AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾವುದಕ್ಕೂ ತಲೆಕೆಡಿಸಿಕೊಳ್ಳದಿರುವುದು ನಮ್ಮ ಕೈಯಲ್ಲೇ ಇದೆ’; ತ್ರಿಷಾ

ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ಹೇಳಿಕೆಯ ನಂತರ ನಟಿ ತ್ರಿಷಾ ಕೃಷ್ಣನ್ ಅವರ ಹಳೆಯ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್ ಆಗಿದೆ. ಅಭಿಮಾನಿಗಳು ನಟಿಗೆ ಬೆಂಬಲ ಸೂಚಿಸಿದ್ದು, ಮಹಿಳೆಯರ ಗೌರವದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆಗಳು ಆರಂಭವಾಗಿವೆ. ನಟಿಯ ಶಾಂತ ಹಾಗೂ ಧೈರ್ಯದ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

‘ಯಾವುದಕ್ಕೂ ತಲೆಕೆಡಿಸಿಕೊಳ್ಳದಿರುವುದು ನಮ್ಮ ಕೈಯಲ್ಲೇ ಇದೆ’; ತ್ರಿಷಾ
ಉದಯನಿಧಿ ಹಾಗೂ ಸ್ಟಾಲಿನ್
ರಾಜೇಶ್ ದುಗ್ಗುಮನೆ
|

Updated on: Aug 06, 2026 | 7:04 AM

Share

ಮುಖ್ಯಾಂಶಗಳು

  • ಉದಯನಿಧಿ ವಿವಾದಾತ್ಮಕ ಹೇಳಿಕೆ
  • ತ್ರಿಷಾಗೆ ಹರಿದುಬಂದ ಬೆಂಬಲ
  • ಹಳೆಯ ಪೋಸ್ಟ್​ ವೈರಲ್

ನಟಿ ತ್ರಿಷಾ ಕೃಷ್ಣನ್ ಅವರು (Trisha) ಇತ್ತೀಚೆಗೆ ಫುಟ್​​ಬಾಲ್ ರೀತಿ ಆಗಿದ್ದಾರೆ. ಅವರ ಹೆಸರನ್ನು ಬೇಕಾದರವರು ಬೇಕಾದ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ವಿಜಯ್ ಹೆಸರನ್ನು ಮುಂದಿಟ್ಟುಕೊಂಡು ಅಣಕಿಸುತ್ತಿದ್ದಾರೆ. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಹೇಳಿಕೆ ಬೆನ್ನಲ್ಲೇ ತ್ರಿಷಾ ಅವರ ಹಳೆಯ ಮಾರ್ಮಿಪಕ ಪೋಸ್ಟ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ನೆಟ್ಟಿಗರು ಕಮೆಂಟ್ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ತಂಜಾವೂರಿನ ಪ್ರತಿಭಟನೆಯಲ್ಲಿ ಉದಯನಿಧಿ ಸ್ಟಾಲಿನ್ ಭಾಷಣ ಮಾಡುತ್ತಿದ್ದರು. ಈ ವೇಳೆ ಜನರು ತ್ರಿಷಾ ಹೆಸರು ಕೂಗಿದರು. ಆಗ ಉದಯನಿಧಿ ದ್ವಂದ್ವ ಅರ್ಥದ ಹೇಳಿಕೆ ನೀಡಿದರು. ಈ ಮಾತು ತೀವ್ರ ಆಕ್ರೋಶಕ್ಕೆ ಕಾರಣವಾಯಿತು.

View this post on Instagram

A post shared by Trish (@trishakrishnan)

ತ್ರಿಷಾ ಪೋಸ್ಟ್ ಮತ್ತು ಫ್ಯಾನ್ಸ್ ರಿಯಾಕ್ಷನ್

ತ್ರಿಷಾ ಒಂದು ವಾರದ ಹಿಂದೆ ಫೋಟೋ ಹಂಚಿಕೊಂಡಿದ್ದರು. ‘ಯಾವುದಕ್ಕೂ ತಲೆಕೆಡಿಸಿಕೊಳ್ಳದಿರುವುದು ನಮ್ಮ ಕೈಯಲ್ಲೇ ಇದೆ. ಅದನ್ನೇ ಆಯ್ಕೆ ಮಾಡಿಕೊಳ್ಳಿ’ ಎಂದು ಬರೆದುಕೊಂಡಿದ್ದರು. ಈಗ ಈ ಪೋಸ್ಟ್ ವೈರಲ್ ಆಗುತ್ತಿದೆ. ಸಾವಿರಾರು ಜನರು ನಟಿಯ ಬೆಂಬಲಕ್ಕೆ ನಿಂತಿದ್ದಾರೆ. ‘ಮಹಿಳೆಯರಿಗೆ ಗೌರವ ಸಿಗಬೇಕು’ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಕುಟುಂಬದ ಜೊತೆ ‘ಜನ ನಾಯಗನ್’ ಸಿನಿಮಾ ನೋಡಿ ಎಂಜಾಯ್ ಮಾಡಿದ ತ್ರಿಷಾ ಕೃಷ್ಣನ್

ರಾಜಕೀಯ ವಲಯದಲ್ಲಿ ಕಾವೇರಿದ ಚರ್ಚೆ

ಕಾವೇರಿ ನದಿ ವಿಷಯದಲ್ಲಿ ಮಾತನಾಡುವಾಗ ಉದಯನಿಧಿ ಅವರು ನಾಲಿಗೆ ಹರಿಬಿಟ್ಟಿದ್ದರು. ವಿಜಯ್ ಅವರ ಟಿವಿಕೆ ಪಕ್ಷ ಈ ಹೇಳಿಕೆಯನ್ನು ಖಂಡಿಸಿದೆ. ಅವರ ಪಕ್ಷವು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿದೆ. ಪೊಲೀಸರಿಗೂ ದೂರು ಸಲ್ಲಿಕೆಯಾಗಿದೆ. ಮಹಿಳೆಯರ ಗೌರವಕ್ಕೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿದೆ. ಉದಯನಿಧಿ ಅವರು ಈ ಹೇಳಿಕೆಗೆ ಸಂಬಂಧಿಸಿ ಅರೆಸ್ಟ್ ಕೂಡ ಆದರು. ಅದೇ ದಿನ ಅವರು ಬಿಡುಗಡೆ ಆದರು. ಈ ಘಟನೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಉದಯನಿಧಿ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ. ಜನರು ಸೋಶಿಯಲ್ ಮೀಡಿಯಾದಲ್ಲಿ ಡಿಎಂಕೆ ನಾಯಕನನ್ನು ಟೀಕಿಸುತ್ತಿದ್ದಾರೆ. ತ್ರಿಷಾ ಅವರನ್ನು ‘ಸಾಫ್ಟ್ ಪವರ್’ ಎಂದು ಕರೆದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು