AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ವಿಚ್ಛೆದನ ಬಗ್ಗೆ ನಂಬಿಕೆ ಇಲ್ಲ, ಮದುವೆಗೂ ಮೊದಲು ನೂರು ಬಾರಿ ಯೋಚಿಸುವೆ’; ತ್ರಿಷಾ

ನಟಿ ತ್ರಿಷಾ ಕೃಷ್ಣನ್ ಹಳೆಯ ಹೇಳಿಕೆಯೊಂದು ದಳಪತಿ ವಿಜಯ್ ಜೊತೆಗಿನ ಸಂಬಂಧದ ಗಾಸಿಪ್ ಹಿನ್ನೆಲೆಯಲ್ಲಿ ವೈರಲ್ ಆಗಿದೆ. ಈ ಹಿಂದೆ ನಿಶ್ಚಿತಾರ್ಥ ಮುರಿದುಕೊಂಡಿದ್ದ ತ್ರಿಷಾ, ವಿಚ್ಛೇದನದಲ್ಲಿ ತನಗೆ ನಂಬಿಕೆಯಿಲ್ಲ ಎಂದಿದ್ದರು. ಮದುವೆಗೂ ಮುನ್ನ 100 ಬಾರಿ ಯೋಚಿಸುತ್ತೇನೆ, ಅತೃಪ್ತ ಜೀವನ ನಡೆಸಲು ಇಷ್ಟವಿಲ್ಲ ಎಂದೂ ಹೇಳಿದ್ದರು.

‘ನನಗೆ ವಿಚ್ಛೆದನ ಬಗ್ಗೆ ನಂಬಿಕೆ ಇಲ್ಲ, ಮದುವೆಗೂ ಮೊದಲು ನೂರು ಬಾರಿ ಯೋಚಿಸುವೆ’; ತ್ರಿಷಾ
ತ್ರಿಷಾ
ರಾಜೇಶ್ ದುಗ್ಗುಮನೆ
|

Updated on: Mar 11, 2026 | 10:13 AM

Share

ನಟಿ ತ್ರಿಷಾ ಕೃಷ್ಣನ್ (Trisha) ಅವರು ಇನ್ನೂ ಅವಿವಾಹಿತೆ. ದಳಪತಿ ವಿಜಯ್ ಜೊತೆ ಅವರು ಕಾಣಿಸಿಕೊಳ್ಳುತ್ತಿರುವುದರಿಂದ ಇಬ್ಬರ ಮಧ್ಯೆ ಸಂಬಂಧ ಕಲ್ಪಿಸಲಾಗುತ್ತಿದೆ. ಇದು ಎಷ್ಟರ ಮಟ್ಟಿಗೆ ಸತ್ಯ ಎಂಬ ಪ್ರಶ್ನೆಗೆ ವಿಜಯ್ ಅಥವಾ ತ್ರಿಷಾ ಅವರೇ ಸ್ಪಷ್ಟನೆ ಕೊಡಬೇಕಿದೆ. ಈ ಮಧ್ಯೆ ವಿಜಯ್ ಅವರಿಗೆ ವಿಚ್ಛೇದನ ಕೊಡಲು ಪತ್ನಿ ಸಂಗೀತಾ ರೆಡಿ ಆಗಿದ್ದಾರೆ. ಹೀಗಿರುವಾಗ, ತ್ರಿಷಾ ಅವರ ಹಳೆಯ ಹೇಳಿಕೆ ವೈರಲ್ ಆಗಿದೆ.

ವಿಜಯ್ ವಿರುದ್ಧ ಸಂಗೀತ ಗಂಭೀರ ಆರೋಪ ಮಾಡಿದ್ದಾರೆ. ಪತಿ ವಿಜಯ್​​ಗೆ ಅಕ್ರಮ ಸಂಬಂಧ ಇದೆ ಎಂದು ಅವರು ಆರೋಪಿಸಿದ್ದಾರೆ. ವಿಜಯ್ ಅಕ್ರಮ ಸಂಬಂಧ ಹೊಂದಿರೋದು ತ್ರಿಷಾ ಜೊತೆ ಎಂದು ಎಲ್ಲರೂ ಕಲ್ಪಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ ತ್ರಿಷಾ ಅವರು ಈ ಮೊದಲು ವಿವಾಹದ ಬಗ್ಗೆ ಮಾತನಾಡಿದ್ದರು. ತ್ರಿಷಾಗೆ ಈ ಮೊದಲು ನಿಶ್ಚಿತಾರ್ಥ ಆಗಿತ್ತು. ಅದನ್ನು ಅವರು ಮುರಿದುಕೊಂಡರು. ಇದಕ್ಕೆ ಕಾರಣವನ್ನೂ ಅವರು ನೀಡಿದ್ದರು. ತ್ರಿಷಾಗೆ ಆ ವ್ಯಕ್ತಿ ಸಾಕಷ್ಟು ಷರತ್ತುಗಳನ್ನು ಹಾಕುತ್ತಿದ್ದರಂತೆ. ಈ ಕಾರಣದಿಂದ ಅವರು ಸಂಬಂಧ ಮುಂದುವರಿಸಲೇ ಇಲ್ಲ.

‘ನಾನು ವಿಚ್ಛೇದನದಲ್ಲಿ ನಂಬಿಕೆ ಇಟ್ಟಿಲ್ಲ. ಹೀಗಾಗಿ, ನಾನು ಜೀವನ ಮಾಡಬೇಕಾದ ವ್ಯಕ್ತಿ ಇವರೇ ಎಂದು ಫೀಲ್ ಆಗಬೇಕು. ನಾನು ಮದುವೆಯಾದ ಬಳಿಕ ವಿಚ್ಛೇದನ ಪಡೆಯಲು ಬಯಸುವುದಿಲ್ಲ. ಅದೂ ನಾನಿಷ್ಟ ಪಟ್ಟ ವ್ಯಕ್ತಿಯಿಂದ ದೂರ ಆಗಲ್ಲ’ ಎಂದು ಅವರು ಹೇಳಿದರು.

‘ನನಗೆ ವಿಚ್ಛೇದನದಲ್ಲಿ ನಂಬಿಕೆ ಇಲ್ಲ. ಮದುವೆಗೂ ಮುನ್ನ 100 ಬಾರಿ ಯೋಚಿಸುತ್ತೇನೆ. ಬೇರೆಯವರಿಗೆ ನೋವುಂಟು ಮಾಡಲು ಅಥವಾ ಅತೃಪ್ತ ಜೀವನ ನಡೆಸಲು ನಾನು ಬಯಸುವುದಿಲ್ಲ’ ತ್ರಿಷಾ ಈ ಮೊದಲು ಹೇಳಿದ್ದರು.

‘ನನ್ನ ಸುತ್ತಲಿರೋ ಅನೇಕರು ತಪ್ಪು ಕಾರಣಗಳಿಗಾಗಿ ಮದುವೆಯಾಗುತ್ತಿದ್ದಾರೆ ಎಂದು ನನಗೆ ಅನಿಸುತ್ತದೆ. ಅವರು ತುಂಬಾ ಅತೃಪ್ತರು. ನಾನು ಅಂತಹ ದಾಂಪತ್ಯದಲ್ಲಿರಲು ಬಯಸುವುದಿಲ್ಲ. ನಾನು ಪ್ರೀತಿಯಲ್ಲಿ ಬೀಳಲು ಬಯಸುತ್ತೇನೆ. ನಾನು ಅದರ ಬಗ್ಗೆ ತುಂಬಾ ನಿರ್ದಿಷ್ಟವಾಗಿದ್ದೇನೆ. ಹೀಗಾಗಿ, ಮದುವೆಗೂ ಮೊದಲು ನಾನು ಯೋಚಿಸುತ್ತೇನೆ’ ಎನ್ನುತ್ತಾರೆ ತ್ರಿಷಾ.

ಇದನ್ನೂ ಓದಿ: ತ್ರಿಷಾಗೆ ನಡೆದಿತ್ತು ನಿಶ್ಚಿತಾರ್ಥ; ಹುಡುಗ ಯಾರು? ಬೇಡ ಎಂದಿದ್ದು ಏಕೆ?

‘ಈ ಕಾರಣದಿಂದ ನನ್ನ ಮದುವೆ ರದ್ದಾಯಿತು. ನಟನೆ ತೊರೆಯುವಂತೆ ಆತ ಹೇಳಿದೆ. ಹೀಗಾಗಿ, ನಾನು ಆತನನ್ನೇ ಬಿಟ್ಟೆ. ನಾನು ಪ್ರೆಗ್ನೆಂಟ್ ಆಗಿದ್ದಾಗ ಮಾತ್ರ ನಟನೆಯಿಂದ ಬ್ರೇಕ್ ಪಡೆಯಬೇಕು ಎಂದುಕೊಂಡಿದ್ದೇನೆ. ನನ್ನ ಕೊನೆ ಉಸಿರು ಇರೋವರೆಗೂ ನಟಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ