AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಷಾ ಸಹ ಆಗಲಿದ್ದಾರೆ ಶಾಸಕಿ, ವಿಜಯ್ ಕ್ಷೇತ್ರದಿಂದಲೇ ಸ್ಪರ್ಧೆ?

Trisha Krishnan: ವಿಜಯ್ ಅವರು ನಟಿ ತ್ರಿಷಾ ಜೊತೆಗೆ ಆಪ್ತ ಸಂಬಂಧ ಹೊಂದಿರುವುದು ಈಗ ಗುಟ್ಟೇನೂ ಅಲ್ಲ. ವಿಜಯ್ ಅವರ ಪತ್ನಿ ಸಹ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ತ್ರಿಷಾ ಅವರ ಹುಟ್ಟುಹಬ್ಬದ ದಿನವೇ ವಿಜಯ್ ಅವರ ಪಕ್ಷ ಗೆಲುವು ಸಾಧಿಸಿದ್ದು, ಇದೀಗ ತ್ರಿಷಾ ಸಹ ಶಾಸಕಿ ಆಗುವ ಆ ಬಳಿಕ ಸಚಿವೆ ಆಗುವ ಸಾಧ್ಯತೆ ಸಹ ಇದೆ ಎನ್ನಲಾಗುತ್ತಿದೆ.

ತ್ರಿಷಾ ಸಹ ಆಗಲಿದ್ದಾರೆ ಶಾಸಕಿ, ವಿಜಯ್ ಕ್ಷೇತ್ರದಿಂದಲೇ ಸ್ಪರ್ಧೆ?
Vijay Trisha
ಮಂಜುನಾಥ ಸಿ.
|

Updated on: May 06, 2026 | 10:32 PM

Share

ತಮಿಳು ಚಿತ್ರರಂಗದ ಸ್ಟಾರ ನಟ ವಿಜಯ್ (Vijay) ಅವರ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ವಿಜಯ್ ಅವರು ನಾಳೆ (ಮೇ 07) ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ. ವಿಜಯ್ ಅವರು ನಟಿ ತ್ರಿಷಾ ಜೊತೆಗೆ ಆಪ್ತ ಸಂಬಂಧ ಹೊಂದಿರುವುದು ಈಗ ಗುಟ್ಟೇನೂ ಅಲ್ಲ. ವಿಜಯ್ ಅವರ ಪತ್ನಿ ಸಹ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ತ್ರಿಷಾ ಅವರ ಹುಟ್ಟುಹಬ್ಬದ ದಿನವೇ ವಿಜಯ್ ಅವರ ಪಕ್ಷ ಗೆಲುವು ಸಾಧಿಸಿದ್ದು, ಇದೀಗ ತ್ರಿಷಾ ಸಹ ಶಾಸಕಿ ಆಗುವ ಆ ಬಳಿಕ ಸಚಿವೆ ಆಗುವ ಸಾಧ್ಯತೆ ಸಹ ಇದೆ ಎನ್ನಲಾಗುತ್ತಿದೆ.

ದಳಪತಿ ವಿಜಯ್ ಅವರು ತಮಿಳುನಾಡು ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಪೆರಂಬೂರು ಮತ್ತು ಈಸ್ಟ್ ತಿರುಚ್ಚಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಎರಡೂ ಕಡೆಯೂ ವಿಜೇತರಾಗಿದ್ದಾರೆ. ನಿಯಮದ ಅನುಸಾರ ಈಗ ವಿಜಯ್ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಬೇಕಿದ್ದು, ಅಲ್ಲಿ ಮರು ಚುನಾವಣೆ ನಡೆಯಲಿದೆ. ಮೂಲಗಳ ಪ್ರಕಾರ, ವಿಜಯ್ ಅವರು ಪೆರಂಬೂರು ಕ್ಷೇತ್ರವನ್ನು ಉಳಿಸಿಕೊಂಡು, ಈಸ್ಟ್ ತಿರುಚ್ಚಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಈಸ್ಟ್ ತಿರುಚ್ಚಿ ಕ್ಷೇತ್ರದಿಂದ ತಮ್ಮ ಆಪ್ತೆ ತ್ರಿಷಾ ಕೃಷ್ಣನ್ ಅವರನ್ನು ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ:ದಳಪತಿ ವಿಜಯ್ ಗೆದ್ದಿದ್ದಕ್ಕೆ ದುನಿಯಾ ವಿಜಿ ಹೇಳಿದ್ದೇನು?

ಜ್ಯೋತಿಷಿ ಪ್ರಶಾಂತ್ ಕಿಣಿ ಸಹ ಈ ಬಗ್ಗೆ ಭವಿಷ್ಯ ನುಡಿದಿದ್ದು, ನಟಿ ತ್ರಿಷಾ ಚುನಾವಣೆಗೆ ಸ್ಪರ್ಧಿಸಿ ಯಶಸ್ಸು ಗಳಿಸುತ್ತಾರೆ ಎಂದಿದ್ದಾರೆ. ಒಂದೊಮ್ಮೆ ತ್ರಿಷಾ ಅವರನ್ನು ವಿಜಯ್, ಚುನಾವಣೆಗೆ ನಿಲ್ಲಿಸಿದ್ದೇ ಆದಲ್ಲಿ ಅವರು ಗೆಲ್ಲುವುದು ಪಕ್ಕಾ ಆಗಲಿದೆ. ಮಾತ್ರವಲ್ಲದೆ, ಅವರಿಗೆ ಸಚಿವ ಸ್ಥಾನ ದೊರೆತರೂ ಆಶ್ಚರ್ಯವಿಲ್ಲ.

ಕೆಲ ವಾರಗಳ ಹಿಂದೆ ತ್ರಿಷಾ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿತ್ತು. ವಿಡಿಯೋನಲ್ಲಿ ತ್ರಿಷಾ ಅವರು ತಮಗೆ ತಮಿಳುನಾಡಿನ ಸಿಎಂ ಆಗಬೇಕೆಂಬ ಆಸೆ ಇದೆ ಎಂದು ಹೇಳಿದ್ದರು. ಈಗ ನೋಡಿದರೆ ಅವರ ಆಪ್ತರಾಗಿರುವ ವಿಜಯ್ ಸಿಎಂ ಆಗಲಿದ್ದು, ತ್ರಿಷಾ ಅವರ ಆಸೆಯೂ ಸಹ ಮುಂದಿನ ದಿನಗಳಲ್ಲಿ ನೆರವೇರುವ ಸಾಧ್ಯತೆ ಗೋಚರಿಸುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ