AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆಯ ವೀವ್ಸ್ ಗಳಿಸಿದ ‘ಟಾಕ್ಸಿಕ್’ ಟೀಸರ್: ಯಾವ ಭಾಷೆಯಲ್ಲಿ ಹೆಚ್ಚು

Toxic movie teaser: ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ ‘ಟಾಕ್ಸಿಕ್’ ನಿನ್ನೆ ಬೆಳಿಗ್ಗೆ 9:30ಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಬಿಡುಗಡೆ ಆಗಿ 24 ಗಂಟೆಗಳಾಗಿವೆ. ಈ ಅವಧಿಯಲ್ಲಿ ದಾಖಲೆ ಮೊತ್ತದ ಜನ ಸಿನಿಮಾದ ಟೀಸರ್ ವೀಕ್ಷಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೇವಲ 24 ಗಂಟೆಗಳಲ್ಲಿ ಸುಮಾರು ಐದು ಕೋಟಿ ವೀವ್ಸ್ ಗಳಿಸಿಕೊಂಡಿದೆ.

ದಾಖಲೆಯ ವೀವ್ಸ್ ಗಳಿಸಿದ ‘ಟಾಕ್ಸಿಕ್’ ಟೀಸರ್: ಯಾವ ಭಾಷೆಯಲ್ಲಿ ಹೆಚ್ಚು
Toxic Teaser
ಮಂಜುನಾಥ ಸಿ.
|

Updated on: Feb 21, 2026 | 10:20 AM

Share

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ನಿನ್ನೆಯಷ್ಟೆ (ಫೆಬ್ರವರಿ 20) ಬಿಡುಗಡೆ ಆಗಿದೆ. ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ ‘ಟಾಕ್ಸಿಕ್’ ನಿನ್ನೆ ಬೆಳಿಗ್ಗೆ 9:30ಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಬಿಡುಗಡೆ ಆಗಿ 24 ಗಂಟೆಗಳಾಗಿವೆ. ಈ ಅವಧಿಯಲ್ಲಿ ದಾಖಲೆ ಮೊತ್ತದ ಜನ ಸಿನಿಮಾದ ಟೀಸರ್ ವೀಕ್ಷಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೇವಲ 24 ಗಂಟೆಗಳಲ್ಲಿ ಸುಮಾರು ಐದು ಕೋಟಿ ವೀವ್ಸ್ ಗಳಿಸಿಕೊಂಡಿದೆ.

1:55 ನಿಮಿಷದ ಟೀಸರ್ ಅನ್ನು ನಿನ್ನೆ ‘ಟಾಕ್ಸಿಕ್’ ಚಿತ್ರತಂಡ ಬಿಡುಗಡೆ ಮಾಡಿತ್ತು. ಟೀಸರ್, ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್​ ಪ್ರೊಡಕ್ಷನ್ಸ್​​ನ ಯೂಟ್ಯೂಬ್ ಚಾನೆಲ್​​ನಲ್ಲಿ ಬಿಡುಗಡೆ ಆಯ್ತು. ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಟೀಸರ್​​ಗೆ ಭರಪೂರ ಮೆಚ್ಚುಗೆಗಳು ವ್ಯಕ್ತವಾಗಿವೆ. ಟೀಸರ್ ಬಿಡುಗಡೆ ಆದ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

‘ಟಾಕ್ಸಿಕ್​’ನ ಕನ್ನಡದ ಟೀಸರ್ ಬಿಡುಗಡೆ ಆದ 24 ಗಂಟೆಗಳಲ್ಲಿ 74,19,923 ವೀವ್ಸ್ ಪಡೆದುಕೊಂಡಿದೆ. ಕನ್ನಡದ ಟೀಸರ್​​ಗಳ ಮಟ್ಟಿಗೆ ಇದೊಂದು ಹೊಸ ದಾಖಲೆಯೇ ಆಗಿದೆ. ಇನ್ನು ಇದೇ ಸಿನಿಮಾದ ತಮಿಳು ಟೀಸರ್ ಅದೇ ಅವಧಿಯಲ್ಲಿ 54.31 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ. ಇನ್ನು ಮಲಯಾಳಂ ಟೀಸರ್ 27.63 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ.

ಇದನ್ನೂ ಓದಿ:‘ವಿಂಟೇಜ್ ಯಶ್ ಈಸ್ ಬ್ಯಾಕ್’; ‘ಟಾಕ್ಸಿಕ್ ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

ಅತಿ ಹೆಚ್ಚು ವೀವ್ಸ್ ಪಡೆದುಕೊಂಡಿರುವುದು ‘ಟಾಕ್ಸಿಕ್’ ಸಿನಿಮಾದ ಹಿಂದಿ ಟೀಸರ್. ಕೇವಲ 24 ಗಂಟೆಯಲ್ಲಿ 2.19 ಕೋಟಿಗೂ ಹೆಚ್ಚು ಜನ ‘ಟಾಕ್ಸಿಕ್’ ಸಿನಿಮಾದ ಹಿಂದಿ ಟೀಸರ್ ಅನ್ನು ವೀಕ್ಷಿಸಿದ್ದಾರೆ. ಎರಡನೇ ಸ್ಥಾನ ತೆಲುಗು ಟೀಸರ್​​ಗೆ. ‘ಟಾಕ್ಸಿಕ್’ ಸಿನಿಮಾದ ತೆಲುಗು ಟೀಸರ್ ಅನ್ನು ಕೇವಲ 24 ಗಂಟೆಯಲ್ಲಿ 1.10 ಕೋಟಿಗೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ. ಅಲ್ಲಿಗೆ ಒಟ್ಟು ಸುಮಾರು 5 ಕೋಟಿ ಬಾರಿ ಟೀಸರ್ ವೀಕ್ಷಣೆ ಕಂಡಿದೆ.

‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದು, ಸಿನಿಮಾನಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರುಗಳು ನಾಯಕಿಯರಾಗಿ ನಟಿಸುತ್ತಿದ್ದಾರೆ. ಸಿನಿಮಾವನ್ನು ಗೀತು ಮೋಹನ್​​​ದಾಸ್ ನಿರ್​​ದೇಶನ ಮಾಡಿದ್ದು, ಸಿನಿಮಾಕ್ಕೆ ಕೆವಿಎನ್ ಮತ್ತು ಯಶ್ ಅವರ ಮಾನ್​​ಸ್ಟರ್ ಮೈಂಡ್ಸ್ ಬಂಡವಾಳ ಹೂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು