AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​​ಟಿಆರ್ ಹೊಸ ಸಿನಿಮಾದ ಬಗ್ಗೆ ಹೊರಬಿತ್ತು ಪ್ರಮುಖ ಅಪ್​​ಡೇಟ್

ತೆಲುಗಿನ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರಾಗಿರುವ ತ್ರಿವಿಕ್ರಮ್ ಶ್ರೀನಿವಾಸ್, ಪ್ರಸ್ತುತ ‘ಆದರ್ಶ ಕುಟುಂಬಂ’ ಹೆಸರಿನ ಹಾಸ್ಯ ಪ್ರಧಾನ ಕೌಟುಂಬಿಕ ಸಿನಿಮಾ ನಿರ್ದೇಶಿಸಿದ್ದು, ಆ ಸಿನಿಮಾ ಶೀಘ್ರವೇ ರಿಲೀಸ್ ಆಗಲಿದೆ. ಸಿನಿಮಾದ ಪ್ರಚಾರ ಆರಂಭವಾಗಿದ್ದು, ಅದರ ಭಾಗವಾಗಿ ನೀಡಿದ ಸಂದರ್ಶನವೊಂದರಲ್ಲಿ ತ್ರಿವಿಕ್ರಮ್ ಅವರು ಜೂ ಎನ್​​ಟಿಆರ್ ಜೊತೆಗೆ ಮಾಡಲಿರುವ ಸಿನಿಮಾದ ಬಗ್ಗೆಯೂ ಮಾತನಾಡಿದ್ದಾರೆ. ಕೆಲ ಪ್ರಮುಖ ಮಾಹಿತಿಗಳನ್ನು ಸಹ ಹಂಚಿಕೊಂಡಿದ್ದಾರೆ.

ಜೂ ಎನ್​​ಟಿಆರ್ ಹೊಸ ಸಿನಿಮಾದ ಬಗ್ಗೆ ಹೊರಬಿತ್ತು ಪ್ರಮುಖ ಅಪ್​​ಡೇಟ್
Trivikram Jr Ntr
ಮಂಜುನಾಥ ಸಿ.
|

Updated on: Sep 29, 2026 | 6:36 PM

Share

ಮುಖ್ಯಾಂಶಗಳು

  • ಜೂ ಎನ್​​ಟಿಆರ್ ಹೊಸ ಸಿನಿಮಾ ಬಗ್ಗೆ ಅಪ್​ಡೇಟ್
  • ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾನಲ್ಲಿ ಜೂ ಎನ್​ಟಿಆರ್
  • ಸಿನಿಮಾ ಬಗ್ಗೆ ಅಪ್​​ ಡೇಟ್ ನೀಡಿದ ತ್ರಿವಿಕ್ರಮ್ ಶ್ರೀನಿವಾಸ್

ತೆಲುಗು ಚಿತ್ರರಂಗದ ಸ್ಟಾರ್ ನಟ ಜೂ ಎನ್​​ಟಿಆರ್ ಪ್ರಸ್ತುತ ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಈ ಸಿನಿಮಾಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಜೂ ಎನ್​​ಟಿಆರ್. ಈ ಸಿನಿಮಾಕ್ಕಾಗಿ ತೂಕ ಕಳೆದುಕೊಂಡಿದ್ದಾರೆ. ಕಠಿಣವಾದ ಡಯಟ್​ ಮಾಡಿದ್ದಾರೆ. ಈ ಸಿನಿಮಾ 2027ಕ್ಕೆ ರಿಲೀಸ್ ಆಗಲಿದೆ. ಇದರ ನಡುವೆ ಜೂ ಎನ್​​ಟಿಆರ್, ತ್ರಿವಿಕ್ರಮ್ ನಿರ್ದೇಶನ ಮಾಡಲಿರುವ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾದ ಅಧಿಕೃತ ಘೋಷಣೆ ಈಗಾಗಲೇ ಆಗಿದೆ. ಇದೀಗ ಆ ಸಿನಿಮಾದ ಬಗ್ಗೆ ಖುದ್ದು ನಿರ್ದೇಶಕ ತ್ರಿವಿಕ್ರಮ್ ಮಾಹಿತಿ ಹಂಚಿಕೊಂಡಿದ್ದಾರೆ.

ತೆಲುಗಿನ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರಾಗಿರುವ ತ್ರಿವಿಕ್ರಮ್ ಶ್ರೀನಿವಾಸ್, ಪ್ರಸ್ತುತ ‘ಆದರ್ಶ ಕುಟುಂಬಂ’ ಹೆಸರಿನ ಹಾಸ್ಯ ಪ್ರಧಾನ ಕೌಟುಂಬಿಕ ಸಿನಿಮಾ ನಿರ್ದೇಶಿಸಿದ್ದು, ಆ ಸಿನಿಮಾ ಶೀಘ್ರವೇ ರಿಲೀಸ್ ಆಗಲಿದೆ. ಸಿನಿಮಾದ ಪ್ರಚಾರ ಆರಂಭವಾಗಿದ್ದು, ಅದರ ಭಾಗವಾಗಿ ನೀಡಿದ ಸಂದರ್ಶನವೊಂದರಲ್ಲಿ ತ್ರಿವಿಕ್ರಮ್ ಅವರು ಜೂ ಎನ್​​ಟಿಆರ್ ಜೊತೆಗೆ ಮಾಡಲಿರುವ ಸಿನಿಮಾದ ಬಗ್ಗೆಯೂ ಮಾತನಾಡಿದ್ದಾರೆ. ಕೆಲ ಪ್ರಮುಖ ಮಾಹಿತಿಗಳನ್ನು ಸಹ ಹಂಚಿಕೊಂಡಿದ್ದಾರೆ.

ತೆಲುಗಿನ ಜನಪ್ರಿಯ ನಿರೂಪಕಿ ಸುಮಾ ಅವರಿಗೆ ನೀಡಿದ ಸಂದರ್ಶನದಲ್ಲಿ ಜೂ ಎನ್​​ಟಿಆರ್ ಜೊತೆಗಿನ ಸಿನಿಮಾ ಬಗ್ಗೆ ಮಾತನಾಡಿರುವ ತ್ರಿವಿಕ್ರಮ್ ಶ್ರೀನಿವಾಸ್, ‘ಆ ಸಿನಿಮಾದ ಚಿತ್ರಕತೆ ಸಂಪೂರ್ಣವಾಗಿದೆ. ಸಿನಿಮಾದ ಹೆಸರು ಏನಾಗಿರಲಿದೆ ಎಂಬುದನ್ನು ನಾವು ಇನ್ನೂ ನಿರ್ಧರಿಸಿಲ್ಲ. ‘ಗಾಡ್ ಆಫ್ ವಾರ್’ ಎಂಬುದು ಸಿನಿಮಾದ ಹೆಸರಲ್ಲ, ಅದು ಟ್ಯಾಗ್ ಲೈನ್ ಅಷ್ಟೆ. ಸಿನಿಮಾದ ಚಿತ್ರೀಕರಣವನ್ನು ನಾವು 2027ರಲ್ಲಿ ಪ್ರಾರಂಭ ಮಾಡಲಿದ್ದೇವೆ’ ಎಂದಿದ್ದಾರೆ.

ಇದನ್ನೂ ಓದಿ:ತೆಲುಗು ಚಿತ್ರರಂಗದಲ್ಲಿ ಇತಿಹಾಸ ಬರೆದ ಸಮಂತಾ, ಹಲವು ದಾಖಲೆ ದೂಳಿಪಟ

ತ್ರಿವಿಕ್ರಮ್ ಶ್ರೀನಿವಾಸ್ ಅವರು ತಮಿಳರ ಆರಾಧ್ಯ ದೈವ ಮುರುಗನ್ ಅಥವಾ ಕಾರ್ತಿಕೇಯ ಸ್ವಾಮಿಯ ಕುರಿತಾದ ಕತೆಯನ್ನು ಜೂ ಎನ್​​ಟಿಆರ್ ಅವರಿಗಾಗಿ ಸಿನಿಮಾ ಮಾಡಲು ಮುಂದಾಗಿದ್ದಾರೆ. ಮುರುಗನ್ ಯುದ್ಧಗಳ ದೇವತೆಯಾಗಿಯೂ ಖ್ಯಾತರು. ಇದೀಗ ಬಿಡುಗಡೆ ಆಗಿರುವ ಪೋಸ್ಟರ್​​ನಲ್ಲಿ ಮುರುಗನ್ ದೇವರ ಆಯುಧದ ಜೊತೆಗೆ ಡಿಎನ್​​ಎ ಚಿತ್ರವೂ ಇದ್ದು, ಈ ಸಿನಿಮಾದ ಕತೆಯು ಪೌರಾಣಿಕ ಕತೆಯ ಜೊತೆಗೆ ಆಧುನಿಕತೆಯನ್ನು ಬೆಸೆದುಕೊಂಡಿರುವ ಬಗ್ಗೆ ಸುಳಿವು ನೀಡುತ್ತಿದೆ.

ಈ ಹಿಂದೆ ತ್ರಿವಿಕ್ರಮ್ ಶ್ರೀನಿವಾಸ್ ಅವರು ಹಲವು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ್ದಾರೆ. ‘ಅತಡು’, ‘ಜಲ್ಸಾ’, ‘ಅತ್ತಾರಿಂಟಿಕಿ ದಾರೇದಿ’, ‘ಖಲೇಜ’, ‘ಜುಲಾಯಿ’, ‘ಸನ್ ಆಫ್ ಸತ್ಯಮೂರ್ತಿ’ ಇನ್ನೂ ಕೆಲವು ಸಿನಿಮಾಗಳನ್ನು ನೀಡಿದ್ದಾರೆ. ಜೂ ಎನ್​​ಟಿಆರ್ ಜೊತೆಗೆ ‘ಅರವಿಂದ ಸಮೇತ ವೀರ ರಾಘವ’ ಸಿನಿಮಾ ಮಾಡಿದ್ದರು. ಆ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಇದೀಗ ಎರಡನೇ ಬಾರಿ ಜೂ ಎನ್​​ಟಿಆರ್ ಜೊತೆಗೆ ತ್ರಿವಿಕ್ರಮ್ ಶ್ರೀನಿವಾಸ್ ಕೈಜೋಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ