AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇರುಮುಡಿ’ ಸಿನಿಮಾ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ‘ಟಾಕ್ಸಿಕ್’ ಡಿಸ್ಟ್ರಿಬ್ಯೂಟರ್

ಮಾಸ್ ಮಹಾರಾಜ ರವಿತೇಜ ಅಭಿನಯದ 'ಇರುಮುಡಿ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೃಷ್ಟಿಸಿರುವ ಹೊಸ ಅಲೆಯ ಬಗ್ಗೆ ನಿರ್ಮಾಪಕ ದಿಲ್ ರಾಜು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಚಿತ್ರದ ಗೆಲುವು ಇಡೀ ತೆಲುಗು ಚಿತ್ರರಂಗಕ್ಕೆ ಹೊಸ ಚೈತನ್ಯ ತಂದಿದೆ ಎಂದಿರುವ ಅವರು, ರವಿತೇಜ ಜೊತೆಗಿನ ತಮ್ಮ ಮುಂದಿನ ಸಂಕ್ರಾಂತಿ 2027ರ ಬಿಡುಗಡೆಯ ಹೊಸ ಸಿನಿಮಾವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

‘ಇರುಮುಡಿ’ ಸಿನಿಮಾ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ‘ಟಾಕ್ಸಿಕ್’ ಡಿಸ್ಟ್ರಿಬ್ಯೂಟರ್
ಇರುಮುಡಿ-ಟಾಕ್ಸಿಕ್
ರಾಜೇಶ್ ದುಗ್ಗುಮನೆ
|

Updated on: Sep 01, 2026 | 7:39 AM

Share

ತೆಲುಗು ಚಿತ್ರರಂಗದಲ್ಲಿ ‘ಇರುಮುಡಿ’ ಸಿನಿಮಾ (Irumudi Movie) ಹೊಸ ಇತಿಹಾಸ ಬರೆದಿದೆ. ನಟ ರವಿತೇಜ ಅಭಿನಯದ ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಎರಡನೇ ವಾರಾಂತ್ಯದಲ್ಲೂ ಚಿತ್ರಮಂದಿರಗಳು ಭರ್ತಿಯಾಗಿವೆ. ಈ ಚಿತ್ರದ ಅಭೂತಪೂರ್ವ ಯಶಸ್ಸಿನ ಬಗ್ಗೆ ಖ್ಯಾತ ನಿರ್ಮಾಪಕ ದಿಲ್ ರಾಜು ಮೊದಲ ಬಾರಿಗೆ ಮಾತನಾಡಿದ್ದಾರೆ.

‘ಟಾಕ್ಸಿಕ್’ ಸಿನಿಮಾನ ತೆಲುಗು ರಾಜ್ಯಗಳಲ್ಲಿ ಹಂಚಿಕೆ ಮಾಡಿದ್ದು ದಿಲ್ ರಾಜು. 80 ಕೋಟಿ ರೂಪಾಯಿಗೆ ಈ ಹಂಚಿಕೆ ಪಡೆದಿದ್ದಾರೆ ಎನ್ನಲಾಗಿದೆ. ‘ಟಾಕ್ಸಿಕ್’ ರಿಲೀಸ್ ಸಂದರ್ಭದಲ್ಲಿ ‘ಇರುಮುಡಿ’ ಸಿನಿಮಾಗೆ ಥಿಯೇಟರ್ ಸಿಗದೆ ತೊಂದರೆ ಆಗಿತ್ತು. ಹೀಗಾಗಿ, ದಿಲ್ ರಾಜು ಅವರು ‘ಇರುಮುಡಿ’ ಚಿತ್ರದ ಬಗ್ಗೆ ಒಂದೇ ಒಂದು ಮಾತನ್ನು ಆಡಿರಲಿಲ್ಲ. ಈಗ ‘ಟಾಕ್ಸಿಕ್’ ಸಿನಿಮಾದ ಗಳಿಕೆ ನೆಲಕಚ್ಚಿದೆ. ಈ ವೇಳೆ ಅವರು ‘ಇರುಮುಡಿ’ ಬಗ್ಗೆ ಮಾತನಾಡಿದ್ದಾರೆ.

‘ಇರುಮುಡಿ ಚಿತ್ರದ ಗೆಲುವು ಇಡೀ ಚಿತ್ರರಂಗಕ್ಕೆ ಹೊಸ ಚೈತನ್ಯ ನೀಡಿದೆ. ಚಿತ್ರತಂಡಕ್ಕೆ ಮಾತ್ರವಲ್ಲದೆ ಎಲ್ಲರಿಗೂ ಇದು ಹೊಸ ಭರವಸೆ ಮೂಡಿಸಿದೆ. ಚಿತ್ರರಂಗದ ಪ್ರತಿಯೊಬ್ಬರು ಈ ಯಶಸ್ಸನ್ನು ಸಂಭ್ರಮಿಸುತ್ತಿದ್ದಾರೆ. ಚಿತ್ರಮಂದಿರಕ್ಕೆ ಪ್ರೇಕ್ಷಕರು ಹರಿದು ಬರುತ್ತಿದ್ದಾರೆ. ಇದು ನಿರ್ಮಾಪಕರಿಗೆ ದೊಡ್ಡ ಧೈರ್ಯ ನೀಡಿದೆ’ ಎಂದು ದಿಲ್ ರಾಜು ಹೇಳಿದ್ದಾರೆ.

‘ಇಂತಹ ಸಿನಿಮಾಗಳು ಚಿತ್ರರಂಗದ ಬೆಳವಣಿಗೆಗೆ ಅತ್ಯಗತ್ಯ. ಪ್ರೇಕ್ಷಕರ ಬೆಂಬಲ ಕಂಡು ನಮಗೆ ಸಂತಸವಾಗಿದೆ. ಇದು ನಿರ್ಮಾಪಕರು ಮತ್ತು ನಿರ್ದೇಶಕರಿಗೆ ಪ್ರೇರಣೆ ನೀಡುತ್ತದೆ. ಹೊಸ ಕಥೆಗಳನ್ನು ಮಾಡಲು ಇದು ನಮಗೆ ಸ್ಪೂರ್ತಿ ತಂದಿದೆ. ನಟರಿಗೂ ಇದು ಹೊಸ ಉತ್ಸಾಹ ತುಂಬಿದೆ’ ಎಂದು ಅವರು ಶ್ಲಾಘಿಸಿದ್ದಾರೆ.

ಇದೇ ವೇಳೆ ರವಿತೇಜ ಅವರ ಮುಂದಿನ ಚಿತ್ರದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಈ ಸಿನಿಮಾವನ್ನು ದಿಲ್ ರಾಜು ಅವರೇ ನಿರ್ಮಾಣ ಮಾಡುತ್ತಿದ್ದಾರೆ. ಹಸಿತ್ ಗೋಲಿ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಈ ಸಿನಿಮಾದಲ್ಲಿ ನಟ ಶ್ರೀವಿಷ್ಣು ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಈ ವಿಷಯ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ‘ಇರುಮುಡಿ’ಗೆ ತೆಲುಗು ನಟರ ಜೈಕಾರ; ‘ಟಾಕ್ಸಿಕ್’ ವಿಚಾರದಲ್ಲಿ ಕನ್ನಡ ಚಿತ್ರರಂಗದ ಮೌನ ಏತಕ್ಕೆ?

ಈ ಹೊಸ ಸಿನಿಮಾ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ತೆರೆಗೆ ಬರಲಿದೆ. 2027ರ ಸಂಕ್ರಾಂತಿಗೆ ಸಿನಿಮಾ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ‘ಇರುಮುಡಿ’ ಗೆಲುವಿನ ಬೆನ್ನಲ್ಲೇ ಈ ಹೊಸ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ರವಿತೇಜ ಅವರ ಹೊಸ ಅವತಾರ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ