ಶೃಂಗೇರಿ ಶಾರದಾ ಪೀಠಕ್ಕೆ ಖ್ಯಾತ ನಟಿ ತ್ರಿಷಾ ಕೃಷ್ಣನ್ ಭೇಟಿ; ಫೋಟೋ ವೈರಲ್

ಸದಾ ಸಿನಿಮಾ ಶೂಟಿಂಗ್ ಮತ್ತು ಪ್ರಚಾರ ಕಾರ್ಯಗಳಲ್ಲಿ ಬ್ಯುಸಿಯಾಗಿರುವ ಖ್ಯಾತ ನಟಿ ತ್ರಿಷಾ ಕೃಷ್ಣನ್ ಅವರು, ಆಗಾಗ ಆಧ್ಯಾತ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಮೂಲಕ ಮನಸ್ಸಿಗೆ ನೆಮ್ಮದಿ ಕಂಡುಕೊಳ್ಳುತ್ತಾರೆ. ಈಗ ಅವರು ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋ ವೈರಲ್ ಆಗಿದೆ.

ಶೃಂಗೇರಿ ಶಾರದಾ ಪೀಠಕ್ಕೆ ಖ್ಯಾತ ನಟಿ ತ್ರಿಷಾ ಕೃಷ್ಣನ್ ಭೇಟಿ; ಫೋಟೋ ವೈರಲ್
Trisha Krishnan

Updated on: Nov 26, 2026 | 4:12 PM

ಚಿಕ್ಕಮಗಳೂರು: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಅವರು ತಮ್ಮ ಬಿಡುವಿಲ್ಲದ ಸಿನಿಮಾ ಕೆಲಸಗಳ ನಡುವೆಯೂ ಆಧ್ಯಾತ್ಮಿಕ ಪ್ರವಾಸ ಕೈಗೊಂಡಿದ್ದಾರೆ. ಕರ್ನಾಟಕದ ಐತಿಹಾಸಿಕ ಮತ್ತು ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿರುವ ನಟಿ, ಅಲ್ಲಿನ ಶಾಂತ ಹಾಗೂ ದೈವಿಕ ಕ್ಷಣಗಳ ಸುಂದರ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

ಸಂಜೆಯ ವೇಳೆ ಶೃಂಗೇರಿ ದೇಗುಲಕ್ಕೆ ಭೇಟಿ ನೀಡಿರುವ ತ್ರಿಷಾ, ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದ ಭವ್ಯವಾದ ರಾಜಗೋಪುರದ ಮುಂಭಾಗದಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ತಿಳಿ ಗುಲಾಬಿ ಬಣ್ಣದ ಸರಳ ಸಲ್ವಾರ್ ಕಮೀಜ್ ಧರಿಸಿ, ದೇವಾಲಯದ ಆವರಣದಲ್ಲಿ ಬರಿಗಾಲಿನಲ್ಲಿ ನಿಂತಿರುವ ತ್ರಿಷಾ ಅವರ ಸಾಂಪ್ರದಾಯಿಕ ಲುಕ್​ನಲ್ಲಿ ಅಭಿಮಾನಿಗಳ ಮನಗೆದ್ದಿದೆ.

Loading...

ಈ ಸುಂದರ ಫೋಟೋವನ್ನು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿರುವ ತ್ರಿಷಾ, ಫೋಟೋದ ಕೆಳಭಾಗದಲ್ಲಿ ‘DIVINE’ (ದೈವಿಕ) ಎಂದು ಸರಳವಾಗಿ ಬರೆದುಕೊಂಡಿದ್ದಾರೆ. ವಿಶೇಷವೆಂದರೆ, ಈ ಸ್ಟೋರಿಗೆ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಅವರ ಸುಮಧುರ ಹಿನ್ನೆಲೆ ಸಂಗೀತವನ್ನು ಜೋಡಿಸಿದ್ದಾರೆ.

ಇದನ್ನೂ ಓದಿ: ಎಂಜಿಆರ್ ಬಯೋಪಿಕ್‌: ಮಾಜಿ ಸಿಎಂ ಜಯಲಲಿತಾ ಪಾತ್ರದಲ್ಲಿ ತ್ರಿಷಾ? ಹೆಚ್ಚಿದೆ ಕುತೂಹಲ

ಸದಾ ಸಿನಿಮಾ ಶೂಟಿಂಗ್ ಮತ್ತು ಪ್ರಚಾರ ಕಾರ್ಯಗಳಲ್ಲಿ ಬ್ಯುಸಿಯಾಗಿರುವ ತ್ರಿಷಾ, ಆಗಾಗ ಇಂತಹ ಆಧ್ಯಾತ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಮೂಲಕ ಮನಸ್ಸಿಗೆ ನೆಮ್ಮದಿ ಕಂಡುಕೊಳ್ಳುತ್ತಾರೆ. ಶೃಂಗೇರಿ ದೇವಾಲಯದ ಪ್ರಶಾಂತ ವಾತಾವರಣ ಮತ್ತು ತ್ರಿಷಾ ಅವರ ಯಾವುದೇ ಆಡಂಬರವಿಲ್ಲದ ಸರಳ ಉಡುಗೆಯನ್ನು ಕಂಡು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us