AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನಲ್ಲಿ ಬರಲಿದೆ ‘ಹನುಮಾನ್ ಅಂಶ್’ ಸಿನಿಮಾ, ರಿಲೀಸ್ ಯಾವಾಗ?

ನೀಮ್ ಕರೋಲಿ ಬಾಬಾ ಅವರ ಅಸಾಮಾನ್ಯ ಜೀವನ ಪಯಣವನ್ನು ಆಧರಿಸಿದ ಈ ಸಿನಿಮಾವನ್ನು ಡಾ ವಿಶಾಲ್ ಚತುರ್ವೇದಿ ನಿರ್ದೇಶಿಸಿದ್ದಾರೆ. ಈ ಚಲನಚಿತ್ರವನ್ನು ರಾಗಿಣಿ ಎಸ್, ನಮ್ರತಾ ಜಿ. ಸಿಂಗ್, ಅನುಪ್ರಿಯಾ ಎ. ನಾಗರ್ ಮತ್ತು ನಿರ್ದೇಶಕರೇ ನಿರ್ಮಾಣ ಮಾಡಿದ್ದಾರೆ. ಉತ್ತರ ಭಾರತದಲ್ಲಿ ಭರ್ಜರಿ ಗಳಿಕೆ ಮಾಡುತ್ತಿರುವ ಈ ಸಿನಿಮಾ ಅನ್ನು ಇದೀಗ ದಕ್ಷಿಣಕ್ಕೆ ತರಲಾಗುತ್ತಿದೆ. ಸಿನಿಮಾದ ತೆಲುಗು ಆವೃತ್ತಿ ಶೀಘ್ರವೇ ರಿಲೀಸ್ ಆಗಲಿದೆ.

ತೆಲುಗಿನಲ್ಲಿ ಬರಲಿದೆ ‘ಹನುಮಾನ್ ಅಂಶ್’ ಸಿನಿಮಾ, ರಿಲೀಸ್ ಯಾವಾಗ?
Hanuman Ansh Trivkram
ಮಂಜುನಾಥ ಸಿ.
|

Updated on: Sep 12, 2026 | 7:13 PM

Share

ಮುಖ್ಯಾಂಶಗಳು

  • ಹನುಮಾನ್ ಅಂಶ್ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ
  • ಉತ್ತರ ಭಾರತದಲ್ಲಿ ಸಿನಿಮಾದ ಗಳಿಕೆ ಜೋರಾಗಿದೆ.
  • ಇದೇ ಸಿನಿಮಾದ ತೆಲುಗು ಆವೃತ್ತಿ ಶೀಘ್ರವೇ ರಿಲೀಸ್ ಆಗಲಿದೆ.

‘ಹನುಮಾನ್ ಅಂಶ್’ ಭಾರತೀಯ ಬಾಕ್ಸ್ ಆಫೀಸ್​​ನಲ್ಲಿ ಅಚ್ಚರಿಗಳನ್ನು ಸೃಷ್ಟಿಸುತ್ತಿದೆ. ತೀರ ಸಣ್ಣ ಬಜೆಟ್​​ನಲ್ಲಿ ನಿರ್ಮಾಣ ಮಾಡಲಾಗಿರುವ ಈ ಸಿನಿಮಾ ಭಾರಿ ದೊಡ್ಡ ಗಳಿಕೆ ಮಾಡುತ್ತಿದೆ. ಉತ್ತರ ಭಾರತದಲ್ಲಿ ಬಹಳ ಜನಪ್ರಿಯ ಆಗಿರುವ ನೀಲ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಇದೇ ಕಾರಣಕ್ಕೆ ಹಿಂದಿ ಭಾಷಿಕ ಪ್ರದೇಶದಲ್ಲಿ ಸಿನಿಮಾ ದೊಡ್ಡ ಗಳಿಕೆ ಮಾಡುತ್ತಿದೆ. ಆದರೆ ಇದೀಗ ಈ ಸಿನಿಮಾವನ್ನು ದಕ್ಷಿಣಕ್ಕೂ ತರುವ ಪ್ರಯತ್ನ ಮಾಡಲಾಗುತ್ತಿದ್ದು, ಸಿನಿಮಾ ಶೀಘ್ರವೇ ತೆಲುಗು ಭಾಷೆಗೆ ಡಬ್ ಆಗಿ ರಿಲೀಸ್ ಆಗಲಿದೆ.

‘ಹನುಮಾನ್ ಅಂಶ್’ ಸಿನಿಮಾವನ್ನು ತೆಲುಗಿಗೆ ಡಬ್ ಮಾಡಲಾಗಿದ್ದು ಶೀಘ್ರವೇ ಸಿನಿಮಾದ ತೆಲುಗು ಆವೃತ್ತಿಯನ್ನು ಆಂಧ್ರ ಪ್ರದೇಶ ಮತ್ತು ತೆಲಂಗಾಣಗಳಲ್ಲಿ ರಿಲೀಸ್ ಮಾಡಲಾಗುತ್ತಿದೆ. ತೆಲುಗು ಚಿತ್ರರಂಗದ ಜನಪ್ರಿಯ ಸಿನಿಮಾ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಹಾಗೂ ‘ಫಾರ್ಚೂನ್ ಫೋರ್ ಸಿನಿಮಾಸ್’ ಜಂಟಿ ಸಹಯೋಗದೊಂದಿಗೆ ಈ ಸಿನಿಮಾದ ತೆಲುಗು ಆವೃತ್ತಿಯನ್ನು ರಿಲೀಸ್ ಮಾಡಲಾಗುತ್ತಿದೆ. ಸೆಪ್ಟೆಂಬರ್ 18ರಂದು ‘ಹನುಮಾನ್ ಅಂಶ್’ ಸಿನಿಮಾದ ತೆಲುಗು ಆವೃತ್ತಿ ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಆಗಲಿದೆ.

ತ್ರಿವಿಕ್ರಮ್ ಶ್ರೀನಿವಾಸ್ ಜನಪ್ರಿಯ ಸಿನಿಮಾ ನಿರ್ದೇಶಕರಾಗಿದ್ದು, ಅಧ್ಯಾತ್ಮ, ಪೌರಾಣಿಕ ಮತ್ತು ತತ್ವಶಾಸ್ತ್ರದಲ್ಲಿ ಬಹಳ ಆಸಕ್ತಿ ಉಳ್ಳ ವ್ಯಕ್ತಿ ಆಗಿದ್ದಾರೆ. ಅವರಿಗೆ ‘ಹನುಮಾನ್ ಅಂಶ್’ ಸಿನಿಮಾ ಹಾಗೂ ಸಿನಿಮಾನಲ್ಲಿರುವ ಅಧ್ಯಾತ್ಮ ಚಿಂತನೆಗಳು ಬಹುವಾಗಿ ಹಿಡಿಸಿದ್ದು, ಅದೇ ಕಾರಣಕ್ಕೆ ಈ ಸಿನಿಮಾವನ್ನು ತೆಲುಗಿಗೆ ಡಬ್ ಮಾಡಿಸಿ ರಿಲೀಸ್ ಮಾಡಲು ಮುಂದಾಗಿದ್ದಾರೆ. ಅಂದಹಾಗೆ ಖುದ್ದು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡಿರುವ ‘ಆದರ್ಶ ಕುಟುಂಬ 47’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾ ಟೀಸರ್ ಇಂದಷ್ಟೆ ಬಿಡುಗಡೆ ಆಗಿದ್ದು, ಹಾಸ್ಯಭರಿತವಾಗಿದೆ.

ಇದನ್ನೂ ಓದಿ:ತೆಲುಗಿನಲ್ಲಿ ಬರ್ತಿದೆ ಬಾಲಿವುಡ್ ಬ್ಲಾಕ್‌ಬಸ್ಟರ್ ‘ಹನುಮಾನ್ ಅಂಶ್; ಕನ್ನಡದಲ್ಲಿ ಯಾವಾಗ?

ನೀಮ್ ಕರೋಲಿ ಬಾಬಾ ಅವರ ಅಸಾಮಾನ್ಯ ಜೀವನ ಪಯಣವನ್ನು ಆಧರಿಸಿದ ಈ ಸಿನಿಮಾವನ್ನು ಡಾ ವಿಶಾಲ್ ಚತುರ್ವೇದಿ ನಿರ್ದೇಶಿಸಿದ್ದಾರೆ. ಈ ಚಲನಚಿತ್ರವನ್ನು ರಾಗಿಣಿ ಎಸ್, ನಮ್ರತಾ ಜಿ. ಸಿಂಗ್, ಅನುಪ್ರಿಯಾ ಎ. ನಾಗರ್ ಮತ್ತು ನಿರ್ದೇಶಕರೇ ನಿರ್ಮಾಣ ಮಾಡಿದ್ದಾರೆ. ಸಿನಿಮಾನಲ್ಲಿ ಶೋಭಿತ್ ಶ್ರೀವಾಸ್ತವ, ಚಂದನ್ ಆನಂದ್, ಪೂರ್ಣಿಮಾ ತಿವಾರಿ ಮತ್ತು ವಿಹಾನ್ ಶೆಡ್ಗೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 200 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!