
ನಟಿ ತಮನ್ನಾ ಭಾಟಿಯಾ (Tamanna Bhatia) ಹಾಗೂ ವಿಜಯ್ ವರ್ಮಾ ಅವರು ‘ಲಸ್ಟ್ ಸ್ಟೋರಿಸ್ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದೆ. ರಿಯಲ್ ಲೈಫ್ ಜೋಡಿಗಳಾಗಿರುವ ತಮನ್ನಾ ಹಾಗೂ ವಿಜಯ್ ಈ ಚಿತ್ರದಲ್ಲಿ ಇಂಟಿಮೇಟ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಪರ ವಿರೋಧ ಚರ್ಚೆ ಆಗುತ್ತಿದೆ. ಹೀಗಿರುವಾಗಲೇ ಸ್ವಯಂಘೋಷಿತ ವಿಮರ್ಶಕ ಉಮೈರ್ ಸಂಧು (Umair Sandhu) ಅವರು ತಮನ್ನಾ ಭಾಟಿಯಾ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಈ ಬಗ್ಗೆ ಅನೇಕರಿಂದ ಟೀಕೆ ವ್ಯಕ್ತವಾಗುತ್ತಿದೆ.
ತಮನ್ನಾ ಅವರು ಬಾಲಿವುಡ್ ಹಾಗೂ ದಕ್ಷಿಣ ಭಾರತದಲ್ಲಿ ಸಾಕಷ್ಟು ಬೇಡಿಕೆ ಹೊಂದಿದ್ದಾರೆ. ‘ಬಾಹುಬಲಿ’ ಅಂತಹ ಸಿನಿಮಾಗಳಲ್ಲಿ ನಟಿಸಿ ಅವರು ಯಶಸ್ಸು ಕಂಡಿದ್ದಾರೆ. ಗ್ಲಾಮರ್ ಪಾತ್ರಗಳನ್ನು ಮಾಡೋಕೆ ಅವರು ಎಂದಿಗೂ ಹಿಂಜರಿಯುವುದಿಲ್ಲ. ಈಗ ಅವರು ‘ಲಸ್ಟ್ ಸ್ಟೋರಿಸ್ 2’ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಈಗ ಉಮೈರ್ ಸಂಧು ಅವರು ತಮನ್ನಾ ಹಾಗೂ ವಿಜಯ್ ವರ್ಮಾ ಸಂಬಂಧದ ಬಗ್ಗೆ ಟೀಕೆ ಮಾಡಿದ್ದಾರೆ.
ಈ ಬಗ್ಗೆ ಉಮೈರ್ ಸಂಧು ಟ್ವೀಟ್ ಮಾಡಿದ್ದಾರೆ. ‘ತಮನ್ನಾ ಭಾಟಿಯಾ ಎಲ್ಲಾ ಮಿತಿಗಳನ್ನು ದಾಟುತ್ತಿದ್ದಾರೆ. ಅವಳು ಬ್ಯಾಕ್ ಟು ಬ್ಯಾಕ್ ಅಶ್ಲೀಲ ವೆಬ್ ಸೀರೀಸ್ಗಳಲ್ಲಿ ನಟಿಸುತ್ತಿದ್ದಾರೆ. ಅಡಲ್ಟ್ ಸೀರಿಸ್ ಅವರ ಮೊದಲ ಆಯ್ಕೆ. ಗೆಳೆಯ ವಿಜಯ್ ವರ್ಮಾ ಅವರೊಂದಿಗೆ ಹಗಲು ರಾತ್ರಿ ಸಂಪೂರ್ಣವಾಗಿ ಆನಂದಿಸುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಉಮೈರ್ ಸಂಧು ಹಾಕಿರೋ ಫೋಟೋದಲ್ಲಿ ತಮನ್ನಾ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಎಡಿಟ್ ಮಾಡಿದ ರೀತಿಯಲ್ಲಿ ಕಾಣುತ್ತದೆ. ಅನೇಕರು ಇದೆ ರೀತಿಯ ಅಭಿಪ್ರಾಯ ಹೊರ ಹಾಕಿದ್ದಾರೆ. ಸದ್ಯ ಉಮೈರ್ ಸಂಧು ವಿರುದ್ಧ ಅನೇಕರು ಟೀಕೆ ಹೊರಹಾಕಿದ್ದಾರೆ. ಅವರ ವಿರುದ್ಧ ಕೇಸ್ ಹಾಕಬೇಕು ಎಂದು ಅನೇಕರು ಆಗ್ರಹಿಸಿದ್ದಾರೆ.
ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ಅವರು ತಮ್ಮಿಬ್ಬರ ರಿಲೇಷನ್ಶಿಪ್ ವಿಚಾರದಲ್ಲಿ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಆದರೆ ಪದೇಪದೇ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹಿಂಟ್ ನೀಡಿದ್ದಾರೆ. ಅವರಿಬ್ಬರ ಲವ್ ಸ್ಟೋರಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಅನೇಕ ಹೀರೋಯಿನ್ಗಳು ಬೇಡಿಕೆಯ ಉತ್ತುಂಗದಲ್ಲಿ ಇರುವಾಗಲೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಿಯಾರಾ ಅಡ್ವಾಣಿ, ಆಲಿಯಾ ಭಟ್ ಮುಂತಾದವರೇ ಇದಕ್ಕೆ ಉದಾಹರಣೆ. ಅವರ ಸಾಲಿನಲ್ಲೇ ತಮನ್ನಾ ಭಾಟಿಯಾ ಕೂಡ ಸಾಗಲಿದ್ದಾರೆ ಎಂಬ ಮಾತು ಕೇಳಿ ಬಂದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ