AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್? ಸ್ಥಳ ಎಲ್ಲಿ?

Toxic movie Trailer: ಈಗಾಗಲೇ ಬಿಡುಗಡೆ ಆಗಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್, ಪೋಸ್ಟರ್, ಹಾಡುಗಳು ಸಿನಿಮಾದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿವೆ. ಜೊತೆಗೆ ಸಿನಿಮಾದ ಕತೆ ಏನಿರಬಹುದೆಂಬ ಕುತೂಹಲವನ್ನೂ ಹುಟ್ಟು ಹಾಕಿವೆ. ಈಗಾಗಲೇ ಪೋಸ್ಟರ್ ಇನ್ನಿತರೆ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಟ್ರೈಲರ್ ಬಿಡುಗಡೆಗೂ ಮುಹೂರ್ತ ನಿಗದಿ ಪಡಿಸಿದ್ದಾರೆ.

‘ಟಾಕ್ಸಿಕ್’ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್? ಸ್ಥಳ ಎಲ್ಲಿ?
Toxic Movie Pr
ಮಂಜುನಾಥ ಸಿ.
|

Updated on:Jul 19, 2026 | 7:03 PM

Share

ಟಾಕ್ಸಿಕ್’ (Toxic) ಪ್ರಸ್ತುತ ಭಾರತದ ಬಹು ನಿರೀಕ್ಷಿತ ಸಿನಿಮಾ. ಯಶ್ ನಟಿಸಿ, ಸಹ ನಿರ್ಮಾಣ ಸಹ ಮಾಡಿರುವ ಈ ಸಿನಿಮಾಕ್ಕಾಗಿ ದೇಶ, ವಿದೇಶಗಳ ಸಿನಿಮಾ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಸಿನಿಮಾದ ಟೀಸರ್, ಪೋಸ್ಟರ್, ಹಾಡುಗಳು ಸಿನಿಮಾದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿವೆ. ಜೊತೆಗೆ ಸಿನಿಮಾದ ಕತೆ ಏನಿರಬಹುದೆಂಬ ಕುತೂಹಲವನ್ನೂ ಹುಟ್ಟು ಹಾಕಿವೆ. ಈಗಾಗಲೇ ಪೋಸ್ಟರ್ ಇನ್ನಿತರೆ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಟ್ರೈಲರ್ ಬಿಡುಗಡೆಗೂ ಮುಹೂರ್ತ ನಿಗದಿ ಪಡಿಸಿದ್ದಾರೆ.

ಕೆಲ ಮೂಲಗಳ ಪ್ರಕಾರ, ಸಿನಿಮಾದ ಟ್ರೈಲರ್ ಅನ್ನು ಈ ತಿಂಗಳಲ್ಲಿ ಬಿಡುಗಡೆ ಮಾಡುತ್ತಿಲ್ಲ, ಬದಲಿಗೆ ಮುಂದಿನ ತಿಂಗಳ ಎರಡನೇ ವಾರದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ನಿರ್ದಿಷ್ಟವಾಗಿ ಹೇಳಬೇಕೆಂದರೆ, ಆಗಸ್ಟ್ 8 ರಂದು ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಲಿದೆ ಎಂಬ ಸುದ್ದಿ ದಟ್ಟವಾಗಿ ಕೇಳಿ ಬರುತ್ತಿದೆ.

ಸಿನಿಮಾದ ಟ್ರೈಲರ್ ಬಿಡುಗಡೆಗಾಗಿ ಬೆಂಗಳೂರಿನಲ್ಲಿ ಯಶ್ ಅದ್ಧೂರಿಯಾದ ಕಾರ್ಯಕ್ರಮವನ್ನು ಆಯೋಜನೆ ಮಾಡಲಿದ್ದಾರಂತೆ. ಈ ಕಾರ್ಯಕ್ರಮದಲ್ಲಿ ಯಶ್ ಹಾಗೂ ಸಿನಿಮಾದ ಇತರೆ ಪ್ರಮುಖ ನಟಿಯರು, ನಟರು, ತಂತ್ರಜ್ಞರು ಎಲ್ಲರೂ ಭಾಗಿ ಆಗಲಿದ್ದಾರೆ. ಕಾರ್ಯಕ್ರಮದಲ್ಲಿ ಕೆಲ ಪ್ರಮುಖ ವ್ಯಕ್ತಿಗಳನ್ನು ಅತಿಥಿಗಳನ್ನಾಗಿ ಕರೆದುಕೊಂಡು ಬರಲು ಸಹ ಯಶ್ ಯೋಜನೆ ಹಾಕಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?

ಸಿನಿಮಾದ ಟ್ರೈಲರ್ ಬಿಡುಗಡೆಗೂ ಮುಂಚೆ ಯಶ್ ಅವರು ದೇಶದಾದ್ಯಂತ ಸಂಚರಿಸಿ ಸಿನಿಮಾದ ಪರ ಪ್ರಚಾರ ಮಾಡಲಿದ್ದಾರೆ. ಎಲ್ಲ ಪ್ರಮುಖ ರಾಜ್ಯಗಳ ಪ್ರಮುಖ ನಗರಗಳಲ್ಲಿಯೂ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ದೇಶ ಮಾತ್ರವಲ್ಲದೆ, ವಿದೇಶಗಳಲ್ಲಿಯೂ ಸಹ ಯಶ್ ಹಾಗೂ ತಂಡ ಅದ್ಧೂರಿ ಪ್ರಚಾರವನ್ನು ಮಾಡಲಿದೆ.

‘ಟಾಕ್ಸಿಕ್’ ಸಿನಿಮಾವನ್ನು ಗೀತು ಮೋಹನ್​​ದಾಸ್ ನಿರ್ದೇಶನ ಮಾಡಿದ್ದು, ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಸಿನಿಮಾನಲ್ಲಿ ನಯನತಾರಾ, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾ ಆಗಸ್ಟ್ 26ಕ್ಕೆ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:00 pm, Sun, 19 July 26

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ