AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್ ರಿಲೀಸ್; ಅಧಿಕೃತ ಘೋಷಣೆ ಮಾಡಿದ ಯಶ್

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 8 ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಟ್ರೇಲರ್ ಲಾಂಚ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಪ್ಯಾನ್-ಇಂಡಿಯಾ ಸಿನಿಮಾ ಆಗಸ್ಟ್ 26 ರಂದು ಜಗತ್ತಿನಾದ್ಯಂತ ತೆರೆಕಾಣಲು ಸಜ್ಜಾಗಿದೆ.

ಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್ ರಿಲೀಸ್; ಅಧಿಕೃತ ಘೋಷಣೆ ಮಾಡಿದ ಯಶ್
ಟಾಕ್ಸಿಕ್
ರಾಜೇಶ್ ದುಗ್ಗುಮನೆ
|

Updated on: Aug 01, 2026 | 12:27 PM

Share

ಮುಖ್ಯಾಂಶಗಳು

  • ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡ ರಾಕಿಂಗ್ ಸ್ಟಾರ್ ಯಶ್
  • ಟಾಕ್ಸಿಕ್ ಶೂಟಿಂಗ್ ಆರಂಭವಾಗಿ ಎರಡು ವರ್ಷ
  • ಬೆಂಗಳೂರಿನಲ್ಲೇ ನಡೆಯಲಿದೆ ಮೆಗಾ ಟ್ರೇಲರ್ ಲಾಂಚ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ (Toxic Movie) ದೊಡ್ಡ ಅಪ್ಡೇಟ್‌ಗಾಗಿ ಇಡೀ ಭಾರತೀಯ ಚಿತ್ರರಂಗವೇ ಕಾಯುತ್ತಿತ್ತು. ಈಗ ಆ ಸುದೀರ್ಘ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದೆ. ಚಿತ್ರತಂಡವು ಯಶ್ ಅವರ ಖಡಕ್ ಲುಕ್ ಇರುವ ಹೊಸ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ಇದರ ಜೊತೆಗೆ ಬಹುನಿರೀಕ್ಷಿತ ಟ್ರೇಲರ್ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ರಾಕಿ ಭಾಯ್ ಅಭಿಮಾನಿಗಳಲ್ಲಿ ಈ ಸುದ್ದಿ ಭಾರಿ ಸಂಚಲನ ಸೃಷ್ಟಿಸಿದೆ.

ಬೆಂಗಳೂರಿನಲ್ಲೇ ಟ್ರೇಲರ್ ರಿಲೀಸ್

‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಹೊಸ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಇದರಲ್ಲಿ ಯಶ್ ನಿರ್ವಹಿಸುತ್ತಿರುವ ‘ರಾಯಾ’ ಪಾತ್ರದ ನೆರಳು ಮಾತ್ರ ಕಾಣಿಸುತ್ತಿದೆ. ಅವರ ಕೈಯಲ್ಲಿ ಟಾಮಿ ಗನ್ ಇರುವುದು ಚಿತ್ರದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಚಿತ್ರದ ಭರ್ಜರಿ ಪ್ರಚಾರ ಕಾರ್ಯಗಳು ಬೆಂಗಳೂರಿನಿಂದಲೇ ಆರಂಭವಾಗಲಿವೆ. ಆಗಸ್ಟ್ 8 ರಂದು ಬೆಂಗಳೂರಿನಲ್ಲಿ ಈ ಸಿನಿಮಾದ ಟ್ರೇಲರ್ ಅನ್ನು ಅದ್ಧೂರಿಯಾಗಿ ಲಾಂಚ್ ಮಾಡಲಾಗುತ್ತಿದೆ. ವಿಶೇಷವೆಂದರೆ ಆಗಸ್ಟ್ 8 ರಂದೇ ಈ ಚಿತ್ರದ ಶೂಟಿಂಗ್ ಆರಂಭವಾಗಿ ಭರ್ತಿ ಎರಡು ವರ್ಷಗಳು ಪೂರೈಸಲಿವೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ಕಿಯಾರಾ

ಹಲವು ರಹಸ್ಯಗಳನ್ನು ಬಿಚ್ಚಿಡಲಿದೆ ಬಹುನಿರೀಕ್ಷಿತ ಟ್ರೇಲರ್

ಇದುವರೆಗೆ ಬಿಡುಗಡೆಯಾಗಿರುವ ಸಿನಿಮಾದ ಪ್ರತಿಯೊಂದು ಝಲಕ್ ಕೂಡ ರಹಸ್ಯಗಳಿಂದಲೇ ಕೂಡಿತ್ತು. ಚಿತ್ರದ ಕಥೆ ಏನು ಎಂಬುದು ಯಾರಿಗೂ ತಿಳಿದಿಲ್ಲ. ಈಗ ಬಿಡುಗಡೆಯಾಗಲಿರುವ ಟ್ರೇಲರ್ ಚಿತ್ರದ ಇಡೀ ಪ್ರಪಂಚವನ್ನು ಪ್ರೇಕ್ಷಕರಿಗೆ ಪರಿಚಯಿಸಲಿದೆ. ಚಿತ್ರದ ಭವ್ಯತೆ, ಪಾತ್ರಗಳ ಹಿನ್ನೆಲೆ ಹಾಗೂ ಕಥೆಯ ಒಂದು ಸಣ್ಣ ಎಳೆಯನ್ನು ಇದು ಬಿಚ್ಚಿಡಲಿದೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರವು ಈ ವರ್ಷದ ಅತ್ಯಂತ ಬಿಗ್ ಬಜೆಟ್ ಸಿನಿಮಾಗಳಲ್ಲೊಂದಾಗಿದೆ. ಚಿತ್ರದ ಅದ್ಭುತ ಮೇಕಿಂಗ್ ನೋಡಲು ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಆಗಸ್ಟ್ 26 ರಂದು ವಿಶ್ವದಾದ್ಯಂತ ಭರ್ಜರಿ ಬಿಡುಗಡೆ

‘ಟಾಕ್ಸಿಕ್ ಚಿತ್ರದಲ್ಲಿ ದೊಡ್ಡ ತಾರಾಗಣವೇ ಜತೆಯಾಗಿದೆ. ನಯನತಾರಾ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್ ಮತ್ತು ಹುಮಾ ಖುರೇಷಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ. ಇದರ ಜೊತೆಗೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಿಗೂ ಡಬ್ ಮಾಡಿ ರಿಲೀಸ್ ಮಾಡಲಾಗುತ್ತಿದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ಚಿತ್ರವನ್ನು ನಿರ್ಮಿಸಿವೆ. ಆಗಸ್ಟ್ 26ರ ಬುಧವಾರದಂದು ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ