AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ 603 ಕೋಟಿ ರೂಪಾಯಿ ಆಸ್ತಿ ವಿವರ ಬಹಿರಂಗ: ಪತ್ನಿ ಬಳಿ ಎಷ್ಟಿದೆ?

ದಳಪತಿ ವಿಜಯ್ ಅವರು ಪೆರಂಬೂರ್ ಮತ್ತು ತಿರುಚಿ ಈಸ್ಟ್ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ಆಸ್ತಿ ವಿವರವನ್ನು ಸಲ್ಲಿಸಿದ್ದಾರೆ. ಅವರು ನೀಡಿರುವ ಮಾಹಿತಿ ಪ್ರಕಾರ ಬರೋಬ್ಬರಿ 603 ಕೋಟಿ ರೂಪಾಯಿ ಆಸ್ತಿಯನ್ನು ಅವರು ಹೊಂದಿದ್ದಾರೆ. ಯಾವುದೇ ಸಾಲವನ್ನು ಅವರು ಬಾಕಿ ಉಳಿಸಿಕೊಂಡಿಲ್ಲ.

ದಳಪತಿ ವಿಜಯ್ 603 ಕೋಟಿ ರೂಪಾಯಿ ಆಸ್ತಿ ವಿವರ ಬಹಿರಂಗ: ಪತ್ನಿ ಬಳಿ ಎಷ್ಟಿದೆ?
Thalapathy Vijay Image Credit source: PTI
ಮದನ್​ ಕುಮಾರ್​
|

Updated on:Mar 30, 2026 | 8:25 PM

Share

ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಬರೆಯಲು ಹೊರಟಿರುವ ತಮಿಳು ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ, ನಟ ದಳಪತಿ ವಿಜಯ್ (Thalapathy Vijay) ಅವರು ಸೋಮವಾರ (ಮಾರ್ಚ್ 30) ತಮ್ಮ ಮೊದಲ ಚುನಾವಣಾ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಅಫಿಡವಿಟ್‌ನಲ್ಲಿ ಅವರು ಘೋಷಿಸಿಕೊಂಡಿರುವ ಆಸ್ತಿಯ ಮೊತ್ತ ಕೇಳಿ ಅಭಿಮಾನಿಗಳು ಹಾಗೂ ರಾಜಕೀಯ ವಲಯ ದಂಗಾಗಿದೆ. 52 ವರ್ಷ ವಯಸ್ಸಿನ ವಿಜಯ್ ಅವರು ಸುಮಾರು 603.20 ಕೋಟಿ ರೂಪಾಯಿ ಮೌಲ್ಯದ ಒಟ್ಟು ಆಸ್ತಿಯನ್ನು (Thalapathy Vijay Net Worth) ಹೊಂದಿರುವುದಾಗಿ ತಿಳಿಸಿದ್ದಾರೆ.

ವಿಜಯ್ ಅವರ ಒಟ್ಟು ಆಸ್ತಿಯಲ್ಲಿ 404.58 ಕೋಟಿ ರೂಪಾಯಿ ಮೊತ್ತದ ಚರಾಸ್ತಿ ಹಾಗೂ 198.62 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಸೇರಿದೆ. ಕೊಡೈಕೆನಾಲ್‌ನಲ್ಲಿ ಕೃಷಿ ಭೂಮಿ, ಚೆನ್ನೈನ ವಿವಿಧೆಡೆ ವಾಣಿಜ್ಯ ಮಳಿಗೆಗಳು ಮತ್ತು ವಸತಿ ಕಟ್ಟಡಗಳನ್ನು ಅವರು ಹೊಂದಿದ್ದಾರೆ. ಇನ್ನು, ವಿಜಯ್ ಅವರ ಪತ್ನಿ ಸಂಗೀತಾ ಅವರ ಹೆಸರಿನಲ್ಲಿ 15.76 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ.

ವಿಜಯ್ ಅವರು ಐಷಾರಾಮಿ ಜೀವನಶೈಲಿಗೆ ಹೆಸರಾಗಿದ್ದು, ಅವರ ಬಳಿ ಬಿಎಂಡಬ್ಲ್ಯು 530, ಟೊಯೋಟಾ ಲೆಕ್ಸಸ್, ಟೊಯೋಟಾ ವೆಲ್‌ಫೈರ್ ಮತ್ತು ಬಿಎಂಡಬ್ಲ್ಯು ಐ7 ಮುಂತಾದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಕಾರುಗಳಿವೆ. ಅವರ ಕೈಯಲ್ಲಿ 2 ಲಕ್ಷ ರೂ. ನಗದು ಹಾಗೂ ವಿವಿಧ ಬ್ಯಾಂಕ್‌ ಖಾತೆಗಳಲ್ಲಿ 213 ಕೋಟಿ ರೂಪಾಯಿಗೂ ಅಧಿಕ ಠೇವಣಿ ಇದೆ. 883 ಗ್ರಾಂ ಚಿನ್ನ ಮತ್ತು 15 ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳನ್ನು ಅವರು ಘೋಷಿಸಿದ್ದಾರೆ.

ವಿಜಯ್ ಅವರ ಅಫಿಡವಿಟ್‌ನಲ್ಲಿ ಗಮನ ಸೆಳೆದ ಪ್ರಮುಖ ಅಂಶವೆಂದರೆ ಅವರ ಸಾಲದ ವಿವರ. ಇಷ್ಟೊಂದು ದೊಡ್ಡ ಮೊತ್ತದ ಆಸ್ತಿ ಹೊಂದಿದ್ದರೂ ಬ್ಯಾಂಕ್ ಅಥವಾ ಯಾವುದೇ ಹಣಕಾಸು ಸಂಸ್ಥೆಗಳಿಗೆ ಅವರು ಒಂದು ರೂಪಾಯಿ ಕೂಡ ಸಾಲ ಬಾಕಿ ಉಳಿಸಿಕೊಂಡಿಲ್ಲ. 2024-25ರ ಆರ್ಥಿಕ ವರ್ಷದಲ್ಲಿ ಅವರು 184.53 ಕೋಟಿ ರೂಪಾಯಿ ಆದಾಯವನ್ನು ಐಟಿ ರಿಟರ್ನ್ಸ್‌ನಲ್ಲಿ ತೋರಿಸಿದ್ದಾರೆ.

ಇದನ್ನೂ ಓದಿ: ಇಫ್ತಾರ್​​ಕೂಟದಲ್ಲಿ ಭಾಗಿ ಆದ ದಳಪತಿ ವಿಜಯ್; ವಿವಾದದಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ

ವಿಜಯ್ ಅವರು 1992ರಲ್ಲಿ ಚೆನ್ನೈನ ಲೊಯೊಲಾ ಕಾಲೇಜಿನಲ್ಲಿ ಬಿಎಸ್‌ಸಿ ಪದವಿಯನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. 1989 ಮತ್ತು 1991ರಲ್ಲಿ 10 ಮತ್ತು 12ನೇ ತರಗತಿಯನ್ನು ಖಾಸಗಿಯಾಗಿ ಪೂರೈಸಿದ್ದಾರೆ. ಅವರ ಮೇಲೆ ಯಾವುದೇ ಕ್ರಿಮಿನಲ್ ಪ್ರಕರಣಗಳು ಬಾಕಿ ಇಲ್ಲ ಹಾಗೂ ಯಾವುದೇ ಪ್ರಕರಣದಲ್ಲಿ ಶಿಕ್ಷೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮಿಳುನಾಡು ವಿಧಾನಸಭೆಗೆ ಏಪ್ರಿಲ್ 23ರಂದು ಚುನಾವಣೆ ನಡೆಯಲಿದೆ. ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:25 pm, Mon, 30 March 26

Follow Us
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಚಕ್ರದ ಅಡಿಯಲ್ಲಿ ಸಿಲುಕಿದ ಕರು
ಚಕ್ರದ ಅಡಿಯಲ್ಲಿ ಸಿಲುಕಿದ ಕರು
ಮಂಟಪವನ್ನೇ ಹಾರದಂತೆ ತಡೆದವನು ಎಂದಾದರೂ ಪತ್ನಿ ಕೈ ಬಿಡುವುದುಂಟೇ!
ಮಂಟಪವನ್ನೇ ಹಾರದಂತೆ ತಡೆದವನು ಎಂದಾದರೂ ಪತ್ನಿ ಕೈ ಬಿಡುವುದುಂಟೇ!
ಅರಣ್ಯ ಇಲಾಖೆ ಜೀಪನ್ನೇ ಅಟ್ಟಾಡಿಸಿ ಅಟ್ಯಾಕ್ ಮಾಡಿದ ಕಾಡಾನೆ!
ಅರಣ್ಯ ಇಲಾಖೆ ಜೀಪನ್ನೇ ಅಟ್ಟಾಡಿಸಿ ಅಟ್ಯಾಕ್ ಮಾಡಿದ ಕಾಡಾನೆ!