AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್ ಸಿನಿಮಾ ಸೆಟ್​ನಲ್ಲಿ ತ್ರಿವಿಕ್ರಮ್, ಅಭಿಮಾನಿಗಳಿಗೆ ಆತಂಕ

Pawan Kalyan-Trivikram Srinivas: ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಮುಂಚೆ ಪ್ರಾರಂಭಿಸಿದ್ದ ‘ಹರಿ ಹರ ವೀರ ಮಲ್ಲು’ ಸಿನಿಮಾ ಅನ್ನು ಪೂರ್ಣಗೊಳಿಸಲು ಪವನ್ ಕಲ್ಯಾಣ್ ನಿರ್ಧರಿಸಿದ್ದಾರೆ. ಸಿನಿಮಾದ ಚಿತ್ರೀಕರಣವನ್ನು ಪವನ್ ಪ್ರಾರಂಭಿಸಿದ್ದಾರೆ. ಆದರೆ ಸಿನಿಮಾ ಸೆಟ್​ನಲ್ಲಿ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಕಾಣಿಸಿಕೊಂಡಿದ್ದು ಪವನ್ ಅಭಿಮಾನಿಗಳಲ್ಲಿ ಆತಂಕ ತಂದಿದೆ.

ಪವನ್ ಕಲ್ಯಾಣ್ ಸಿನಿಮಾ ಸೆಟ್​ನಲ್ಲಿ ತ್ರಿವಿಕ್ರಮ್, ಅಭಿಮಾನಿಗಳಿಗೆ ಆತಂಕ
Pawan Kalyan Trivikram Srinivas
ಮಂಜುನಾಥ ಸಿ.
|

Updated on: May 06, 2025 | 1:25 PM

Share

ಆಂಧ್ರ ಪ್ರದೇಶ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ (Pawan Kalyan), ‘ಹರಿ ಹರ ವೀರ ಮಲ್ಲು’ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಆರು ದಿನಗಳ ಶೆಡ್ಯೂಲ್ ಇದಾಗಿದೆ. ಆಂಧ್ರ ವಿಧಾನಸಭೆ ಚುನಾವಣೆ ಘೋಷಣೆಗೆ ಮುಂಚೆ ಆರಂಭಿಸಲಾಗಿದ್ದ ಸಿನಿಮಾ ಚಿತ್ರೀಕರಣ ಇನ್ನೂ ಮುಗಿದಿಲ್ಲ, ಹಲವಾರು ಅಡೆ-ತಡೆಗಳ ಬಳಿಕ ಈಗ ಚಿತ್ರೀಕರಣ ಪೂರ್ಣಗೊಳಿಸುವ ನಿರ್ಧಾರ ಮಾಡಲಾಗಿದೆ. ಸಿನಿಮಾ ಚಿತ್ರೀಕರಣ ಪ್ರಾರಂಭ ಆಗಿದೆಯಾದರೂ ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಹೊಸ ಆತಂಕ ಶುರುವಾಗಿದೆ.

‘ಹರಿ ಹರ ವೀರ ಮಲ್ಲು’ ಸಿನಿಮಾ ಸೆಟ್​ನಲ್ಲಿ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಕಾಣಿಸಿಕೊಂಡಿದ್ದಾರೆ. ಇದು ಪವನ್ ಅಭಿಮಾನಿಗಳ ಆತಂಕ್ಕೆ ಕಾರಣವಾಗಿದೆ. ‘ಹರಿ ಹರ ವೀರ ಮಲ್ಲು’ ಸಿನಿಮಾಕ್ಕೆ ಈಗಾಗಲೇ ಇಬ್ಬರು ನಿರ್ದೇಶಕರಿದ್ದಾರೆ. ಕೃಷ್ಣ ಜಗರಲಮುಡಿ ಅಲಿಯಾಸ್ ಕೃಷ್ ಮತ್ತು ಜ್ಯೋತಿ ಕೃಷ್ಣ. ಈ ಇಬ್ಬರೂ ‘ಹರಿ ಹರ ವೀರ ಮಲ್ಲು’ ಸಿನಿಮಾ ನಿರ್ದೇಶಿಸಿದ್ದಾರೆ. ಈಗ ತ್ರಿವಿಕ್ರಮ್ ಶ್ರೀನಿವಾಸ್ ಸಹ ಈ ಸಿನಿಮಾಕ್ಕೆ ಕೈ ಹಾಕಿದ್ದಾರೆ ಎನ್ನಲಾಗುತ್ತಿದೆ. ಮೂರು ನಿರ್ದೇಶಕರು ಸೇರಿ ಸಿನಿಮಾ ಹಾಳು ಮಾಡುತ್ತಾರೇನೋ ಎಂಬ ಅನುಮಾನ ಅಭಿಮಾನಿಗಳದ್ದು.

ಇದನ್ನೂ ಓದಿ:ಹತ್ತಿರ ಕರೆದು ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ

ಮತ್ತೊಂದು ಭಯವೆಂದರೆ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡದೆ ಆದರೆ ಪವನ್​ ಸಿನಿಮಾಕ್ಕೆ ತೆರೆ ಮರೆಯಲ್ಲಿ ಕೆಲಸ ಮಾಡಿದ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಗಮನ ಸೆಳೆಯಲು ವಿಫಲವಾಗಿವೆ. ‘ಭಿಮ್ಲಾ ನಾಯಕ್’, ಜಯಂತ್ ಸಿ ಪರಾಂಜೆ ನಿರ್ದೇಶನ ಮಾಡಿದ್ದ ‘ತೀನ್ ಮಾರ್’ ಸಿನಿಮಾ ಇನ್ನೂ ಕೆಲ ಸಿನಿಮಾಗಳಿಗೆ ತ್ರಿವಿಕ್ರಮ್ ಸಂಭಾಷಣೆಗಾರ, ಕತೆಗಾರರಾಗಿ ಕೆಲಸ ಮಾಡಿದ್ದರು. ಆದರೆ ಆ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಪ್ರದರ್ಶನ ಕಂಡಿಲ್ಲ. ಇದು ಸಹ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ‘ವಕೀಲ್ ಸಾಬ್’ ಸಿನಿಮಾಕ್ಕೂ ತ್ರಿವಿಕ್ರಮ್ ಸಂಭಾಷಣೆ ಬರೆದಿದ್ದರು ಆ ಸಿನಿಮಾ ಹಿಟ್ ಆಗಿತ್ತು.

ತ್ರಿವಿಕ್ರಮ್ ಶ್ರೀನಿವಾಸ್ ಮತ್ತು ಪವನ್ ಕಲ್ಯಾಣ್ ಬಲು ಆಪ್ತ ಮಿತ್ರರು. ಪವನ್ ಕಲ್ಯಾಣ್​ ರಾಜಕೀಯ ಪ್ರವೇಶಿಸಿದ ಆರಂಭದಲ್ಲಿ ತ್ರಿವಿಕ್ರಮ್ ಶ್ರೀನಿವಾಸ್ ಸಾಕಷ್ಟು ಸಲಹೆಗಳನ್ನು ನೀಡುತ್ತಿದ್ದರಂತೆ. ಅವರಿಗೆ ಭಾಷಣದ ಪಾಯಿಂಟರ್ಸ್​ಗಳನ್ನು ಸಹ ಹಾಕಿಕೊಡುತ್ತಿದ್ದರಂತೆ. ಈಗಲೂ ಸಹ ಪವನ್ ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಬಲು ಆಪ್ತ ಮಿತ್ರರು. ಪವನ್ ಅತಿಯಾಗಿ ನಂಬಿ ಸಲಹೆ ಪಡೆಯುವ ಮಿತ್ರರಲ್ಲಿ ತ್ರಿವಿಕ್ರಮ್ ಶ್ರೀನಿವಾಸ್ ಪ್ರಮುಖರು. ಪವನ್​ಗಾಗಿ ತ್ರಿವಿಕ್ರಮ್ ‘ಜಲ್ಸಾ’, ‘ಅತ್ತಾರಿಂಟಿಕಿ ದಾರೇದಿ’ ಮತ್ತು ‘ಅಜ್ಞಾತನವಾಸಿ’ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ‘ಜಲ್ಸಾ’, ‘ಅತ್ತಾರಿಂಟಿಕಿ ದಾರೇದಿ’ ಸೂಪರ್ ಹಿಟ್ ಆದರೆ ‘ಅಜ್ಞಾತವಾಸಿ’ ಅಟ್ಟರ್ ಫ್ಲಾಪ್ ಆಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?