ಎರಡೇ ವಾರದಲ್ಲಿ ತುಕಾಲಿ ಸಂತೋಷ್​ ಹೊಸ ಕಾರು ಅಪಘಾತ; ಆಟೋ ಜಖಂ

ಹಾಸ್ಯನಟ, ಬಿಗ್​ ಬಾಸ್​ ಮಾಜಿ ಸ್ಪರ್ಧಿ ತುಕಾಲಿ ಸಂತೋಷ್​ ಅವರ ಕಾರು ಅಪಘಾತ ಆಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಸಮೀಪ ಈ ಘಟನೆ ನಡೆದಿದ್ದು, ಫೋಟೋಗಳು ಲಭ್ಯವಾಗಿವೆ. ತುಕಾಲಿ ಸಂತೋಷ್​ ಅವರ ಕಾರಿಗೆ ಆಟೋ ಡಿಕ್ಕಿ ಹೊಡಿದಿದೆ. ಗಾಯಗೊಂಡಿರುವ ಆಟೋ ಚಾಲಕನಿಗೆ ಕುಣಿಗಲ್​ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡೇ ವಾರದಲ್ಲಿ ತುಕಾಲಿ ಸಂತೋಷ್​ ಹೊಸ ಕಾರು ಅಪಘಾತ; ಆಟೋ ಜಖಂ
ತುಕಾಲಿ ಸಂತೋಷ್​ ಹೊಸ ಕಾರಿಗೆ ಅಪಘಾತ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಮದನ್​ ಕುಮಾರ್​

Updated on:Mar 13, 2024 | 10:17 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ತುಕಾಲಿ ಸಂತೋಷ್ (Tukali Santhosh) ಅವರು ಕೆಲವೇ ದಿನಗಳ ಹಿಂದೆ ಹೊಸ ಕಾರು ಖರೀದಿ ಮಾಡಿದ್ದರು. ಹೊಸ ಕಾರು ಮನೆಗೆ ಬಂದು 2 ವಾರ ಕಳೆಯುವುದರೊಳಗೆ ಅಪಘಾತ (Tukali Santhosh Car Accident) ಸಂಭವಿಸಿದೆ. ತುಮಕೂರಿನಲ್ಲಿ ತುಕಾಲಿ ಸಂತೋಷ್​ ಅವರ ಕಾರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ. ಇದರಿಂದ ಕಿಯಾ ಕಾರು ಜಖಂ ಆಗಿದೆ. ಆಟೋ ಕೂಡ ಭಾಗಶಃ ಜಖಂ ಆಗಿದೆ. ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದೇ ಸಮಾಧಾನದ ಸಂಗತಿ. ತುಕಾಲಿ ಸಂತೋಷ್​ ಅವರ ಕಾರು (Tukali Santhosh Car) ಅಪಘಾತದ ಫೋಟೋಗಳು ಲಭ್ಯವಾಗಿವೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ತುಕಾಲಿ ಸಂತೋಷ್​ ಅವರು ಹೋಗುತ್ತಿದ್ದರು. ಅದೇ ವೇಳೆ ಕುಣಿಗಲ್​ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು. ತುಕಾಲಿ ಸಂತೋಷ್​ ಅವರ ಕಾರಿನ ಬಲಗಡೆಗೆ ಆಟೋ ಡಿಕ್ಕಿ ಹೊಡೆದಿದೆ. ಆಟೋ ಚಾಲಕನನ್ನು ಜಗದೀಶ್​ ಎಂದು ಗುರುತಿಸಲಾಗಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಆಟೋ ಚಾಲಕ ಜಗದೀಶ್​ ಮದ್ಯ ಸೇವಿಸಿದ್ದ ಎನ್ನಲಾಗಿದೆ. ಗಾಯಗೊಂಡಿರುವ ಜಗದೀಶ್​ಗೆ ಕುಣಿಗಲ್​ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರವನ್ನು ನಿರೀಕ್ಷಿಸಲಾಗಿದೆ. ಅಪಘಾತದ ಬಗ್ಗೆ ತುಕಾಲಿ ಸಂತೋಷ್​ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಕಾರು ಅಪಘಾತದ ಸುದ್ದಿಯಿಂದ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ.

ಇದನ್ನೂ ಓದಿ: ‘ಕಂಡ ಕನಸು ನನಸಾಗಿದೆ’: ಹೊಸ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡ ತುಕಾಲಿ ಸಂತೋಷ್

ಹಾಸ್ಯ ನಟನಾಗಿ ತುಕಾಲಿ ಸಂತೋಷ್ ಅವರು ಗುರುತಿಸಿಕೊಂಡಿದ್ದಾರೆ. ‘ಬಿಗ್​ ಬಾಸ್ ಕನ್ನಡ ಸೀಸನ್​ 10’ ಮಾತ್ರವಲ್ಲದೇ ಇನ್ನೂ ಹಲವು ರಿಯಾಲಿಟಿ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಬಿಗ್​ ಬಾಸ್​ನಿಂದ ಸಿಕ್ಕ ಸಂಭಾವನೆಯಲ್ಲಿ ಕಿಯಾ ಕಾರು ಖರೀದಿ ಮಾಡಿದ್ದರು. ಪತ್ನಿ ಜೊತೆ ಶೋ ರೂಮ್​ಗೆ ತೆರಳಿ ಕಾರು ಖರೀದಿಸಿ ತುಕಾಲಿ ಸಂತೋಷ್ ಅವರು ಖುಷಿಪಟ್ಟಿದ್ದರು. ಕೆಲವೇ ದಿನಗಳ ಹಿಂದೆ ಅವರ ಹೊಸ ಕಾರಿನ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:48 pm, Wed, 13 March 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ