AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕೊಟ್ಟ ಅಲ್ಲು ಅರ್ಜುನ್, ರಾಮ್ ಚರಣ್ ಜೊತೆ ಸಿನಿಮಾ ಮಾಡಲಿರುವ ಸ್ಟಾರ್ ನಿರ್ದೇಶಕ

Allu Arjun: ನಟ ಅಲ್ಲು ಅರ್ಜುನ್ ‘ಪುಷ್ಪ 2’ ಬಳಿಕ ತ್ರಿವಿಕ್ರಮ್ ಜೊತೆಗೆ ಸಿನಿಮಾ ಮಾಡಬೇಕಿತ್ತು. ಆದರೆ ಅವರು ಅಟ್ಲಿ ನಿರ್ದೇಶನದ ಹಾಲಿವುಡ್ ಮಾದರಿ ಸಿನಿಮಾ ಮಾಡಲು ಮುಂದಾದರು. ಇದೀಗ ತ್ರಿವಿಕ್ರಮ್, ಅಲ್ಲು ಅರ್ಜುನ್​ಗಾಗಿ ಮಾಡಿದ್ದ ಕತೆಯನ್ನು ರಾಮ್ ಚರಣ್​ಗಾಗಿ ಸಿನಿಮಾ ಮಾಡುತ್ತಿದ್ದಾರೆ. ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಸಿನಿಮಾ ಶೂಟಿಂಗ್​ನಲ್ಲಿದ್ದು, ಅದರ ಬಳಿಕ ಸಿನಿಮಾ ಶುರುವಾಗಲಿದೆ.

ಕೈ ಕೊಟ್ಟ ಅಲ್ಲು ಅರ್ಜುನ್, ರಾಮ್ ಚರಣ್ ಜೊತೆ ಸಿನಿಮಾ ಮಾಡಲಿರುವ ಸ್ಟಾರ್ ನಿರ್ದೇಶಕ
Ram Charan Allu Arjun
ಮಂಜುನಾಥ ಸಿ.
|

Updated on: May 16, 2025 | 1:20 PM

Share

ಪುಷ್ಪ 2’ (Pushpa 2) ಸಿನಿಮಾದ ಭಾರಿ ಯಶಸ್ಸಿನ ಬಳಿಕ ಅಲ್ಲು ಅರ್ಜುನ್ ಪ್ಯಾನ್ ವರ್ಲ್ಡ್ ಸ್ಟಾರ್ ಆಗಿಬಿಟ್ಟಿದ್ದಾರೆ. ಅವರ ಮುಂದಿನ ಸಿನಿಮಾಗಳು ‘ಪುಷ್ಪ 2’ ಗಿಂತಲೂ ಅದ್ಧೂರಿಯಾಗಿರುವಂತೆ ನೋಡಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಅವರು ನಿರ್ದೇಶಕ ತ್ರಿವಿಕ್ರಮ್ ಅವರ ಸಿನಿಮಾವನ್ನು ಕೈ ಬಿಟ್ಟು, ಅಟ್ಲಿ ನಿರ್ದೇಶನದ ಸಿನಿಮಾನಲ್ಲಿ ನಟಿಸಲು ಮುಂದಾಗಿದ್ದಾರೆ. ತ್ರಿವಿಕ್ರಮ್, ಕೌಟುಂಬಿಕ ಆಕ್ಷನ್ ಕತೆಯನ್ನು ಅಲ್ಲು ಅರ್ಜುನ್​ಗಾಗಿ ತಯಾರು ಮಾಡಿಟ್ಟುಕೊಂಡಿದ್ದರಂತೆ. ಆದರೆ ಅಲ್ಲು ಅರ್ಜುನ್​ಗೆ ಅದು ಹಿಡಿಸಿಲ್ಲ. ಆದರೆ ಇದೀಗ ತ್ರಿವಿಕ್ರಮ್, ರಾಮ್ ಚರಣ್ ಜೊತೆಗೆ ಸಿನಿಮಾ ಮಾಡಲು ಮುಂದಾಗಿದ್ದಾರೆ.

ಅಲ್ಲು ಅರ್ಜುನ್ ಕೈಕೊಟ್ಟ ಬೆನ್ನಲ್ಲೆ ಅಲ್ಲು ಅರ್ಜುನ್​ರ ನೇರ ಪ್ರತಿಸ್ಪರ್ಧಿ ಎನಿಸಿಕೊಂಡಿರುವ ರಾಮ್ ಚರಣ್ ಅವರೊಟ್ಟಿಗೆ ಅದೇ ಕತೆಯನ್ನು ಸಿನಿಮಾ ಮಾಡಲು ತ್ರಿವಿಕ್ರಮ್ ಮುಂದಾಗಿದ್ದಾರೆ. ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು ಈ ಸಿನಿಮಾ ಮುಗಿದ ಕೂಡಲೇ ತ್ರಿವಿಕ್ರಮ್ ಜೊತೆಗಿನ ಸಿನಿಮಾಕ್ಕೆ ಚಾಲನೆ ನೀಡಲಿದ್ದಾರೆ.

ಅಲ್ಲು ಅರ್ಜುನ್​ಗೆ ಬರೋಬ್ಬರಿ ಮೂರು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ತ್ರಿವಿಕ್ರಮ್ ನೀಡಿದ್ದಾರೆ. ‘ಜುಲೈ’, ‘ಸನ್ ಆಫ್ ಸತ್ಯಮೂರ್ತಿ’ ಮತ್ತು ‘ಅಲಾ ವೈಕುಂಟಪುರಂಲೊ’ ಆದರೆ ಈಗ ಪ್ಯಾನ್ ವರ್ಲ್ಡ್ ಸಿನಿಮಾ ಹುಚ್ಚಿಗೆ ಬಿದ್ದಿರುವ ಅಲ್ಲು ಅರ್ಜುನ್, ತ್ರಿವಿಕ್ರಮ್ ಸಿನಿಮಾಕ್ಕೆ ನೋ ಎಂದಿದ್ದಾರೆ. ಇದು ಕೆಲ ಅಲ್ಲು ಅರ್ಜುನ್ ಅಭಿಮಾನಿಗಳಿಗೂ ಸಹ ಬೇಸರ ತಂದಿದೆ. ಆದರೆ ರಾಮ್ ಚರಣ್ ಹಾಗಲ್ಲ, ‘ಆರ್​​ಆರ್​ಆರ್’ ಸಿನಿಮಾ ದೊಡ್ಡ ಹಿಟ್ ಆದ ಬಳಿಕವೂ ಅವರು ಹಳ್ಳಿ ಕತೆಗಳಿಗೆ, ಪ್ರಾದೇಶಿಕ ಕತೆಗಳಿಗೆ ಮಾನ್ಯತೆ ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ಹಳ್ಳಿಯ ಕ್ರಿಕೆಟ್ ಆಟಗಾರನ ಕತೆ ಹೊಂದಿರುವ ‘ಪೆದ್ದಿ’ ಸಿನಿಮಾವನ್ನು ಅವರು ಒಪ್ಪಿ ನಟಿಸುತ್ತಿದ್ದಾರೆ.

ಇದನ್ನೂ ಓದಿ:ಆಮಿರ್ ಖಾನ್ ಭೇಟಿಯಾದ ಅಲ್ಲು ಅರ್ಜುನ್, ಒಟ್ಟಿಗೆ ಸಿನಿಮಾ?

ಅಲ್ಲು ಅರ್ಜುನ್ ಪ್ರಸ್ತುತ ಅಟ್ಲಿ ನಿರ್ದೇಶನದ ಸಿನಿಮಾನಲ್ಲಿ ನಟಿಸಲು ಸಿದ್ಧವಾಗುತ್ತಿದ್ದಾರೆ. ವಿದೇಶಿ ಫಿಟ್​ನೆಸ್ ಕೋಚ್ ಅವರ ನೇತೃತ್ವದಲ್ಲಿ ಸಿನಿಮಾಕ್ಕಾಗಿ ತಯಾರಾಗುತ್ತಿದ್ದಾರೆ. ಇತ್ತೀಚೆಗಷ್ಟೆ ಅಟ್ಲಿ ಮತ್ತು ಅಲ್ಲು ಅರ್ಜುನ್ ಹಾಲಿವುಡ್​ಗೆ ಹೋಗಿ ಅಲ್ಲಿ ಕೆಲವು ಅತ್ಯುತ್ತಮ ವಿಎಫ್​ಎಕ್ಸ್ ಹಾಗೂ ಸೆಟ್ ಪ್ರಾಪರ್ಟಿ ಸ್ಟುಡಿಯೋಗಳೊಟ್ಟಿಗೆ ಒಪ್ಪಂದ ಮಾಡಿಕೊಂಡು ಬಂದಿದ್ದಾರೆ. ಅಟ್ಲಿ ನಿರ್ದೇಶಿಸುತ್ತಿರುವ ಸಿನಿಮಾ ಹಾಲಿವುಡ್​ನ ‘ಗಾರ್ಡಿಯನ್ಸ್ ಆಫ್ ದಿ ಗ್ಯಾಲೆಕ್ಸಿ’ ಮಾದರಿಯ ಸಿನಿಮಾ ಆಗಿದ್ದು, ಯಾವುದೋ ಲೋಕದಲ್ಲಿ ಚಿತ್ರ ವಿಚಿತ್ರ ಜೀವಿಗಳ ನಡುವೆ ನಡೆಯುವ ಕತೆ ಒಳಗೊಂಡಿದೆ. ಸಿನಿಮಾದಲ್ಲಿ ವಿಚಿತ್ರ ಜೀವಿಗಳು, ಅತ್ಯಾಧುನಿಕ ವಾಹನಗಳು, ಆಯುಧಗಳು ಇರಲಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್