AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಇಲ್ಲದೆ ಕಷ್ಟದಲ್ಲಿರೋ ತ್ರಿವಿಕ್ರಂಗೆ ದೊಡ್ಡ ಸಲಹೆ ಕೊಟ್ಟ ಪವನ್ ಕಲ್ಯಾಣ್

ತ್ರಿವಿಕ್ರಂ ಅವರ ಇತ್ತೀಚಿನ ಚಿತ್ರಗಳ ವೈಫಲ್ಯದ ನಂತರ, ಅವರಿಗೆ ಸ್ಟಾರ್ ನಟರ ಕಾಲ್ ಶೀಟ್ ಸಿಗುತ್ತಿರಲಿಲ್ಲ. ಪವನ್ ಕಲ್ಯಾಣ್ ಅವರ ಸಲಹೆಯ ಮೇರೆಗೆ, ರಾಮ್ ಚರಣ್ ಅವರು ತ್ರಿವಿಕ್ರಂ ಜೊತೆ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಸಿತಾರಾ ಎಂಟರ್‌ಟೈನ್‌ಮೆಂಟ್ ಈ ಚಿತ್ರವನ್ನು ನಿರ್ಮಿಸುವ ಸಾಧ್ಯತೆಯಿದೆ.

ಸಿನಿಮಾ ಇಲ್ಲದೆ ಕಷ್ಟದಲ್ಲಿರೋ ತ್ರಿವಿಕ್ರಂಗೆ ದೊಡ್ಡ ಸಲಹೆ ಕೊಟ್ಟ ಪವನ್ ಕಲ್ಯಾಣ್
ಪವನ್-ತ್ರಿವಿಕ್ರಂ
ರಾಜೇಶ್ ದುಗ್ಗುಮನೆ
|

Updated on: Jun 10, 2025 | 7:30 AM

Share

ಒಂದು ಕಾಲದಲ್ಲಿ ಬೇಡಿಕೆ ನಿರ್ದೇಶಕ ಎನಿಸಿಕೊಂಡಿದ್ದ ತ್ರಿವಿಕ್ರಂ ಶ್ರೀನಿವಾಸ್(Trivikram Srinivas) ಅವರಿಗೆ ಇತ್ತೀಚೆಗೆ ಬೇಡಿಕೆ ಕಡಿಮೆ ಆಗಿದೆ. ಬ್ಯಾಕ್ ಟು ಬ್ಯಾಕ್ ಫ್ಲಾಪ್ ಕೊಟ್ಟಿದ್ದರಿಂದ ಸ್ಟಾರ್ ಹೀರೋಗಳ ಕಾಲ್​​ಶೀಟ್ ಸಿಗದಂತೆ ಆಗಿದೆ. ತ್ರಿವಿಕ್ರಂ ಅವರು ಈ ಮೊದಲು ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಅಲ್ಲು ಅರ್ಜುನ್ ಅವರು ಅಟ್ಲೀ ಜೊತೆ ಕೈ ಜೋಡಿಸಿದರು. ಆ ಬಳಿಕ ವೆಂಕಟೇಶ್ ಜೊತೆ ಅವರು ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ಹರಡಿತು. ಈಗ ಅವರು ರಾಮ್ ಚರಣ್ ಜೊತೆ ಕೈ ಜೋಡಿಸುತ್ತಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಆಗಿದ್ದು ಪವನ್ ಕಲ್ಯಾಣ್ ಅವರ ಸಲಹೆ.

ತ್ರಿವಿಕ್ರಂ ಹಾಗೂ ಪವನ್ ಕಲ್ಯಾಣ್ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇವರು ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ತ್ರಿವಿಕ್ರಂಗೆ ರಾಮ್ ಚರಣ್ ಜೊತೆ ಸಿನಿಮಾ ಮಾಡುವಂತೆ ಸಲಹೆ ಕೊಟ್ಟಿದ್ದು ಪವನ್ ಕಲ್ಯಾಣ್ ಅವರೇ ಎಂದು ತಿಳಿದು ಬಂದಿದೆ. ಈ ಕಾರಣಕ್ಕೆ ಏಕಾಏಕಿ ಇವರ ಕೊಲಾಬ್ಯರೇಷನ್ ವಿಚಾರ ಮುನ್ನೆಲೆಗೆ ಬಂದಿದೆ. ಕಷ್ಟದಲ್ಲಿರೋ ತ್ರಿವಿಕ್ರಂಗೆ ಪವನ್ ಕಲ್ಯಾಣ್ ಸಲಹೆ ಸಹಾಯಕ್ಕೆ ಬಂದಿದೆ.

ರಾಮ್ ಚರಣ್ ಅವರು ಸದ್ಯ ‘ಪೆದ್ದಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆ ಬಳಿಕ ಅವರು ಸುಕುಮಾರ್ ಜೊತೆ ಸಿನಿಮಾ ಮಾಡಬೇಕಿದೆ. ಆದರೆ, ಈ ಚಿತ್ರದ ಸ್ಕ್ರಿಪ್ಟ್​ ಕೆಲಸಗಳು ನಡೆಯುತ್ತಿವೆ. ಇದಕ್ಕೆ ಇನ್ನೂ ಸಾಕಷ್ಟು ಸಮಯ ಬೇಕಿದೆ. ಅಲ್ಲಿವರೆಗೆ ರಾಮ್ ಚರಣ್ ಅವರು ತ್ರಿವಿಕ್ರಂ ಜೊತೆ ಸೇರಿ ಸಿನಿಮಾ ಕೆಲಸ ಪೂರ್ಣಗೊಳಿಸಲಿದ್ದಾರೆ.

ಇದನ್ನೂ ಓದಿ
Image
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
Image
ದೀಪಿಕಾಳಿಂದ ದೂರವಾದ ಬಗ್ಗೆ ನನಗೆ ಬೇಸರ ಇಲ್ಲ; ಮಾಜಿ ಬಾಯ್​ಫ್ರೆಂಡ್ ಹೇಳಿಕೆ
Image
ಅಣ್ಣಾವ್ರ ಚಿತ್ರವನ್ನು ರಿಮೇಕ್ ಮಾಡಿದ್ದ ಅಮಿತಾಭ್
Image
ಭಾನುವಾರವೇ ಅತೀ ಕಡಿಮೆ ಗಳಿಕೆ ಮಾಡಿದ ‘ಥಗ್ ಲೈಫ್’; ಕನ್ನಡಿಗರ ತಂಟೆಗೆ ಬಂದವರ

ಇದನ್ನೂ ಓದಿ: ಅಲ್ಲು ಅರ್ಜುನ್-ಅಟ್ಲಿ ಚಿತ್ರಕ್ಕೆ ದೀಪಿಕಾ ಎಂಟ್ರಿ ಅಧಿಕೃತ; ಪ್ರೋಮೋ ರಿಲೀಸ್

‘ಸಿತಾರಾ ಎಂಟರ್​ಟೇನ್​ಮೆಂಟ್’ ಸಂಸ್ಥೆ ತ್ರಿವಿಕ್ರಂ ಹಾಗೂ ರಾಮ್ ಚರಣ್ ಚಿತ್ರವನ್ನು ನಿರ್ಮಾಣ ಮಾಡಲು ಆಸಕ್ತಿ ತೋರಿಸಿದೆ. ಒಂದೊಮ್ಮೆ ಅವರು ನಿರ್ಮಾಣಕ್ಕೆ ಮುಂದೆ ಬಂದರೆ ಶೀಘ್ರವೇ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ.  ಈ ವಿಚಾರ ಸದ್ಯ ಚರ್ಚೆಯ ಹಂತದಲ್ಲಿ ಇದೆ. ಎಲ್ಲವೂ ಓಕೆ ಆದರೆ ತ್ರಿವಿಕ್ರಂಗೆ ಮತ್ತೆ ಸ್ಟಾರ್ ಹೀರೋನ ಕಾಲ್​ಶೀಟ್ ಸಿಕ್ಕಂತೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು