Tunisha Sharma: ಧಾರಾವಾಹಿಯ ಶೂಟಿಂಗ್​ ಸೆಟ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಕಿರುತೆರೆ ನಟಿ

ಟಿವಿ ಧಾರಾವಾಹಿಯೊಂದರ ಸೆಟ್​ನಲ್ಲಿ ಕಿರುತೆರೆ ನಟಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

Tunisha Sharma: ಧಾರಾವಾಹಿಯ ಶೂಟಿಂಗ್​ ಸೆಟ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಕಿರುತೆರೆ ನಟಿ
ನಟಿ ತುನಿಷಾ ಶರ್ಮಾ (ಸಂಗ್ರಹ ಚಿತ್ರ)  Image Credit source: timesnownews.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 24, 2022 | 7:51 PM

ಟಿವಿ ಧಾರಾವಾಹಿಯೊಂದರ ಸೆಟ್​ನಲ್ಲಿ ಕಿರುತೆರೆ ನಟಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ‘ಅಲಿಬಾಬಾ ದಸ್ತಾನ್-ಎ-ಕಾಬೂಲ್’ (Ali Baba Ali Baba: Dastaan-E-Kabul) ಧಾರಾವಾಹಿಯ ನಟಿ ತುನಿಷಾ ಶರ್ಮಾ (Tunisha Sharma) (20) ಶನಿವಾರ (ಡಿ.24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ರೀಕರಣ ನಡೆಯುತ್ತಿದ್ದ ಧಾರಾವಾಹಿ ಸೆಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದರೆ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಸದ್ಯ ತುನಿಷಾ ಶರ್ಮಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭಿವಾಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಣ್ಣ ವಯಸ್ಸಿನಲ್ಲೇ ಕೊನೆಯುಸಿರೆಳೆದ ಕಿರುತೆರೆ ನಟಿ

ನಟಿ ತುನಿಷಾ ಶರ್ಮಾ ಅವರು ತಮ್ಮ 20ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ. ತುನಿಷಾ ಶರ್ಮಾ ಅವರು ಬಾಲ ಕಲಾವಿದರಾಗಿ ತಮ್ಮ ಕಲಾ ವೃತ್ತಿಯನ್ನು ಆರಂಭಿಸಿದ್ದರು. ಬಳಿಕ ‘ಭಾರತ್ ಕಾ ವೀರ್ ಪುತ್ರ ಮಹಾರಾಣಾ ಪ್ರತಾಪ್’ ಧಾರಾವಾಹಿ ಮೂಲಕ ಬಾಲಿವುಡ್​ ಕಿರುತೆಗೆ ಪಾದಾರ್ಪಣೆ ಮಾಡಿದ್ದರು.

ತುನಿಷಾ ಶರ್ಮಾ ಅವರ ವೃತ್ತಿಜೀವನ:

ತುನಿಷಾ ಶರ್ಮಾ ಅವರು ಪ್ರಸ್ತುತ ಸೋನಿ ಎಸ್‌ಎಬಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ‘ಅಲಿಬಾಬಾ ದಸ್ತಾನ್-ಎ-ಕಾಬೂಲ್’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಇಂಟರ್ನೆಟ್ ವಾಲಾ ಲವ್’ ಧಾರಾವಾಹಿಯಲ್ಲಿ ಕೂಡ ಅವರ ಪಾತ್ರ ಚೆನ್ನಾಗಿ ಮೂಡಿಬಂದಿತ್ತು. ಕೇವಲ ಧಾರಾವಾಹಿಗಳಲ್ಲಿ ಮಾತ್ರವಲ್ಲದೇ ‘ಫಿತೂರ್’, ‘ಬಾರ್ ಬಾರ್ ದೇಖೋ’, ‘ಕಹಾನಿ 2: ದುರ್ಗಾ ರಾಣಿ ಸಿಂಗ್’, ‘ದಬಾಂಗ್ 3’ ಮುಂತಾದ ಚಿತ್ರಗಳಲ್ಲಿಯೂ ತುನಿಷಾ ಶರ್ಮಾ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಧಾರ್ಮಿಕ ಭಯೋತ್ಪಾದನೆ ತಡೆಗೆ ತೆರಿಗೆ ಹಣ ಬಳಕೆ ಆಗುತ್ತಿದೆ’; ಬೊಬ್ಬೆ ಹೊಡೆದವರಿಗೆ ವಿವೇಕ್ ಅಗ್ನಿಹೋತ್ರಿ ತಿರುಗೇಟು

ವರದಿಗಳ ಪ್ರಕಾರ ನಟಿ ತುನಿಷಾ ಶರ್ಮಾ ತುಂಬಾ ಮೃದು ಸ್ವಭಾವದವರಾಗಿದ್ದು ಮತ್ತು ಸೋಶಿಯಲ್​ ಮೀಡಿಯಾದಲ್ಲಿ ತುಂಬಾ ಸಕ್ರಿಯರಾಗಿದ್ದರು. ಸೆಟ್‌ನಲ್ಲಿ ಸದಾ ಖುಷಿಯಿಂದ ಇರುತ್ತಿದ್ದ ತುನಿಷಾ ಶರ್ಮಾ ಅವರ ಹಠಾತ್​ ಆತ್ಮಹತ್ಯೆಯಿಂದ ಅಭಿಮಾನಿಗಳು ಹಾಗೂ ಕಿರುತೆರೆ ಮಂದಿ ಬೆಚ್ಚಿಬಿದ್ದಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:42 pm, Sat, 24 December 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ