ಓದಿ:ಆಮಿರ್ ಖಾನ್‌ಗೆ ಕೊಲೆ ಬೆದರಿಕೆ; ಕೊಂದವರಿಗೆ 5 ಕೋಟಿ ರೂ. ಬಹುಮಾನ ಘೋಷಿಸಿದ ಅಯೋಧ್ಯೆ ಧಾರ್ಮಿಕ ಮುಖಂಡ

ಗೌನ್ ಮಾದರಿಯ ಗ್ಲಾಮರಸ್ ಉಡುಗೆ ತೊಟ್ಟು ಹುಮಾ ಖುರೇಷಿ ನಿಂತಿರುವ ಚಿತ್ರವನ್ನು ಇದೀಗ ಚಿತ್ರತಂಡ ಹಂಚಿಕೊಂದಿದೆ. ಜೊತೆಗೆ ‘ಟಾಕ್ಸಿಕ್’ ತಂಡವು ನಟಿ ಹುಮಾ ಖುರೇಷಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಸಹ ಕೋರಿದೆ. ಹುಮಾ ಖುರೇಷಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿಕೊಂಡಿರುವಂತೆ ಅವರು ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಬಹಳ ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರಂತೆ. ಸಿನಿಮಾದ ಬಿಡುಗಡೆಗಾಗಿ ಕಾಯುತ್ತಿದ್ದಾರಂತೆ. ಹುಮಾ ಖುರೇಷಿ ಅವರು ಈ ಹಿಂದೆ ಹೇಳಿದ್ದಂತೆ, ಸಿನಿಮಾನಲ್ಲಿ ಪ್ರತಿ ಮುಖ್ಯ ಪಾತ್ರಕ್ಕೂ ಪ್ರಾಧಾನ್ಯತೆ ಇದೆಯಂತೆ. ಪ್ರತಿಯೊಬ್ಬರಿಗೂ ತೆರೆ ಮಿಂಚಲು ಅವಕಾಶಗಳು ಇವೆಯಂತೆ.

ಹುಮಾ ಖುರೇಷಿ ಈ ಜುಲೈ 28ಕ್ಕೆ ಅವರ 40ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. 1986 ರಲ್ಲಿ ಜನಿಸಿರುವ ಹುಮಾ, ಭಾರತ ಚಿತ್ರರಂಗದ ಕಲ್ಟ್ ಕ್ಲಾಸಿಕ್ ಸಿನಿಮಾ ಎನಿಸಿಕೊಂಡಿರುವ ‘ಗ್ಯಾಂಗ್ಸ್ ಆಫ್ ವಸೇಪುರ್’ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟರು. ಈಗ ಬಾಲಿವುಡ್​​ನ ಬೇಡಿಕೆಯ ನಟಿಯರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಈ ಹಿಂದೆ ಹುಮಾ ಅವರು ಒಂದು ಮಲಯಾಳಂ, ಎರಡು ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಈಗ ‘ಟಾಕ್ಸಿಕ್’ ಮೂಲಕ ಕನ್ನಡದ ಪ್ಯಾನ್ ವರ್ಲ್ಡ್ ಸಿನಿಮಾನಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:07 pm, Tue, 28 July 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ