‘ನನಗೆ ಮುಸ್ಲಿಮರೇ ಮೊದಲು’: ಚರ್ಚೆ ಆಯ್ತು ತುಳು ಹಾಸ್ಯನಟ ಅರವಿಂದ್ ಬೋಳಾರ್ ಹೇಳಿಕೆ

ತುಳು ಚಿತ್ರರಂಗದ ಖ್ಯಾತ ಹಾಸ್ಯ ನಟ ಅರವಿಂದ್ ಬೋಳಾರ್ ನೀಡಿದ 'ನನಗೆ ಮುಸ್ಲಿಮರೇ ಮೊದಲು' ಎಂಬ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ವಿಚಾರ ಸಾರ್ವಜನಿಕ ವಲಯದಲ್ಲಿ ತೀವ್ರ ಪರ-ವಿರೋಧದ ಚರ್ಚೆಗೆ ದಾರಿ ಮಾಡಿಕೊಟ್ಟಿದ್ದು, ಅಭಿಮಾನಿಗಳು ಹಾಗೂ ಸೋಷಿಯಲ್ ಮೀಡಿಯಾ ಬಳಕೆದಾರರ ನಡುವೆ ಭಿನ್ನಾಭಿಪ್ರಾಯ ಮೂಡಿಸಿದೆ.

‘ನನಗೆ ಮುಸ್ಲಿಮರೇ ಮೊದಲು’: ಚರ್ಚೆ ಆಯ್ತು ತುಳು ಹಾಸ್ಯನಟ ಅರವಿಂದ್ ಬೋಳಾರ್ ಹೇಳಿಕೆ
ಅರವಿಂದ್ ಬೋಳಾರ್
Edited By:

Updated on: Sep 15, 2026 | 3:19 PM

ಮುಖ್ಯಾಂಶಗಳು

  • ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಬೋಳಾರ್ ವೀಡಿಯೋ
  • ಸರ್ವ ಧರ್ಮದ ಕೃತಜ್ಞತೆ ಕೊರತೆ ಎಂದ ನೆಟ್ಟಿಗರು
  • ಸೌಹಾರ್ದತೆಯ ಭಾಷಣವೆಂದು ಬೆಂಬಲಿಸಿದ ಅಭಿಮಾನಿಗಳು

ಮಂಗಳೂರು: ತುಳು ನಾಟಕ ಹಾಗೂ ಚಿತ್ರರಂಗದ ಜನಪ್ರಿಯ ಹಾಸ್ಯ ಕಲಾವಿದ ಅರವಿಂದ್ ಬೋಳಾರ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ನೀಡಿದದ ಹೇಳಿಕೆಯ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಈ ವಿಷಯ ತೀವ್ರ ಚರ್ಚೆ ಹಾಗೂ ಪರ-ವಿರೋಧದ ಅಭಿಪ್ರಾಯಗಳಿಗೆ ಕಾರಣವಾಗಿದೆ.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅರವಿಂದ್ ಬೋಳಾರ್, ‘ನನ್ನ ಸಿನಿಮಾಗಳಲ್ಲಿ ಹಲವು ಬಾರಿ ಮುಸ್ಲಿಮರ ಪಾತ್ರಗಳನ್ನು ಮಾಡಿಸಿದ್ದಾರೆ. ನನಗೆ ಮುಸ್ಲಿಮರೇ ಮೊದಲು. ನನ್ನನ್ನು ಹೆಚ್ಚು ಇಷ್ಟಪಟ್ಟಿದ್ದೇ ಮುಸ್ಲಿಮರು. ನಾನು ಯಾವುದೇ ವೇದಿಕೆಯಲ್ಲಿ ಕೇಳಿದರೂ ಅದನ್ನೇ ಹೇಳುತ್ತೇನೆ’ ಎಂದು ಹೇಳಿರುವುದು ವೀಡಿಯೋದಲ್ಲಿ ದಾಖಲಾಗಿದೆ.

ಬೋಳಾರ್ ಅವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ’ಒಬ್ಬ ಕಲಾವಿದ ಬೆಳೆಯಲು ಮತ್ತು ಈ ಮಟ್ಟಕ್ಕೆ ತಲುಪಲು ಸರ್ವ ಧರ್ಮದ ಅಭಿಮಾನಿಗಳ ಕೊಡುಗೆ ಹಾಗೂ ಪ್ರೀತಿ ಕಾರಣವಾಗಿರುತ್ತದೆ. ಹೀಗಿರುವಾಗ ನಿರ್ದಿಷ್ಟ ಒಂದು ಸಮುದಾಯವನ್ನು ಮಾತ್ರ ಉಲ್ಲೇಖಿಸಿ ‘ಅವರೇ ಮೊದಲು’ ಎಂದು ಹೇಳುವುದು ಸರಿಯಲ್ಲ’ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಕೆಲವರು ನಟ ಅರವಿಂದ್ ಬೋಳಾರ್ ಅವರಿಗೆ ನೇರವಾಗಿ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ, ಬೋಳಾರ್ ಅವರ ಬೆಂಬಲಕ್ಕೂ ಅನೇಕ ಅಭಿಮಾನಿಗಳು ಬಂದಿದ್ದಾರೆ. ‘ಇದು ಕೇವಲ ಸೌಹಾರ್ದತೆಯ ಉದ್ದೇಶದಿಂದ ಆಡಿದ ಮಾತಷ್ಟೇ. ತಮಗೆ ಪ್ರೀತಿ ನೀಡಿದ ಅಭಿಮಾನಿಗಳನ್ನು ಸ್ಮರಿಸುವ ನಿಟ್ಟಿನಲ್ಲಿ ಅವರು ಮಾತನಾಡಿದ್ದಾರೆಯೇ ವಿನಃ ಯಾವುದೇ ಧರ್ಮವನ್ನು ಕೀಳಾಗಿ ಕಾಣುವ ಉದ್ದೇಶ ಅವರಿಗಿಲ್ಲ’ ಎಂದು ಅವರ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.

ಇದನ್ನೂ ಓದಿ: ಅರವಿಂದ್ ಬೋಳಾರ್​​ಗೆ ಚಮಕ್ ಕೊಟ್ಟ ಸಂಗೀತಾ

ಪ್ರಸ್ತುತ ಕರಾವಳಿ ಭಾಗದಲ್ಲಿ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವಾಗಿ ವೈರಲ್ ವೀಡಿಯೋ ಸುತ್ತಲೂ ಪರ-ವಿರೋಧದ ಚರ್ಚೆಗಳು ಕಾವು ಪಡೆದುಕೊಂಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us