ಯಶ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ದೊಡ್ಡ ಸರ್ಪ್ರೈಸ್
Toxic movie: ಯಶ್ ನಟಿಸುತ್ತಿರುವ ‘ಟಾಕ್ಸಿಕ್’ ಸಿನಿಮಾ ಭಾರತದ ಅತಿ ಹೆಚ್ಚು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾದ ನಾಯಕಿಯರ ಪೋಸ್ಟರ್ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಇದೀಗ ಯಶ್ ಹುಟ್ಟುಹಬ್ಬಕ್ಕೆ ಸಿನಿಮಾ ಪ್ರಿಯರಿಗೆ ಮತ್ತು ಯಶ್ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ನೀಡಲು ‘ಟಾಕ್ಸಿಕ್’ ಚಿತ್ರತಂಡ ಯೋಜನೆ ಹಾಕಿಕೊಂಡಂತಿದೆ.

ಯಶ್ (Yash) ಭಾರತದ ಬಲು ಜನಪ್ರಿಯ ಸ್ಟಾರ್ ನಟ. ‘ಕೆಜಿಎಫ್’ ಸಿನಿಮಾ ಸರಣಿಯಿಂದಾಗಿ ಯಶ್ ಅವರ ಜನಪ್ರಿಯತೆ ಸಾಗರ ದಾಟಿ ಹಬ್ಬಿದೆ. ಇದೀಗ ಯಶ್ ಅವರು ‘ಟಾಕ್ಸಿಕ್’ ಸಿನಿಮಾನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಕಳೆದ ಕೆಲವ ವರ್ಷಗಳಿಂದಲೂ ‘ಟಾಕ್ಸಿಕ್’ನಲ್ಲಿ ಯಶ್ ಬ್ಯುಸಿಯಾಗಿದ್ದಾರೆ. ಸಿನಿಮಾ ಬಿಡುಗಡೆಗೆ ಕೆಲವೇ ತಿಂಗಳು ಬಾಕಿ ಇದೆ. ಇದೀಗ ಸಿನಿಮಾದ ಪಾತ್ರಗಳ ಪೋಸ್ಟರ್ಗಳನ್ನು ಒಂದೊಂದಾಗಿ ಹಂಚಿಕೊಳ್ಳಲಾಗುತ್ತಿದೆ. ಇದೀಗ ಹರಿದಾಡುತ್ತಿರುವ ಸುದ್ದಿಯೆಂದರೆ ಯಶ್ ಅವರ ಹುಟ್ಟುಹಬ್ಬಕ್ಕೆ ‘ಟಾಕ್ಸಿಕ್’ ಸಿನಿಮಾ ತಂಡದಿಂದ ದೊಡ್ಡ ಉಡುಗೊರೆಯೇ ಸಿನಿಮಾ ಪ್ರೇಮಿಗಳಿಗೆ ಸಿಗಲಿದೆ ಎಂಬುದು.
ಯಶ್ ಅವರ ಹುಟ್ಟುಹಬ್ಬ ಜನವರಿ 8ಕ್ಕಿದೆ. ಅದೇ ದಿನ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಈ ವರೆಗೆ ‘ಟಾಕ್ಸಿಕ್’ ಸಿನಿಮಾದ ಪೋಸ್ಟರ್ಗಳು ಮಾತ್ರವೇ ಹೊರಬಿಡಲಾಗಿದೆ. ಆದರೆ ಸಿನಿಮಾದ ಟೀಸರ್ ಅಥವಾ ಟ್ರೈಲರ್ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಯಶ್ ಹುಟ್ಟುಹಬ್ಬ ಹತ್ತಿರದಲ್ಲೇ ಇದ್ದು, ಅದೇ ದಿನ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ.
‘ಟಾಕ್ಸಿಕ್’ ಸಿನಿಮಾದ ಫಸ್ಟ್ ಲುಕ್ ಟೀಸರ್ ಯಶ್ ಅವರ ಹುಟ್ಟುಹಬ್ಬದಂದೇ ಬಿಡುಗಡೆ ಆಗಿತ್ತು. ಇದೀಗ ಮತ್ತೊಮ್ಮೆ ಯಶ್ ಹುಟ್ಟುಹಬ್ಬದಂದೇ ಸಿನಿಮಾದ ಟೀಸರ್ ಅಥವಾ ಟ್ರೈಲರ್ ಬಿಡುಗಡೆ ಆಗುವ ಸಾಧ್ಯತೆ ಇದೆ. ಸಿನಿಮಾದ ನಾಯಕಿಯರಾದ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ಅವರ ಪಾತ್ರಗಳ ಪೋಸ್ಟರ್ಗಳನ್ನು ಚಿತ್ರತಂಡ ಈಗಾಗಲೇ ಹಂಚಿಕೊಂಡಿದೆ. ಈಗ ಸಿನಿಮಾದ ಟೀಸರ್ ಅಥವಾ ಟ್ರೈಲರ್ ಅನ್ನು ಬಿಡುಗಡೆ ಮಾಡುವ ಸಮಯ ಸನ್ನಿಹಿತವಾಗಿದೆ. ಯಶ್ ಹುಟ್ಟುಹಬ್ಬಕ್ಕಿಂತಲೂ ಒಳ್ಳೆಯ ಸಮಯ ಸಿಗಲಿಕ್ಕಿಲ್ಲವೇನೊ.
ಇದನ್ನೂ ಓದಿ:ನನ್ನ ಬರವಣಿಗೆಯನ್ನೂ ಮೆಚ್ಚಬೇಕು; ಸಿಲ್ಲಿ ಲಲ್ಲಿಯಲ್ಲಿ ಹೇಳಿದ್ದ ಯಶ್
‘ಟಾಕ್ಸಿಕ್’ ಸಿನಿಮಾವನ್ನು ಮಲಯಾಳಂ ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ನಾಯಕನಾಗಿ ಯಶ್ ನಟಿಸಿರುವುದು ಮಾತ್ರವಲ್ಲದೆ ಸಿನಿಮಾದ ಕತೆ ಸಹ ರಚಿಸಿದ್ದಾರೆ. ಕೆವಿಎನ್ ಮತ್ತು ಯಶ್ ಅವರ ಮಾನ್ಸ್ಸ್ಟರ್ ಮೈಂಡ್ ನಿರ್ಮಾಣ ಸಂಸ್ಥೆಗಳು ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಸಿನಿಮಾ ಕನ್ನಡ ಮಾತ್ರವಲ್ಲದೆ ಭಾರತದ ಇತರೆ ಭಾಷೆಗಳ ಜೊತೆಗೆ ಇಂಗ್ಲೀಷ್ನಲ್ಲಿಯೂ ಏಕಕಾಲಕ್ಕೆ ನಿರ್ಮಾಣ ಆಗುತ್ತಿದೆ. ಕೆಲವು ಹಾಲಿವುಡ್ ತಂತ್ರಜ್ಞರು ಸಹ ಈ ಸಿನಿಮಾನಲ್ಲಿ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ಮಾರ್ಚ್ 19 ರಂದು ಬಿಡುಗಡೆ ಆಗಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




